ಚೆಕ್‌ಡ್ಯಾಂ ಹಗರಣ: ಕೇಸ್‌ಗೆ ಸೂಚನೆ

Team Udayavani, Jan 22, 2021, 3:35 PM IST

Checkdam scam

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ನವಿವಿಧ ಗ್ರಾಪಂನಲ್ಲಿ ಪಿಆರ್‌ ಇಡಿ ಹಾಗೂ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದಲ್ಲಿ 2019-20ನೇ ಸಾಲಿನಲ್ಲಿ ನಡೆದಿದ್ದ ಚೆಕ್‌ ಡ್ಯಾಂಗಳ ಕಾಮಗಾರಿಯಲ್ಲಿ ದೊಡ್ಡ ಹಗರಣ ನಡೆದಿದೆ ಎಂದು ಆಪಾದನೆ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆ ಹಂತದಲ್ಲಿ ತನಿಖೆಯಾಗಿದ್ದು, ಏಳು ಜನರುಸರ್ಕಾರಕ್ಕೆ 2.98 ಕೋಟಿ ಆರ್ಥಿಕ ನಷ್ಟ ಮಾಡಿ ಹಣ ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ ಏಳು ಎಂಜಿನಿಯರ್‌ಗಳ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸಲು ಜಿಪಂ ಸಿಇಒ ಅವರು ಕುಷ್ಟಗಿ ತಾಪಂ ಇಒಗೆ ಪತ್ರ ಬರೆದಿದ್ದಾರೆ.

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಮಳೆಯ ಕೊರತೆ ಇರುವ ಪ್ರದೇಶಗಳಲ್ಲಿ ಚೆಕ್‌ ಡ್ಯಾಂಗಳ ನಿರ್ಮಾಣ ಮಾಡಿ ರೈತರಿಗೆ ನೆರವಾಗಬೇಕೆಂದು ಉದ್ದೇಶಿಸಿ ವಿವಿಧ ಗ್ರಾಪಂಗಳಿಗೆ ಕಾಮಗಾರಿ ಮಂಜೂರು ಮಾಡಿತ್ತು. ಕುಷ್ಟಗಿ ತಾಲೂಕಿನ ಹಲವು ಗ್ರಾಪಂನಲ್ಲಿ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಉಪ ವಿಭಾಗ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದಡಿ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಚೆಕ್‌ಡ್ಯಾಂ ಕಾಮಗಾರಿಗಳಲ್ಲಿ ಹಣ ದುರುಪಯೋಗವಾಗಿದೆ. ಅಲ್ಲದೇ ಕಾಮಗಾರಿಗಳು ಕಳಪೆಯಾಗಿವೆ. ಇದರಿಂದ ರೈತ ಸಮೂಹಕ್ಕೆ ಮೋಸ ಮಾಡಲಾಗುತ್ತಿದೆ ಎಂದು ಮಾಧ್ಯಮದಲ್ಲಿ ವರದಿ ಬಂದಿದ್ದವು. ಸ್ವತಃ ರೈತ ಮುಖಂಡರು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಈ ಬಗ್ಗೆ ಎಚ್ಚೆತ್ತ ಜಿಪಂ ಸಿಇಒ ಪಿಆರ್‌ಇಡಿಯಡಿ ನಡೆದ 21 ಕಾಮಗಾರಿ ಹಾಗೂ ಎನ್‌ಆರ್‌ 198 ಸೇರಿ ಒಟ್ಟು 219 ಚೆಕ್‌ಡ್ಯಾಂ ಕಾಮಗಾರಿಗಳನ್ನು ಪರಿಶೀಲನೆ ನಡೆಸಲು ಅಧಿಕಾರಿಗಳ ತಂಡ ರಚನೆ ಮಾಡಿತ್ತು. ಅಧಿಕಾರಿಗಳ ತಂಡ ತನಿಖೆ ನಡೆಸಿ ಸಿಇಒಗೆ ವರದಿ ನೀಡಿತ್ತು. ಸಿಇಒ ಸಹಿತ ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರದಿ ಮಾಡಿದ್ದರು. ಜೊತೆಗೆ ಬೆಂಗಳೂರು ತಂಡವೂ ಆಗಮಿಸಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇದನ್ನೂ ಓದಿ:ಮಹಾನಗರ ಪಾಲಿಕೆಯಿಂದ ಕರ ಸಂಗ್ರಹ ಕ್ಯಾಂಪ್‌ ಆರಂಭ

ವರದಿಯಲ್ಲಿ ಕಾಮಗಾರಿಯಲ್ಲಿ ಹಣ ದುರುಪಯೋಗ ಆಗಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ ಪಿಆರ್‌ಇಡಿಯಡಿ ಅಧಿಕಾರಿಗಳು 27.95 ಲಕ್ಷ ರೂ. ದುರುಯೋಗ ಮಾಡಿಕೊಂಡಿರುವುದು ಹಾಗು ಎನ್‌ಆರ್‌ಡಬ್ಲ್ಯೂಪಿನಡಿ 270.49 ಲಕ್ಷ ರೂ. ಸೇರಿ ಒಟ್ಟು 2.98 ಕೋಟಿ ಹಣವನ್ನು ಏಳು ಜನರು ದುರುಯೋಗ ಪಡೆಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಶಿಸ್ತು ಕ್ರಮಕ್ಕೆ ರಾಜ್ಯ ಇಲಾಖೆಯು ಸಿಇಒ ಅವರಿಗೆ ಸೂಚನೆ ನೀಡಿದ್ದು, ಸಿಇಒ ರಘುನಂದನ್‌ ಮೂರ್ತಿ ಅವರು ಏಳು ಜನರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆಕುಷ್ಟಗಿ ತಾಪಂ ಇಒಗೆ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.