Anjeyanadri ಅಭಿವೃದ್ಧಿಗೆ 100 ಕೋಟಿ ನೀಡಿದೆ ಬಿಜೆಪಿ ಸರ್ಕಾರ: ಮಾಜಿ ಶಾಸಕ ಮುನವಳ್ಳಿ

ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪದಲ್ಲಿ ಹುರುಳಿಲ್ಲ

Team Udayavani, Jul 22, 2023, 9:40 PM IST

Anjeyanadri ಅಭಿವೃದ್ಧಿಗೆ 100 ಕೋಟಿ ನೀಡಿದೆ ಬಿಜೆಪಿ ಸರ್ಕಾರ: ಮಾಜಿ ಶಾಸಕ ಮುನವಳ್ಳಿ

ಗಂಗಾವತಿ: ಇತಿಹಾಸ ಪ್ರಸಿದ್ಧ ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಲ್ಪಿಸಲು ಈ ಹಿಂದಿನ ಬಿಜೆಪಿ ಸರಕಾರ 100 ಕೋಟಿ ರೂ. ಟೆಂಡರ್‌ ಕರೆದು ಕಾರ್ಯಾದೇಶವನ್ನು ನೀಡಿದ್ದು, ಶಾಸಕ ಗಾಲಿ ಜನಾರ್ದನ ರೆಡ್ಡಿ ಅನುದಾನ ಬಿಡುಗಡೆಯಾಗಿಲ್ಲ ಎಂದು ವಿಧಾನಸಭೆ ಅಧಿ ವೇಶನದಲ್ಲಿ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಎರಡು ಬಾರಿ ಅಂಜನಾದ್ರಿಗೆ ಆಗಮಿಸಿ ಇಲ್ಲಿ ಮೂಲಸೌಕರ್ಯ ಕಲ್ಪಿಸುವ ಕುರಿತು ಅ ಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿ.ಎಸ್‌. ಯಡಿಯೂರಪ್ಪ 20 ಕೋಟಿ ನಂತರ ಬೊಮ್ಮಾಯಿಯವರು 100 ಕೋಟಿ ಅನುದಾನ ನೀಡಿದ್ದಾರೆ. ಪ್ರಸ್ತುತ ಕಾಂಗ್ರೆಸ್‌ ಸರಕಾರ ಬಜೆಟ್‌ನಲ್ಲಿ ಅಂಜನಾದ್ರಿ ಅಭಿವೃದ್ಧಿ ಬಗ್ಗೆ ಮಾತನಾಡಿಲ್ಲ. ಬಿಡಿಗಾಸನ್ನು ಮೀಸಲಿಟ್ಟಿಲ್ಲ. ಈ ಸರಕಾರವನ್ನು ಶಾಸಕ ಗಾಲಿ ಜನಾರ್ದನ ರೆಡ್ಡಿ ಟೀಕಿಸಬೇಕು. ಅದು ಬಿಟ್ಟು ಬಿಜೆಪಿ ಸರಕಾರ ಯಾವುದೇ ಅನುದಾನ ನೀಡಿಲ್ಲ ಎನ್ನುವುದು ಶುದ್ಧ ಸುಳ್ಳಾಗಿದೆ.

600 ವಸತಿ ಗೃಹಗಳ ನಿರ್ಮಾಣಕ್ಕೆ 21.34 ಕೋಟಿ, ಭೋಜನ ಶಾಲೆ ನಿರ್ಮಾಣಕ್ಕೆ 5.32 ಕೋಟಿ, ಸಮುದಾಯ ಭವನಕ್ಕೆ 1.44 ಕೋಟಿ, ಪಾರ್ಕಿಂಗ್‌ ಜಾಗಕ್ಕೆ 6.46 ಕೋಟಿ, ವಾಣಿಜ್ಯ ಮಳಿಗೆ ಶೌಚಾಲಯಕ್ಕೆ 3.36 ಕೋಟಿ, ದೇವಸ್ಥಾನ ಪ್ರವೇಶದ ಖಾಲಿ ಜಾಗದ ಅಭಿವೃದ್ಧಿಗೆ 4.84 ಕೋಟಿ, ಪ್ರದಕ್ಷಿಣಾ ಪಥಕ್ಕೆ 1.83 ಕೋಟಿ, ಸ್ನಾನ ಘಟ್ಟಕ್ಕೆ 5.79 ಕೋಟಿ, ಅತಿಥಿಗೃಹ ನಿರ್ಮಾಣಕ್ಕೆ 3.04 ಕೋಟಿ, ಸಿಬ್ಬಂದಿ ವಸತಿ ಗೃಹ 20 ಮನೆಗಳ ನಿರ್ಮಾಣಕ್ಕೆ 8.85 ಕೋಟಿ, ವ್ಯಾಖ್ಯಾನ ಕೇಂದ್ರ ನಿರ್ಮಾಣಕ್ಕೆ 34.28 ಕೋಟಿ, 30 ಮೀಟರ್‌ ರಸ್ತೆ ನಿರ್ಮಾಣಕ್ಕೆ 3.23 ಕೋಟಿ ಒಟ್ಟು 100 ಕೋಟಿ ರೂ. ಕಾಮಗಾರಿಗೆ ಇ ಟೆಂಡರ್‌ ಕರೆದು ವಿ.ಬಿ. ಪ್ರಸಾದ ರೆಡ್ಡಿ ಎನ್ನುವ ಗುತ್ತಿಗೆದಾರರಿಗೆ ಕಾಮಗಾರಿಯ ಕಾರ್ಯಾದೇಶ ವಿತರಿಸಲಾಗಿದೆ.

ಧಾರ್ಮಿಕ ದತ್ತಿ ಮತ್ತು ಪ್ರವಾಸೋದ್ಯಮ ಇಲಾಖೆಗಳ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುವಂತೆ ಸರಕಾರದ ಆದೇಶದಲ್ಲಿ ತಿಳಿಸಲಾಗಿದೆ. ಆದರೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಸದನದಲ್ಲಿ ಅಂಜನಾದ್ರಿ ಅಭಿವೃದ್ಧಿ ವಿಷಯ ಪ್ರಸ್ತಾಪಿಸಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಕೃಷಿ ಮಹಾವಿದ್ಯಾಲಯದ ವಿಷಯದಲ್ಲೂ ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ. ಈಗಾಗಲೇ ವಿದ್ಯಾರ್ಥಿನಿಯರ ಹಾಸ್ಟೆಲ್‌ ನಿರ್ಮಾಣ ಕಾರ್ಯ ನಡೆದಿದೆ.

ಕೆಕೆಡಿಬಿಯಿಂದ 105 ಕೋಟಿ ರೂ. ಹಣಕಾಸು ಕೇಳಿದ್ದು, ಬಿಜೆಪಿ ಸರಕಾರದ ಅವಧಿ ಯಲ್ಲೇ ಅಭಿವೃದ್ಧಿ ಕಾರ್ಯಗಳು ಭರದಿಂದ ನಡೆದಿದ್ದವು. ಈಗ ಹೆಚ್ಚುವರಿ ಹಣ ಮಂಜೂರಿ ಮಾಡಿಸುವ ಕಾರ್ಯ ಜನಾರ್ದನ ರೆಡ್ಡಿ ಬೇಕು. ಇದನ್ನು ಬಿಟ್ಟು ಈ ಹಿಂದಿನ ಸರಕಾರ ಏನು ಅನುದಾನ ಕೊಟ್ಟಿಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಮಾಜಿ ಶಾಸಕ ಮುನವಳ್ಳಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.