ನೀರಾವರಿಗೆ 220 ಕೆವಿ ಸ್ಟೇಷನ್‌ ಪೂರಕ

Team Udayavani, Oct 30, 2020, 6:29 PM IST

ನೀರಾವರಿಗೆ 220 ಕೆವಿ ಸ್ಟೇಷನ್‌ ಪೂರಕ

ಯಲಬುರ್ಗಾ: ಪಟ್ಟಣದಲ್ಲಿ ಒಂದೂವರೆ ವರ್ಷದೊಳಗೆ 220 ಕೆವಿ ವಿದ್ಯುತ್‌ ಸ್ಟೇಷನ್‌ ನಿರ್ಮಾಣವಾಗಲಿದ್ದು, ವಿದ್ಯುತ್‌ ಸ್ಟೇಷನ್‌ ನಿಂದ ಜಾರಿಯಾಗಲಿರುವ ನೀರಾವರಿ ಯೋಜನೆಗೆ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.

ತಾಲೂಕಿನ ಬೇವೂರು ಗ್ರಾಮದಲ್ಲಿ ಗುರುವಾರ ನೂತನ 110 ಕೆವಿ ಸ್ಟೇಷನ್‌ ಲೋರ್ಕಾಪಣೆಗೊಳಿಸಿ ಅವರುಮಾತನಾಡಿದರು. ಈಗಾಗಲೇ 12 ಎಕರೆ ಜಮೀನು ಖರೀದಿ ಮಾಡಲಾಗಿದೆ. ಟೆಂಡರ್‌ ಪ್ರಕ್ರಿಯೆ ಹಂತದಲಿದ್ದು ಶೀಘ್ರದಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು 220 ಕೆವಿ ಸ್ಟೇಷನ್‌ ನಿರ್ಮಾಣವಾಗಲಿದೆ. ಇದು ಜಿಲ್ಲೆಯಲ್ಲೇ ದೊಡ್ಡದಾದ ವಿದ್ಯುತ್‌ ಪ್ರಸರಣ ಘಟಕವಾಗಿದೆ. ಈಗಾಗಲೇ ತಾಲೂಕಿನ ಗಾಣಧಾಳ, ಬೇವೂರು, ವಜ್ರಬಂಡಿ, ಹಿರೇವಂಕಲಕುಂಟಾ, ಬಂಡಿ, ಹಿರೇಮ್ಯಾಗೇರಿ ಗ್ರಾಮಗಳಲ್ಲಿದ್ದ 30 ಕೆವಿ ಸ್ಟೇಷನ್‌ಗಳನ್ನು 110 ಕೆವಿ ಸ್ಟೇಷನ್‌ಗಳನ್ನಾಗಿ ಪರಿವರ್ತಿಸಿ ಮೇಲ್ದರ್ಜೆಗೇರಿಸಲಾಗಿದೆ. ಇದರಿಂದ ರೈತರಿಗೆ, ಗ್ರಾಹಕರಿಗೆ ಯಾವುದೇ ವಿದ್ಯುತ್‌ ಸಮಸ್ಯೆಯಾಗುವುದಿಲ್ಲ ಎಂದರು.

ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ತಾಲೂಕಿಗೆ ನೀರು ತಂದೆ ತರುತ್ತೇನೆ ಎಂಬ ಆತ್ಮವಿಶ್ವಾಸವಿದೆ. ಕೋವಿಡ್‌, ಅತಿವೃಷ್ಟಿಯಿಂದ ಸರಕಾರದಲ್ಲಿಹಣದ ಸಮಸ್ಯೆ ಇದ್ದು, ಸ್ವಲ್ಪ ಅಭಿವೃದ್ಧಿ ಕಾಮಗಾರಿಗಳಿಗೆ ವಿಳಂಬವಾಗಿದೆ ಎಂದರು.

ಒಟ್ಟಾರೆಯಾಗಿ ರೈತರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳುಶ್ರಮಿಸುತ್ತಿದ್ದೇನೆ. ಮಾತು ಕಡಿಮೆ ಕೆಲಸ ಜಾಸ್ತಿ ಮಾಡುತ್ತೇನೆ. ವಿನಾಕಾರಣ ಮಾತನಾಡುವುದಿಲ್ಲ. ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್‌ ಕೊಡುಗೆ ಶೂನ್ಯವಾಗಿದೆ ಎಂದರು. ಮುನಿರಬಾದ್‌ ಜೆಸ್ಕಾಂ ಅಧಿಧೀಕ್ಷಕ ಪ್ರಹ್ಲಾದ ಮಾತನಾಡಿ, ಶಾಸಕ ಹಾಲಪ್ಪ ಆಚಾರ ಅವರು ರೈತರ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ತಾಲೂಕಿನ ರೈತರಿಗೆ ಗುಣಮಟ್ಟದ ಹಾಗೂನಿರಂತರ ವಿದ್ಯುತ್‌ ಪೂರೈಸುವಂತೆ ನಮಗೆ ಸೂಚಿಸಿದ್ದಾರೆ ಎಂದರು.

ಜಿಪಂ ಸದಸ್ಯೆ ಪ್ರೇಮಾ ಕುಡಗುಂಟಿ, ತಾಪಂ ಸದಸ್ಯ ಶಂಕರಗೌಡ ಟಣಕನಕಲ್‌, ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ವೀರಣ್ಣ ಹುಬ್ಬಳ್ಳಿ, ಸಿದ್ದು ಮಣ್ಣಿನವರ, ಕಳಕಪ್ಪ ತಳವಾರ, ಬಾಪುಗೌಡ ಪಾಟೀಲ, ಅಯ್ಯನಗೌಡ ಕೆಂಚಮ್ಮನವರ, ಶಿವಪ್ಪವಾದಿ, ಮಂಜುನಾಥ ಗಟ್ಟೆಪ್ಪನವರ, ಇಒ ಜಯರಾಮ್‌, ಗುತ್ತಿಗೆದಾರ ಅದ್ವೀಕ, ಜೆಸ್ಕಾಂನ ಎಂ.ಎಸ್‌. ಪತ್ತಾರ, ಫಣಿರಾಜ್‌, ಆದೇಶ ಹುಬ್ಬಳ್ಳಿ, ಸಿಪಿಐ ಎಂ. ನಾಗರಡ್ಡಿ, ಶರಣು, ಮಂಜುನಾಥ, ಮುಖಂಡರು ಹಾಗೂ ಇತರರು ಇದ್ದರು.

ಬೇವೂರು ಹೋಬಳಿ ಕೇಂದ್ರಕ್ಕೆ ಪ್ರಯತ್ನ :  ತಾಲೂಕಿನಲ್ಲೇ ಅತೀ ದೊಡ್ಡದಾದ ಗ್ರಾಮ ಬೇವೂರನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸುವಂತೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ. ಮುಖ್ಯಮಂತ್ರಿಗಳು ಸ್ಪಂದಿಸಿ ಕಂದಾಯ ಇಲಾಖೆಗೆ ಸೂಚಿಸಿದ್ದಾರೆ. ಬೇವೂರು ನನ್ನ ನೆಚ್ಚಿನ ಗ್ರಾಮ ಬೇವೂರು ಗ್ರಾಮಕ್ಕೆ ಸಿಸಿ ರಸ್ತೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಿದ್ದೇನೆ ಹಾಲಪ್ಪ ಆಚಾರ, ಶಾಸಕ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.