ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಿ

Team Udayavani, Mar 16, 2021, 6:00 PM IST

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಿ

ಕೊಪ್ಪಳ: ಅಂಗನವಾಡಿ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಅಂತಿಮ ಬಜೆಟ್‌ನಲ್ಲಾದರೂ ಬೇಡಿಕೆ ಈಡೇರಿಸಿ ಕ್ರಮ ಕೈಗೊಳ್ಳಲಿ ಎಂದು ಅಂಗನವಾಡಿ ನೌಕರರ ಸಂಘ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಕೋವಿಡ್‌ ಸಂದರ್ಭದಲ್ಲಿ ಅಂಗನವಾಡಿ ನೌಕರರು ಕಷ್ಟಪಟ್ಟು, ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆದರೆ ಅವರ ಬೇಡಿಕೆಗಳ ಬಗ್ಗೆ ಸರ್ಕಾರವು ಸಕಾರಾತ್ಮಕ ಸ್ಪಂದಿಸಿಲ್ಲ. ಬಜೆಟ್‌ ಪೂರ್ವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ನೌಕರರಿಗೆ ಸೇವಾ ಜೇಷ್ಠತೆ ಆಧಾರದಲ್ಲಿ 153.25 ಕೋಟಿ, ಮಿನಿ ಅಂಗನವಾಡಿ ಕೇಂದ್ರಗಳ ಸಹಾಯಕಿ ನೇಮಕಾತಿಗೆ 6.99 ಕೋಟಿ, ಅಂಗನವಾಡಿ ಸಹಾಯಕಿಯರಿಗೆ ಸಂಬಳದ ವ್ಯತ್ಯಾಸ ಮೊತ್ತ 131.42 ಕೋಟಿ ನಿವೃತ್ತಿ ಸೌಲಭ್ಯ 47.82 ಕೋಟಿ ಸೇರಿದಂತೆ ಒಟ್ಟು 339.48 ಕೋಟಿ ರೂ. ಅನುದಾನ ನೀಡಲು ಶಿಫಾರಸ್ಸು ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಮೂರು ಶಿಫಾರಸ್ಸನ್ನು ಪರಿಗಣಿಸಿಲ್ಲ. 2016ರಿಂದ 7304 ಮಹಿಳೆಯರು ನಿವೃತ್ತಿಯಾಗಿದ್ದಾರೆ. ಅವರಿಗೆ ಇಡಿಗಂಟು ಕೂಡ ನೀಡಿಲ್ಲ. ಬಜೆಟ್‌ ಪೂರ್ವದಲ್ಲಿ ಅಂಗನವಾಡಿ ನೌಕರರು ಅ ಧಿವೇಶನ ಚಲೋ ನಡೆಸಿದಾಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೇಡಿಕೆ ಈಡೇರಿಸುವ ಕುರಿತು ಭರವಸೆ ನೀಡಿದ್ದರು. ಆದರೆ ಬಜೆಟ್‌ನಲ್ಲಿ ಮಹಿಳೆಯರಿಗೆ ಆದ್ಯತೆ ಎನ್ನುವ ಮೊದಲ ಪ್ಯಾರಾ ಬಿಟ್ಟರೆ ಮತ್ತ್ಯಾವ ಯೋಜನೆಗಳೂ ಇಲ್ಲ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸಂಘಟಕ ಸುಂಕಪ್ಪ ಗದಗ, ಖಾಸಿಂ ಸರದಾರ ಸೇರಿ ಇತರರು ಪಾಲ್ಗೊಂಡಿದ್ದರು.

ಬೇಡಿಕೆ ಈಡೇರಿಕೆಗೆ ಮನವಿ :  

ಕನಕಗಿರಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕನಕಗಿರಿ ತಾಲೂಕು ಅಂಗನವಾಡಿ ನೌಕರರ ಸಂಘ (ಸಿಐಟಿಯು) ಪದಾಧಿಕಾರಿಗಳು ಸೋಮವಾರ ಪಟ್ಟಣದ ಶಿಶು ಅಭಿವೃದ್ಧಿ ಕಾರ್ಯಾಲಯ ಮುಂದೆ ಧರಣಿ ನಡೆಸಿದರು.

ಬಳಿಕ ಕನಕಗಿರಿ ತಾಲೂಕು ಅಂಗನವಾಡಿ ನೌಕರರ ಸಂಘ(ಸಿಐಟಿಯು) ಅಧ್ಯಕ್ಷೆ ಅಮರಮ್ಮ ಯರಡೋಣಾ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಕೊರೊನಾ ಎಂಬ ಮಾಹಾಮಾರಿ ಸಮಯದಲ್ಲಿ ತಮ್ಮ ಪ್ರಾಣ ಒತ್ತೆ ಇಟ್ಟು ಕೆಲಸ ಮಾಡಿದ್ದಾರೆ. ಸರಿಯಾಗಿ ಭದ್ರತೆ ಇಲ್ಲದೇ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಬಜೆಟ್‌ ನಲ್ಲಿ ಅಂಗನವಾಡಿ ನೌಕರರಿಗೆ ನೀಡಿದ ಭರವಸೆಗಳನ್ನು ಘೋಷಣೆ ಮಾಡುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ರಾಜ್ಯ ಸರ್ಕಾರ ಅಂಗನವಾಡಿ ನೌಕರರನ್ನು ಕಡೆಗಣಿಸಿದೆ. ಸಂಘಟನೆಯಿಂದ ರಾಜ್ಯಾದ್ಯಂತ ಎಲ್ಲ ತಾಲೂಕು ಕೇಂದ್ರಗಳಲ್ಲಿ ಒಂದು ದಿನದ ಧರಣಿ ಹಮ್ಮಿಕೊಂಡಿದ್ದು, ಕೂಡಲೇ ಸರ್ಕಾರ ಅಂಗನವಾಡಿ ನೌಕರರ ಬೇಡಿಕೆ ಈಡೇರಿಸಬೇಕೆಂದರು.

ಸಂಘ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಸಜ್ಜನ್‌, ಖಜಾಂಚಿ ಅನುಸೂಯ, ಪದಾ ಧಿಕಾರಿಗಳಾದ ಸಿದ್ಧಲಿಂಗಮ್ಮ ಕಾರಟಗಿ, ಸವಿತಾ ಸಿದ್ದಾಪುರ, ಶರಣಮ್ಮ ಚಳ್ಳೂರು, ಲಲಿತಾ ಸಿದ್ದಾಪುರ, ವಿಜಯಲಕ್ಷ್ಮೀ ಉಳಿRಹಾಳ ಕ್ಯಾಂಪ್‌, ಗಂಗಮ್ಮ ದುಂಡಗಿ, ಬಿ. ಅನುಸೂಯಾ ನವಲಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.