ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಸರಕಾರ ವಿಫಲ

Team Udayavani, May 31, 2020, 6:51 AM IST

ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಸರಕಾರ ವಿಫಲ

ಕೊಪ್ಪಳ: ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ. ಪೂರ್ವ ಸಿದ್ಧತೆಯಿಲ್ಲದೆ ಮೋದಿ ಸರ್ಕಾರ ಲಾಕ್‌ಡೌನ್‌ ಘೋಷಿಸಿದೆ. ಸೋಂಕಿತರ ಸಂಖ್ಯೆ ಕಡಿಮೆಯಿದ್ದಾಗ ಬಿಗಿ ಮಾಡಿ, ಸೋಂಕಿತರ ಸಂಖ್ಯೆ ಹೆಚ್ಚಾದಾಗ ಲಾಕ್‌ಡೌನ್‌ ತೆರೆಯಲಾಗಿದೆ. ಹೀಗಾಗಿ ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ವೇಳೆ 65 ದಿನಗಳ ಕಾಲ ಸರ್ಕಾರ ಕೃಷಿ, ಕೂಲಿ, ಕಾರ್ಮಿಕರ, ಬೀದಿ ವ್ಯಾಪಾರಸ್ಥರ ಬಗ್ಗೆ ಅಮಾನವೀಯವಾಗಿ ವರ್ತಿಸಿದೆ. ಕಾಂಗ್ರೆಸ್‌ ನಾಯಕರು ಕೊರೊನಾ ಬಗ್ಗೆ ಮೊದಲೇ ಎಚ್ಚರಿಸಿದರೂ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಲಾಕ್‌ಡೌನ್‌ ವೇಳೆ ನೂರಾರು ಕಿಮೀ ನಡೆದ ಕಾರ್ಮಿಕರು, ಮಹಿಳೆಯರು, ಗರ್ಭಿಣಿಯರ ಬಗ್ಗೆ ಕನಿಕರ ತೋರಲಿಲ್ಲ. ದಾರಿ ಮಧ್ಯೆ ಸಾವು ಸಂಭವಿಸಿದವು. ಇದಕ್ಕೆಲ್ಲ ಯಾರು ಕಾರಣ ಎಂದು ಪ್ರಶ್ನಿಸಿದರು. ಮೋದಿ 20 ಲಕ್ಷ ಕೋಟಿ ಪ್ಯಾಕೇಜ್‌ ಘೋಷಿಸಿದ್ದಾರೆ.

ಅದು ಅಂಗೈಯಲ್ಲಿ ಅರಮನೆ ತೋರಿಸಿದ ಹಾಗಿದೆ. ಏಲ್ಲಿದೆ ಪ್ಯಾಕೇಜ್‌? ಯಾರಿಗೆ ತಲುಪಿದೆ? ಯಾರಿಗೆ ಲಾಭ ಆಗಿದೆ? ಪ್ಯಾಕೇಜ್‌ನಲ್ಲಿ ಏನೂ ಹುರುಳಿಲ್ಲ. ಜನರಿಗೆ ಮೋಸ ಮಾಡುತ್ತಿದ್ದೀರಿ. ಜನರಿಗೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಇದೆಲ್ಲವನ್ನೂ ನೋಡಿಯೇ ಸೋನಿಯಾ ಗಾಂಧಿ ಅವರು ಭಾರತದ ರಕ್ಷಣೆಗೆ ಜನತೆಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ ಎಂದರು.

ಈಚೆಗೆ ಪಿಪಿಇ ಕಿಟ್‌ ಖರೀದಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ದೂರುಗಳು ಬಂದಿವೆ. ಉಮೇಶ ಕತ್ತಿ, ಮುರಗೇಶ ನಿರಾಣಿ ಸೇರಿ ಇತರೆ ನಾಯಕರೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸ್ಥಳ ಪರಿಶೀಲನೆಗೆ ಮುಂದಾದರೆ, ಸ್ಪೀಕರ್‌ ಕೋವಿಡ್ ನೆಪದಿಂದಾಗಿ ತಡೆಯಾಜ್ಞೆ ನೀಡಿದ್ದಾರೆ. ತೆರಿಗೆ ಹಣ ಲೆಕ್ಕ ಇಡಬೇಕು. ಸಮಿತಿಯು ಪಕ್ಷಾತೀತವಾಗಿದೆ. ಅದಕ್ಕೆ ಕಿಟ್‌ ಖರೀದಿಯ ಪರಿಶೀಲನೆಗೆ ಅನುಮತಿ ಕೊಟ್ಟು, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಒತ್ತಾಯಿಸಿದರು.

ಬಿಜೆಪಿ ಅತೃಪ್ತಿಯ ಕಿತ್ತಾಟವನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ಇನ್ನು ರಮೇಶ ಜಾರಕಿಹೊಳಿ ಅವರಿಗೆ ಗಾಳಿಯಲ್ಲಿ ಮಾತನಾಡುವ ಚಾಳಿಯಿದೆ. ಅವರೇ ಬಿಜೆಪಿಯಲ್ಲಿ ತೃಪ್ತಿಯಿಂದ ಇದ್ದಾರಾ? ಎಂದು ಆತ್ಮಸಾಕ್ಷಿಯಿಂದ ಹೇಳಲಿ. ಬಹುಪಾಲು ಸಚಿವರು ಆಯಾ ಜಿಲ್ಲೆಗಳಿಗೆ ಹೋಗಿಲ್ಲ. ಇದನ್ನು ಜನತೆ ನೋಡುತ್ತಿದ್ದಾರೆ ಎಂದರಲ್ಲದೆ, ಗ್ರಾಪಂಗೆ ನಾಮನಿರ್ದೇಶನ ಮಾಡಲು ನಮ್ಮ ವಿರೋಧ ಇದೆ. ಅದರ ವಿರುದ್ಧ ನಮ್ಮ ಹೋರಾಟ ನಡೆಯಲಿದೆ. ಮೋದಿ ಸರ್ಕಾರ ಸಾಧನೆಯ ಸಂಭ್ರಮ ಎನ್ನುತ್ತಿದೆ. ಅವರದ್ದು ಶೂನ್ಯ ಸಾಧನೆ, ಏನೂ ಸಾಧನೆ ಮಾಡಿಲ್ಲ. ಜೂ. 7ರಂದು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸರಳವಾಗಿ ನಡೆಯಲಿದೆ ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಶಾಸಕರಾದ ಅಮರೇಗೌಡ ಬಯ್ನಾಪೂರ, ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಶಿವರಾಮೆಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Shivraj Thangadagi deeply mourns the demise of Dr. Kamala Hampana

ಡಾ.ಕಮಲಾ ಹಂಪನಾ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ

1-gg

CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

8-kushtagi

Kushtagi: ಅರೆಸ್ಟ್ ಮಾಡುವುದಾದರೆ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರನ್ನು ಅರೆಸ್ಟ್ ಮಾಡಿ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.