ಕ್ಷೇತ್ರದ ಪ್ರತಿ ಹಳ್ಳಿಗೂ ಮೂಲ ಸೌಲಭ್ಯ: ಹಿಟ್ನಾಳ

Team Udayavani, Jul 12, 2019, 2:58 PM IST

ಕೊಪ್ಪಳ: ಬಂಡಿಹರ್ಲಾಪುರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಇತರರು ಚಾಲನೆ ನೀಡಿದರು.

ಕೊಪ್ಪಳ: ಕ್ಷೇತ್ರದ ಪ್ರತಿ ಹಳ್ಳಿಯಲ್ಲೂ ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಸಂಸದೀಯ ಕಾರ್ಯದರ್ಶಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲೂಕಿನ ಬಂಡಿಹರ್ಲಾಪುರ ಜಿಪಂ ವ್ಯಾಪ್ತಿಯ ಶಿವಪುರ ಹೊಸ ಬಂಡಿಹರ್ಲಾಪುರ, ಹಳೆ ಬಂಡಿಹರ್ಲಾಪುರ ಮತ್ತು ಬಸಾಪುರ ಗ್ರಾಮಗಳಲ್ಲಿ 2 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಹುತೇಕ ಎಲ್ಲ ಶಾಲಾ-ಕಾಲೇಜುಗಳ ಕೊಠಡಿಗಳು ಮತ್ತು ಶೌಚಾಲಯಗಳ ನಿರ್ಮಾಣ ಮಾಡಲಾಗಿದ್ದು, ಉಳಿದ ಎಲ್ಲ ಶಾಲಾ-ಕಾಲೇಜುಗಳ ಕಟ್ಟಡಗಳನ್ನು ಶೀಘ್ರವೇ ಪೂರ್ಣಗೊಳಿಸಿ ಶೈಕ್ಷಣಿಕ ರಂಗದಲ್ಲಿ ಹೆಚ್ಚು ಹೆಚ್ಚು ಸಾಧನೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ದಕ್ಷಿಣ ಕರ್ನಾಟಕದ ವಿದ್ಯಾರ್ಥಿಗಳಂತೆ ನಮ್ಮ ವಿದ್ಯಾರ್ಥಿಗಳು ಸಹ ಕೆಪಿಎಸ್‌ಸಿ ಮತ್ತು ಯುಪಿಎಸ್‌ಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿವಿಧ ಯೋಜನೆ ಮಾಡುತ್ತಿದ್ದೇವೆ. ಜಿಲ್ಲೆಯಲ್ಲಿ ಮೆಡಿಕಲ್ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ನಮ್ಮ ವಿದ್ಯಾರ್ಥಿಗಳು ಹೆಚ್ಚು ಅಭ್ಯಾಸ ಮಾಡುವಂತೆ ಪ್ರೇರೇಪಣೆ ನೀಡುತ್ತಿದ್ದೇವೆ ಎಂದರು.

ಈ ವೇಳೆ ತಾಪಂ ಅಧ್ಯಕ್ಷ ಬಾಲಚಂದ್ರನ್‌, ಗ್ರಾಪಂ ಅಧ್ಯಕ್ಷೆ ಮಾರ್ತೆಮ್ಮ ರುಪ್ಲಾನಾಯಕ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುರೇಶ ಭೂಮರೆಡ್ಡಿ, ಎಪಿಎಂಸಿ ಸದಸ್ಯ ವಿಶ್ವನಾಥ ರಾಜು, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಎಂ.ವಿ. ವೆಂಕಟೇಶ, ವಾಣಿಜ್ಯ ಉದ್ಯಮಿ ಚಂದ್ರಶೇಖರ, ಮುಖಂಡರಾದ ವೆಂಕಟೇಶ ಅಗಳಕೇರಾ, ಸುರೇಶ ಬಾಬು, ಭರಮಪ್ಪ ಬೆಲ್ಲದ, ಶಿವಬಾಬು, ಹುಲಗಪ್ಪ, ಇಬ್ರಾಹಿಂಸಾಬ್‌ ಬಳಿಗಾರ, ಮಾರ್ಕಂಡೆಪ್ಪ ಸೆಲ್ಯೂಡಿ ಇತರರಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕುಂದಾಪುರ: ರಾಜ್ಯದ ನಿರ್ವಸಿತ ಮೀನುಗಾರರಿಗೆ ಆಶ್ರಯ ಕಲ್ಪಿಸುವ ಮತ್ಸ್ಯಾಶ್ರಯ ಯೋಜನೆಯನ್ನು ಮೀನುಗಾರರ ಬೇಡಿಕೆಯಂತೆ ರಾಜೀವ್‌ ಗಾಂಧಿ ವಸತಿ ನಿಗಮದ ಬದಲು ಮತ್ತೆ...

  • ಮುಖ್ಯವಾಹಿನಿ ರಾಜಕೀಯ ಪಕ್ಷಗಳಿಗೆ ಆಟದ ಮೈದಾನವಾಗುತ್ತಿರುವ ವಿದ್ಯಾರ್ಥಿಒಕ್ಕೂಟಗಳನ್ನು ಮುಂದಿನ 10 ವರ್ಷಗಳವರೆಗೆ ನಿಷೇಧಿಸಬೇಕು. ಈ ವಿದ್ಯಾರ್ಥಿ ಒಕ್ಕೂಟಗಳಿಂದಾಗಿ...

  • ನಗದು ರಹಿತ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುವರ ಪ್ರಮಾಣ ಹೆಚ್ಚುತ್ತಿದ್ದು,ಹಣ ವರ್ಗಾವಣೆ, ಬಿಲ್‌ ಪಾವತಿ ಗಳನ್ನು ಕಾರ್ಡ್‌ ಅಥವಾ ಆ್ಯಪ್‌ಗ್ಳ ಮೂಲಕ ಮಾಡುತ್ತಿದ್ದಾರೆ....

  • ಯಾವುದೇ ಚಿತ್ರರಂಗವಿರಲಿ, ಸಾಮಾನ್ಯವಾಗಿ ಸ್ಟಾರ್‌ ನಟರು ಅಲ್ಲಿನ ಹಿರಿಯ ನಿರ್ದೇಶಕರು, ಅದರಲ್ಲೂ ಸಾಕಷ್ಟು ಹಿಟ್‌ ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯವಾದ...

  • ದರ್ಶನ್‌ ನಾಯಕರಾಗಿ ನಟಿಸಿರುವ "ಒಡೆಯ' ಚಿತ್ರದ ಹಾಡು, ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಡುಗಡೆಯ ಹಂತದಲ್ಲಿರುವ "ಒಡೆಯ' ಬಗ್ಗೆ...