ಸೋಲು-ಗೆಲುವು ಸಮನಾಗಿ ಸ್ವೀಕರಿಸಿ

•ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಿ•ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

Team Udayavani, Aug 11, 2019, 1:09 PM IST

ಕನಕಗಿರಿ: ಪಟ್ಟಣದ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ ನೀಡಿದರು.

ಕನಕಗಿರಿ: ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಲ್ಲವನ್ನು ಸಂತೋಷದಿಂದ ಎದುರಿಸಬೇಕು ಎಂದು ತಹಶೀಲ್ದಾರ್‌ ರವಿ ಅಂಗಡಿ ಹೇಳಿದರು.

ಪಟ್ಟಣದ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ನಡೆದ ಕನಕಗಿರಿ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣದ ಜೊತೆಗೆ ದೈಹಿಕ ಸದೃಢತೆಗೆ ಕ್ರೀಡೆಯೂ ಅತ್ಯವಶ್ಯಕವಾಗಿದೆ. ಕೇವಲ ಓದಿನಿಂದ ಎಲ್ಲವನ್ನು ಸಾಸಲು ಸಾಧ್ಯವಿಲ್ಲ. ಅದರ ಜೊತೆಗೆ ದೈಹಿಕ ಸಾಮರ್ಥ್ಯ, ಹೊರ ಪ್ರಪಂಚದ ಜ್ಞಾನವಿದ್ದಾಗ ಪರಿಪಕ್ವವಾದ ವಿದ್ಯಾರ್ಥಿಯಾಗಲು ಸಾಧ್ಯ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಕ್ರೀಡೆ ಅತ್ಯಗತ್ಯ. ಗ್ರಾಮೀಣ ಮಟ್ಟದ ಕ್ರೀಡೆಗಳಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಕ್ರೀಡಾ ಪಟುಗಳು ಬೆಳೆಯಲು ಈ ಕ್ರೀಡಾಕೂಟ ಸಹಕಾರಿ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಜಿಪಂ ಸದಸ್ಯೆ  ಲಕ್ಷ್ಮಮ ನೀರಲೂಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕೇಸರಹಟ್ಟಿ, ಹೀರೆಖೇಡಾ, ಗೌರಿಪುರ, ಮುಸಲಾಪುರ, ಹುಲಿಹೈದರ್‌, ಕಲಿಕೇರಿ ಸೇರಿದಂತೆ ವಲಯ ವ್ಯಾಪ್ತಿಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಜಿಪಂ ಸದಸ್ಯೆ ಭಾಗ್ಯವತಿ, ಪ್ರಾಂಶುಪಾಲ ಬಸವರಾಜ ಬಡಿಗೇರ, ಉಪ ತಹಶೀಲ್ದಾರ್‌ ವಿಶ್ವೇಶ್ವರಯ್ಯಸ್ವಾಮಿ, ಸಿಆರ್‌ಪಿ ಸಂಗಮೇಶ ಹಿರೇಮಠ, ಪ್ರಮುಖರಾದ ಸಣ್ಣ ಕನಕಪ್ಪ, ದೈಹಿಕ ಶಿಕ್ಷಕರು, ವಿವಿಧ ಶಾಲೆ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ