ಬೆಳೆವಿಮೆಗೆ ಒತ್ತಾಯಿಸಿ ಮನವಿ

Team Udayavani, Oct 6, 2019, 6:11 PM IST

ಕೊಪ್ಪಳ: ಜಿಲ್ಲೆಯಲ್ಲಿ 2017-18ನೇ ಸಾಲಿನ ಹಾಗೂ 2018-19ನೇ ಸಾಲಿನ ಬೆಳೆವಿಮೆ ಮಂಜೂರು ಮಾಡುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಎಸಿ ಸಿ.ಡಿ. ಗೀತಾ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ ಐತರಿಗೆ 2017-18, 2018-19ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯ ಬೆಳೆವಿಮೆ ಹಣ ಬ್ಯಾಂಕಿಗೆ ಭರಿಸಲಾಗಿದೆ. ಆದರೆ ಇಲ್ಲಿವರೆಗೂ ರೈತರ ಖಾತೆಗೆ ವಿಮೆ ಮೊತ್ತ ಪಾವತಿ ಮಾಡಿಲ್ಲ. ರೈತರು ವಿಮೆ ಬಾರದೇ ಇದ್ದಿದ್ದಕ್ಕೆ ಸಂಕಷ್ಟ ಎದುರಿಸುತ್ತಿದ್ದಾರೆ.

ಈ ವರ್ಷವೂ ಮುಂಗಾರು ಮಳೆ ಕೈ ಕೊಟ್ಟಿದೆ. ಸರ್ಕಾರ ಕೂಡಲೇ ಬೆಳೆವಿಮೆ ಪಾವತಿ ಮಾಡಬೇಕು. ಇಲ್ಲದಿದ್ದರೆ ಬೆಳೆವಿಮೆ ಪಾವತಿಗೆ ಅ. 10ರಂದು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಮನವಿ ಸಲ್ಲಿಸಲಾಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ