ಸದ್ದಿಲ್ಲದೇ ಸೇವೆ ಮಾಡಿದ ಅಪ್ಪು

ಪುನೀತ್‌ ರಾಜಕುಮಾರ್‌ ಸಾಮಾಜಿಕ ಕಾರ್ಯಗಳು ಎಲ್ಲರಿಗೂ ಪ್ರೇರಣೆ

Team Udayavani, Mar 15, 2022, 4:43 PM IST

20

 ಕೊಪ್ಪಳ: ಪುನೀತ್‌ ರಾಜಕುಮಾರ ದೊಡ್ಡ ನಟರಾಗಿದ್ದರೂ ಯಾವ ಹಮ್ಮಿಲ್ಲದೇ ಪ್ರತಿಭೆಗಳಿಗೆ ಅವಕಾಶ ನೀಡುತ್ತ, ಬಡಜನರಿಗೆ ಸಹಾಯಹಸ್ತ ಚಾಚುತ್ತಾ ಮೇರುತನ ಮೆರೆದ ಕರ್ನಾಟಕ ರತ್ನ ಎಂದು ಭಾಗ್ಯ ನಗರದ ಶ್ರೀ ಶಂಕರಾಚಾರ್ಯಮಠದ ಶ್ರೀ ರಾಮಕೃಷ್ಣ ಗುರುಗಳು ಪ್ರಶಂಸಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆರಂಭಗೊಂಡ ಕರ್ನಾಟಕ ರತ್ನ ಪುನೀತ್‌ ರಾಜ್‌ ಕುಮಾರ್‌ ಕಪ್‌-2022 ಟೂರ್ನಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಪುನೀತ್‌ ಅವರ ಸಾಮಾಜಿಕ ಕಾರ್ಯಗಳು ಎಲ್ಲರಿಗೂ ಪ್ರೇರಣೆ. ಕೊಪ್ಪಳ ಕರ್ನಾಟಕ ವಾರಿಯರ್ಸ್‌ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಸ್ಥೆ ಕೇವಲ ಆಟೋಟಗಳಿಗೆ ಸೀಮಿತವಾಗದೇ ಸಾಮಾಜಿಕ ಸೇವೆಯಲ್ಲೂ ಮುಂದಿದೆ. ಹಾಗೆಯೇ ಸಮಾಜ ಸೇವಾನಿರತ ವ್ಯಕ್ತಿ-ಸಂಸ್ಥೆಗಳನ್ನು ಗುರುತಿಸಿ, ಗೌರವಿಸುತ್ತದೆ ಎಂಬುದಕ್ಕೆ ಅನು ಅಕ್ಕ ಬಳಗ ಹಾಗೂ ಕಲರವ ತಂಡವೇ ಸಾಕ್ಷಿ ಎಂದರು.

ಅನು ಅಕ್ಕ ಮತ್ತು ಸಂಗಡಿಗರು ಈ ಚಿಕ್ಕ ವಯಸ್ಸಿನಲ್ಲಿ ಸರಕಾರಿ ಶಾಲಾಭಿವೃದ್ಧಿ, ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಹಮ್ಮಿಕೊಂಡಿರುವುದು ಪ್ರೇರಣಾತ್ಮಕ ಸಂಗತಿ. ಕೊಪ್ಪಳದ ಶಿಕ್ಷಕರ ಕಲರವ ತಂಡದ ಸದಸ್ಯರು ತಿಂಗಳಿಗೊಮ್ಮೆ ತಮ್ಮ ಸಂಬಳದ ಕೊಂಚ ಹಣ ಮೀಸಲಿಟ್ಟು, ಸರಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಹಚ್ಚುವ ಮೂಲಕ ಅಂದಗೊಳಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಭಾಗ್ಯನಗರ ಪಪಂ ಇಒ ಚಂದ್ರಶೇಖರಯ್ಯ, ನಿವೃತ್ತ ಇಒ ಬಾಬು, ಅನು, ರಾಜಣ್ಣ ನಾಯಕ್‌, ಕಾಶೀನಾಥ ಸಿರಿಗೇರಿ, ಕಂದಾಯ ನಿರೀಕ್ಷಕ ಮಂಜುನಾಥ ಮ್ಯಾಗಳಮನಿ ಮತ್ತಿತರರು ಮಾತನಾಡಿದರು.

ಬೀರಪ್ಪ ಅಂಡಗಿ, ಹನುಮಂತಪ್ಪ ಕುರಿ, ಎಸ್‌.ಎಸ್‌. ಗ್ರೂಪ್‌ನ ಶಂಕರ ಲಿಂಗನಬಂಡಿ, ರಾಮಣ್ಣ ಕಲ್ಲಣ್ಣವರ್‌, ಪ್ರಜ್ವಲ್‌, ಡಾ| ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.  ಮಧು ಪ್ರಾರ್ಥಿಸಿದರು. ಮಾರುತಿ ಮ್ಯಾಗಳಮನಿ ಸ್ವಾಗತಿಸಿದರು. ಸಂಸ್ಥೆಯ ಗೌರವಾಧ್ಯಕ್ಷ ಬಸವರಾಜ ಕರುಗಲ್‌ ಪ್ರಾಸ್ತಾವಿಕ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ಗೋಂಧಳಿ ಅಧ್ಯಕ್ಷತೆ ವಹಿಸಿದ್ದರು. ಈರಣ್ಣ ವಂದಿಸಿದರು.

ಪುನೀತ್‌ ಚಿತ್ರಕ್ಕೆ ಪುಷ್ಪ ಮಳೆ:  ಪುನೀತ್‌ ಚಿತ್ರಕ್ಕೆ ಗಣ್ಯರು ಪುಷ್ಪಮಳೆ ಸುರಿಸಿ ಕ್ರಿಕೆಟ್‌, ಚೆಸ್‌ ಹಾಗೂ ಕೇರಂ ಪಂದ್ಯಾವಳಿಗಳಿಗೆ ಚಾಲನೆ ನೀಡಿದರು. ಸಮಾರಂಭದಲ್ಲಿ ಅಪ್ಪು ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್‌ನ ದಂತ ಕಥೆ ಶೇನ್‌ ವಾರ್ನ್ ನಿಧನಕ್ಕೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.