
ಅಂಜನಾದ್ರಿ ಬೆಟ್ಟ ಹತ್ತುವ ವೇಳೆ ಹೃದಯಾಘಾತ: ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು
ಅಂಜನಾದ್ರಿಯಲ್ಲಿ ಆಸ್ಪತ್ರೆ ಸ್ಥಾಪಿಸುವಂತೆ ಆಗ್ರಹ
Team Udayavani, Mar 28, 2023, 7:16 PM IST

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟ ಹತ್ತುವಾಗ ಯುವಕನೋರ್ವ ಹೃದಯಘಾತ ಸಂಭವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗಿದೆ ಕೊನೆಯುಸಿರೆಳೆದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ವಿರೇಶ ತಂದೆ ನಿಂಗಪ್ಪ(24) ಕುಷ್ಟಗಿ ತಾಲೂಕಿನ ವಣಗೇರಿ ಗ್ರಾಮದ ನಿವಾಸಿಯಾಗಿದ್ದು ತನ್ನ ನಾಲ್ವರ ಗೆಳೆಯರ ಜತೆ ಅಂಜನಾದ್ರಿ ದರ್ಶನಕ್ಕೆ ಆಗಮಿಸಿದ್ದರು. ಮಧ್ಯಾಹ್ನ ಗೆಳೆಯರ ಜತೆ ಬೆಟ್ಟ ಹತ್ತುವ ಸಂದರ್ಭದಲ್ಲಿ ಮೂರ್ಛೆ ಬಂದು ಮೆಟ್ಟಿಲು ಮೇಲೆ ಬಿದ್ದಾಗ ಜತೆಗಿದ್ದವರು ದೇವಸ್ಥಾನ ಸಿಬ್ಬಂದಿ ಆಟೋ ಮೂಲಕ ಆನೆಗೊಂದಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಅಂಜನಾದ್ರಿಯಲ್ಲಿ ಆಸ್ಪತ್ರೆ ಸ್ಥಾಪಿಸುವಂತೆ ಆಗ್ರಹ: ದೇಶ ವಿದೇಶದ ನೂರಾರು ಪ್ರವಾಸಿಗರು ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಪ್ರತಿನಿತ್ಯವೂ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಅವರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಅಂಜನಾದ್ರಿ ಬೆಟ್ಟದ ಕೆಳಗೆ ಕೂಡಲೇ ಸರ್ಕಾರಿ ಸೂಸಜ್ಜಿತವಾದ ಆಸ್ಪತ್ರೆಯನ್ನು ಆರಂಭಿಸುವಂತೆ ಸ್ಥಳೀಯರು ಜಿಲ್ಲಾಡಳಿತನು ಒತ್ತಾಯಿಸಿದ್ದಾರೆ. ಈಗಾಗಲೇ ಇಲ್ಲಿಗೆ ಬಂದ ಕೆಲವರು ಅನಾರೋಗ್ಯ ಪೀಡಿತರಾಗಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಅನಾರೋಗ್ಯ ಪೀಡಿತರಾಗಿದ್ದಾರೆ ಆದ್ದರಿಂದ ಇವರೆಲ್ಲ ಚಿಕಿತ್ಸೆ ನೀಡಲು ಕೂಡಲೇ ಆಸ್ಪತ್ರೆಯನ್ನು ಆರಂಭಿಸಬೇಕು. ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಾಂತರ ಖರ್ಚು ಮಾಡುವ ಸರಕಾರ ಇಲ್ಲಿಗೆ ಬರುವ ಭಕ್ತರಿಗೆ ಆಸ್ಪತ್ರೆಯನ್ನು ಆರಂಭಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
