ಶಾಲೆ ಕಾಂಪೌಂಡ್‌ಗೆ ಹೊಂದಿಕೊಂಡ ಶೆಡ್‌ ತೆರವುಗೊಳಿಸಿ


Team Udayavani, Apr 27, 2022, 12:26 PM IST

14

ಕಾರಟಗಿ: ಪಟ್ಟಣದ ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರೌಢಶಾಲಾ ವಿಭಾಗದ ಮುಖ್ಯದ್ವಾರದ ಪಕ್ಕದಲ್ಲಿನ ಖಾಲಿ ಜಾಗೆಯಲ್ಲಿ ಕೆಲ ಪ್ರಭಾವಿಗಳು ಒತ್ತುವರಿ ಮಾಡಿ ಸ್ಥಳದಲ್ಲೇ ಶೆಡ್‌ ನಿರ್ಮಿಸಿ ವ್ಯಾಪಾರ ನಡೆಸುತ್ತಿದ್ದು, ಈ ಕುರಿತು ಪ್ರೌಢಶಾಲೆ ಪ್ರಾಂಶುಪಾಲರು ಸೇರಿ ಕಾಲೇಜು ಆಡಳಿತ ಮಂಡಳಿ ಸ್ಥಳೀಯ ಪುರಸಭೆ ಮತ್ತು ಪಿಎಸ್‌ಐಗೆ ಮೂರು ಬಾರಿ ಮನವಿ ಸಲ್ಲಿಸಿದ್ದರೂ ಶೆಡ್‌ ತೆರವಿಗೆ ಮುಂದಾಗಿಲ್ಲ ಎಂದು ಕಾಲೇಜಿನ ಪ್ರಾಚಾರ್ಯ ಅನಿಲಕುಮಾರ ದೂರಿದ್ದಾರೆ.

ಪಟ್ಟಣದ ಕಾರಟಗಿ-ನವಲಿ ಮುಖ್ಯ ರಸ್ತೆಯಲ್ಲಿರುವ ಈ ಪ್ರೌಢಶಾಲೆಯ ಗೇಟ್‌ ಪಕ್ಕದಲ್ಲೇ ಪ್ರಭಾವಿ ವ್ಯಕ್ತಿಯೊಬ್ಬರು ಎರಡು ದಿನಗಳ ಹಿಂದೆ ಜಾಗೆ ಒತ್ತುವರಿ ಮಾಡಿಕೊಂಡು ಶೆಡ್‌ ಹಾಕಿಕೊಂಡಿದ್ದಾರೆ. ಈ ತರಹ ಈಗಾಗಲೇ ಕಾಂಪೌಂಡ್‌ ಸುತ್ತಲೂ 8 ಕಡೆ ಒತ್ತುವರಿ ಮಾಡಿ ಸಂತೆ ಮಾರುಕಟ್ಟೆ ತರಹ ವಾತಾವರಣ ಸೃಷ್ಟಿಸಿ ಶೈಕ್ಷಣಿಕ ವಾತಾವರಣವನ್ನೇ ಹದಗೆಡಿಸಿದ್ದಾರೆ. ಈ ಕುರಿತು ದೂರು ಸಲ್ಲಿಸಿದರೂ ಸಂಬಂಧಿಸಿದ ಪುರಸಭೆ ಆಡಳಿತ ಯಾವುದನ್ನು ಗಣನೆಗೆ ತೆಗೆದುಕೊಂಡಿಲ್ಲ. ದಿನೇ ದಿನೆ ಶೆಡ್‌ಗಳು ಹೆಚ್ಚಾಗುತ್ತಿವೆ. ಪುರಸಭೆ ಆಡಳಿತ ಮಂಡಳಿ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಶಾಲೆಯ ಪ್ರಾಚಾರ್ಯರು ಅಸಹಾಯಕತೆ ವ್ಯಕ್ತಪಡಿಸಿದರು.

ಶಾಲೆ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಬೈಕ್‌, ಸೈಕಲ್‌ ನಿಲ್ಲಿಸಲು ಕಚೇರಿಗೆ ಬರುವ ಸಾರ್ವಜನಿಕರ, ಪೋಷಕರ ವಾಹನಗಳನ್ನು ನಿಲ್ಲಿಸಲು ಸ್ಥಳವಕಾಶ ಇಲ್ಲದಂತಾಗಿದೆ. ಶೆಡ್‌ಗಳನ್ನು ಕಿತ್ತು ಹಾಕಿ ಜಾಗೆಯನ್ನು ಖಾಲಿ ಮಾಡಿಸಿಕೊಡಬೇಕೆಂದು ಪುರಸಭೆ ಮುಖ್ಯಾಧಿಕಾರಿಗಳಿಗೆ ಮತ್ತೂಮ್ಮೆ ಆಗ್ರಹಿಸುವುದಾಗಿ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿಗಳು, ಸಂಬಂಧಿಸಿದ ಶಾಲಾ ಆಡಳಿತ ಮಂಡಳಿಯವರು, ಅಲ್ಲಿನ ಪ್ರಾಂಶುಪಾಲರು ಶೆಡ್‌ ಹಾಕುವ ಮುಂಚೆ, ಒತ್ತುವರಿ ಮಾಡುವ ಮುಂಚೆ ಅವರಿಗೆ ಪಾಠ ಕಲಿಸಬೇಕಿತ್ತು. ಆದರೆ ಅದನ್ನು ಮಾಡದೇ ಈಗ ಪುರಸಭೆಯವರಿಗೆ ಮನವಿ ಸಲ್ಲಿಸಿದರೆ ನಾವೇನು ಮಾಡುವುದು. ಅವರು ಬೇಕಾದರೆ ಪೊಲೀಸ್‌ ರಕ್ಷಣೆಯಲ್ಲಿ ಅಕ್ರಮ ಶೆಡ್‌ಗಳನ್ನು ಕಿತ್ತು ಹಾಕಿಸಿಕೊಳ್ಳಲಿ ಎಂದರು.

ಈ ಬಗ್ಗೆ ಸಂಬಂಧಿಸಿದ ಶಾಲಾಡಳಿತ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿರುವ ಶಾಸಕರಾಗಲಿ, ಇನ್ನಿತರ ಸದಸ್ಯರು ಮುಂದೆ ನಿಂತು ಪಟ್ಟಣದ ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಶೆಡ್‌ಗಳನ್ನು ಕಿತ್ತು ಹಾಕಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಶೈಕ್ಷಣಿಕ ವಾತಾವರಣ ಕಾಪಾಡುವುದು ಕಷ್ಟವಾಗಬಹುದು ಎಂದು ಪ್ರಾಚಾರ್ಯ ಅನಿಲಕುಮಾರ ಹೇಳಿದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.