ಹಲವು ಸಮಸ್ಯೆಗಳ ಅಹವಾಲು-ಪರಿಹಾರಕ್ಕೆ ಕ್ರಮ

ತುಗ್ಗಲ ದೋಣಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ; ಅಧಿಕಾರಿಗಳ ಎದುರು ಸಮಸ್ಯೆ ಬಿಚ್ಚಿಟ್ಟ ಸಾರ್ವಜನಿಕರು

Team Udayavani, Jun 19, 2022, 5:26 PM IST

18

ಹನುಮಸಾಗರ: ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬೇಕು. ಈ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳ್ಕರ್‌ ಹೇಳಿದರು.

ಹನುಮಸಾಗರ ಸಮೀಪದ ತುಗ್ಗಲದೋಣಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಯೋಜನೆಯಡಿ ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮದ ಯುವಕರು, ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ನಮ್ಮ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದಾರೆ. ಆದ್ದರಿಂದ ಗ್ರಾಮೀಣ ಭಾಗದ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ನಿಗಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಮಾತನಾಡಿ, ಶಿಕ್ಷಕರ ಸಮಸ್ಯೆ ಇದು ಎಲ್ಲೆಡೆ ಇರುವಂತಹದ್ದು. ಮಕ್ಕಳ ಸಂಖ್ಯೆಗಳಿಗೆ ತಕ್ಕಂತೆ ಶಾಲೆಗಳಲ್ಲಿ ಈಗಾಗಲೇ ಅಥಿತಿ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಆದರೂ ಶಿಕ್ಷಕರ ಸಮಸ್ಯೆ ಉಂಟಾದಲ್ಲಿ ನಿಮ್ಮ ಗ್ರಾಮದಲ್ಲಿರುವ ಪದವೀಧರರ ಪಟ್ಟಿ ಮಾಡಿ ಅವರೊಟ್ಟಿಗೆ ಮಕ್ಕಳಿಗೆ ಸಂಜೆ ಪಾಠ ಮಾಡಿಸಲು ವ್ಯವಸ್ಥೆ ಮಾಡಿಸಬೇಕು. ಅವರಿಗೆ ಗ್ರಾಪಂನ ತೆರಿಗೆ ಹಣದಲ್ಲಿ ಗೌರವಧನ ನೀಡಲು ಕ್ರಮ ಕೈಗೊಳ್ಳಬೇಕು. ಇದರಿಂದಾಗಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯ ಜತೆಗೆ ಪದವೀಧರರಿಗೆ ಕೆಲಸ ನೀಡಿದಂತಾಗುತ್ತದೆ ಎಂದು ಹೇಳಿದರು.

ಗ್ರಾಮದಲ್ಲಿ ರಾತ್ರಿ ವೇಳೆಯಲ್ಲಿ ವಿದ್ಯುತ್‌ ಸಂಪರ್ಕವಿಲ್ಲದಿರುವುದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ಆದ್ದರಿಂದ ಜಮೀನುಗಳಿಗೆ 24 ಗಂಟೆಗಳ ನಿರಂತರ ತ್ರೀ ಪೇಸ್‌ ವಿದ್ಯುತ್‌ ಸರಬರಾಜಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಜನರು ಮನವಿ ಮಾಡಿದರು.

ಜಿಲ್ಲಾಧಿಕಾರಿಯವರು ವಿದ್ಯುತ್‌ ಸಂಬಂಧಿಸಿದಂತೆ ಜೆಸ್ಕಾಂ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

ಪಡಿತರ ಕೇಂದ್ರದ ಪರವಾನಗಿ ರದ್ದತಿಗೆ ಕ್ರಮ: ಗ್ರಾಮಸ್ಥರು ನಮ್ಮ ಗ್ರಾಮದಲ್ಲಿ ಪಡಿತರ ಹಂಚುವಾಗ ಪ್ರತಿಯೊಬ್ಬರಿಂದ ತಲಾ ಹತ್ತು ರೂ. ಹೆಚ್ಚುವರಿಯಾಗಿ ಕೊಟ್ಟರೆ ಮಾತ್ರ ನಮಗೆ ಪಡಿತರ ನೀಡುತ್ತಾರೆ ಎಂದು ಜನರು ಆರೋಪಿಸಿದರು. ಇದಕ್ಕೆ ಆಹಾರ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜು ನಾಯಕ ಈ ಬಗ್ಗೆ ಕುಲಂಕುಷವಾಗಿ ಪರಿಶೀಲಿಸಿ ಅವರನ್ನು ಅಮಾನತು ಮಾಡಿ ಪಡಿತರ ಕೇಂದ್ರದ ಪರವಾನಗಿ ರದ್ದು ಮಾಡಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಲಂಚ ಆರೋಪ: ನಮ್ಮ ಪಂಚಾಯತನಲ್ಲಿ ಬಡವರು ಮನೆ ಕೇಳಿದರೆ ಪಿಡಿಒ 30 ಸಾವಿರ ರೂ. ಲಂಚ ಕೇಳುತ್ತಾರೆ. ಲಂಚ ಕೊಟ್ಟರೆ ಮಾತ್ರ ಮನೆ ನೀಡುವುದಾಗಿ ಹೇಳುತ್ತಾರೆ ಎಂದು ಸಾರ್ವಜನಿಕರು ಆರೋಪಿಸಿದರು. ಜಿಲ್ಲಾಧಿಕಾರಿಗಳು ನೀವು ಮೊದಲು ಲಂಚ ನೀಡುವುದು ತಪ್ಪು. ಲಂಚ ಕೇಳಿದ ಬಗ್ಗೆ ಸೂಕ್ತ ದಾಖಲೆ ಅಥವಾ ತಾಲೂಕು ಅಧಿಕಾರಿಗಳ ಗಮನಕ್ಕೆ ತರಬೇಕು. ಅದು ಬಿಟ್ಟು ನೀವೆ ಲಂಚ ನೀಡಿದ್ದೇವೆ ಎಂದು ಹೇಳಿದರೆ ಹೇಗೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಅರ್ಜಿ ಸಲ್ಲಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಗ್ರಾಮದಲ್ಲಿ ಮನೆ ಕಟ್ಟುವುದು ನಮಗೆ ದೊಡ್ಡ ತಲೆ ನೋವಾಗಿದೆ. ನಮ್ಮ ಗ್ರಾಮದ ಸುತ್ತಮುತ್ತಲಿನ ಕೆರೆ ಕಟ್ಟೆಗಳಲ್ಲಿ ಇರುವ ಮರಳು ಮತ್ತು ಮನೆ ಕಟ್ಟಲು ಕಲ್ಲನ್ನು ತರುವುದು ಸಮಸ್ಯೆಯಾಗಿದೆ. ಮರಳು ಮತ್ತು ಕಲ್ಲನ್ನು ತರಲು ಹೋದರೆ ಪೊಲೀಸರು ಹಿಡಿದು ದಂಡ ಹಾಕುತ್ತಾರೆ. ಹಾಗಾದರೆ ನಾವು ಮನೆ ಕಟ್ಟುವುದೇ ಬೇಡವಾ ಎಂದು ಜಿಲ್ಲಾಧಿಕಾರಿಯವರನ್ನು ಪ್ರಶ್ನಿಸಿದರು.

ಜಿಲ್ಲಾಧಿಕಾರಿ ಮಾತನಾಡಿ, ಎಲ್ಲಿ ಹಳ್ಳದಲ್ಲಿ ಮರಳು ಇದೆ ಅಲ್ಲಿ ಪಂಚಾಯತನಿಂದ ಮರಳು ತೆಗೆಯಲು ಅವಕಾಶವಿದೆ. ಪಂಚಾಯತನವರಿಗೆ ಪರವಾನಗಿ ನೀಡುತ್ತೇವೆ. ಪಂಚಾಯತನವರು ಮರಳು ಪಾಯಿಂಟ್‌ ಮೂಲಕ ಟ್ರ್ಯಾಕ್ಟರ್‌ ಮೂಲಕ ಯಾವುದೇ ವಾಹನದ ವ್ಯವಸ್ಥೆ ಹೊಂದಿದವರಿಗೆ ರಾಯಲ್ಟಿ ಕಟ್‌ ಮಾಡಿಕೊಂಡು ಮರಳು ಸರಬರಾಜು ಮಾಡುತ್ತಾರೆ ಎಂದು ಹೇಳಿದರು.

ಶಾಸಕ ಅಮರೇಗೌಡ ಬಯ್ನಾಪುರ ಮಾತನಾಡಿ, ಸಾರ್ವಜನಿಕರ ಸಹಕಾರದಿಂದ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಆದ್ದರಿಂದ ಮಕ್ಕಳನ್ನು ಹೊಲ ಮನೆ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದರು.

ಗ್ರಾಮದ ವಿವಿಧ ಕಡೆಗಳಲ್ಲಿ ಸಂಚರಿಸಿ ಗ್ರಾಮದ ಕುಂದುಕೊರತೆಗಳ ಕುರಿತು ಪರಿಶೀಲಿಸಿದರು. ಎಸಿ ಬಸಟ್ಟೆಪ್ಪ ಹಾಗೂ ತಾಪಂ ಇಒ ಶಿವಪ್ಪ ಸುಭೇದಾರ, ತಹಶೀಲ್ದಾರ್‌ ಸಿದ್ದೇಶ, ಗ್ರಾಮ ಲೆಕ್ಕಾಧಿಕಾರಿ ಶರಣಪ್ಪ ಹುಡೇದ, ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.