ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ
Team Udayavani, Jul 16, 2020, 6:12 PM IST
ಕೊಪ್ಪಳ: ಜಿಲ್ಲೆಯಲ್ಲಿ ಗುರುವಾರ ಬರೋಬ್ಬರಿ 48 ಜನರಿಗೆ ಕೋವಿಡ್-19 ಸೋಂಕು ದೃಢ ಪಟ್ಟಿದೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 400 ಗಡಿ ದಾಟಿದೆ.
ಜಿಲ್ಲೆಯಲ್ಲಿ ಬುಧವಾರದ ಅಂತ್ಯಕ್ಕೆ 368 ಜನರಿಗೆ ಸೋಂಕು ದೃಢಪಟ್ಟಿತ್ತು. ಗುರುವಾರ ಮತ್ತೆ 48 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 416ಕ್ಕೆ ಏರಿಕೆಯಾದಂತಾಗಿದೆ. ಇದು ಜಿಲ್ಲೆಯ ಜನರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ.
ಇಂದು 20 ಜನರು ಆಸ್ಪತ್ರೆಗೆ ದಾಖಲಾಗಿದ್ದು, 28 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೆ ಈ ವರೆಗೂ ಆಸ್ಪತ್ರೆಯಿಂದ 210 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 9 ಜನರು ಸೋಂಕಿನಿಂದ ಬಳಲಿ ಮೃತಪಟ್ಟಿದ್ದರೆ, ಉಳಿದ ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯಲ್ಲಿ ಇನ್ನೂ 925 ಜನರ ಸ್ವಾಬ್ ವರದಿ ಬರುವುದು ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು
ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಭಾರತದಲ್ಲಿ 24ಗಂಟೆಯಲ್ಲಿ 2,364 ಕೋವಿಡ್ ಸೋಂಕು ಪ್ರಕರಣ ದೃಢ, ಹತ್ತು ಮಂದಿ ಸಾವು
ರಾಜ್ಯದಲ್ಲಿ 98 ಮಂದಿಗೆ ಕೋವಿಡ್ ಸೋಂಕು ದೃಢ