ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ: ದಾಖಲೆ ಪರಿಶೀಲನೆ

Team Udayavani, Nov 8, 2019, 11:32 AM IST

ಗಂಗಾವತಿ: ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ತಡರಾತ್ರಿಯವರೆಗೆ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಎಸಿಬಿ ಡಿವೈಎಸ್ ಪಿ ರುದ್ರೇಶ ಉಜ್ಜನಕೊಪ್ಪ ನೇತೃತ್ವದ ಸುಮಾರು 10 ಕ್ಕು ಹೆಚ್ಚು ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡು ದಾಖಲೆ ಪರಿಶೀಲನೆ ನಡೆಸಿದರು.

ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕೆಲಸ ವಿಳಂಬ ಹಾಗೂ ಲಂಚಕ್ಕಾಗಿ ಕೆಲಸ ವಿಳಂಬ ಮಾಡಲಾಗುತ್ತಿದೆ ಎಂದು ಹಲವು ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಗುರುವಾರ ಮಧ್ಯಾಹ್ನ 3.30 ಗಂಟೆಯಿಂದ ದಾಳಿ ನಡೆದಿದ್ದು ನೋಂದಣಿ ಸೇರಿ ವಿವಿಧ ಕೆಲಸದ ಮೇಲೆ ಸಬ್ ರಿಜಿಸ್ಟ್ರಾರ್ ಕಚೇರಿಗೆ ಆಗಮಿಸಿದ ಸಾರ್ವಜನಿಕರನ್ನು ಬಾಗಿಲು ಮುಚ್ಚಿ ತಡರಾತ್ರಿವರೆಗೂ ಹೊರಗೆ ಬಿಡದೇ ಅಧಿಕಾರಿಗಳು ಸತಾಯಿಸಿದ ಪ್ರಸಂಗವೂ ಜರುಗಿದೆ. ತಡರಾತ್ರಿ ವರೆಗೆ ದಾಳಿ ನಡೆಸಿದ ಅಧಿಕಾರಿಗಳು ಪತ್ರಿಕಾ ಮಾಧ್ಯಮ ದವರಿಗೆ ಸೂಕ್ತ ಮಾಹಿತಿ‌ ನೀಡದೇ ಇರುವುದು ಕಂಡುಬಂದಿದೆ.

ದಾಖಲಾಗದ ದೂರು: ಸುಮಾರು10 ತಾಸಿಗೂ ಅಧಿಕ ಸಮಯದಲ್ಲಿ ಇಲ್ಲಿಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ತನಿಖೆ ಮಾಡಿದ ಎಸಿಬಿ ಅಧಿಕಾರಿಗಳು ಯಾವುದೇ ದೂರು ದಾಖಲಿಸಿಲ್ಲ ಪಂಚನಾಮೆ ಮಾಡಿ ಕೈತೊಳೆದುಕೊಂಡಿದ್ದಾರೆ ಎನ್ನಲಾಗುತ್ತಿದ್ದು ದೂರು ದಾಖಿಸಿದ ಕುರಿತು ನಂತರ ಮಾಹಿತಿ ನೀಡಲಾಗುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಯಲಬುರ್ಗಾ: ಬೆಂಗಳೂರಿನಲ್ಲಿ ನಡೆದ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಹೋರಾಟದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ದೇಶ ದ್ರೋಹಿ ಯುವತಿ ಅಮೂಲ್ಯ ಹಾಗೂ ಅರ್ದ್ರಾ ವಿರುದ್ಧ...

  • ಗಂಗಾವತಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಒಂದಿಲ್ಲೊಂದು ಸಂಕಷ್ಟ ಎದುರಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ನಾಲ್ಕೈದು ವರ್ಷಗಳಿಂದ ಮಳೆ ಕೊರತೆ,...

  • ಕೊಪ್ಪಳ: ಪಾಕಿಸ್ತಾನ್‌ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಗರದ ಅಶೋಕ ವೃತ್ತದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು...

  • ಕಾರಟಗಿ: ಗ್ರಾಪಂನಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದರೂ ಪಟ್ಟಣದ ಕೆಲ ವಾರ್ಡ್‌ ಗಳಲ್ಲಿ ಮೂಲಸೌಕರ್ಯ ಇಲ್ಲದಂತಾಗಿವೆ. ಪಟ್ಟಣದ 2 ಮತ್ತು 3ನೇ ವಾರ್ಡ್‌ನಲ್ಲಿ ಕುಡಿವ...

  • ಗಂಗಾವತಿ: ಮಿನಿಗೋವಾ, ದೇಶ ವಿದೇಶದ ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದ ಹಂಪಿ ಸಮೀಪದಲ್ಲಿರುವ ತಾಲೂಕಿನ ವಿರೂಪಾಪೂರಗಡ್ಡಿ ಸಂಪೂರ್ಣ ಖಾಲಿ ಖಾಲಿಯಾಗಿದ್ದು,...

ಹೊಸ ಸೇರ್ಪಡೆ