ಕೃಷ್ಣಾ ಬಿ ಸ್ಕೀಂ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳಿಸಿ


Team Udayavani, Mar 4, 2020, 4:41 PM IST

kopala-tdy-3

ಸಾಂದರ್ಭಿಕ ಚಿತ್ರ

ಕುಷ್ಟಗಿ: ಕೃಷ್ಣಾ ಬಿ ಸ್ಕೀಂ ಕೊಪ್ಪಳ ಏತ ನೀರಾವರಿ ಯೋಜನೆಯಲ್ಲಿ ವಿಳಂಬ ಧೋರಣೆ ಸಲ್ಲದು. ರಾಜ್ಯ-ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಶೀಘ್ರ ಯೋಜನೆ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರೈತ ಸೇನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.

ಮಂಗಳವಾರದಿಂದ ತಹಶೀಲ್ದಾರ್‌ ಕಚೇರಿ ಎದುರು ಕರ್ನಾಟಕ ರೈತ ಸಂಘ (ಪ್ರೊ| ಎಂ.ಡಿ. ನಂಜುಂಡಸ್ವಾಮಿ ಬಣ) ಕೃಷ್ಣಾ ಬಿ ಸ್ಕೀಂ ಕೊಪ್ಪಳ ಏತ ನೀರಾವರಿ ಯೋಜನೆ ಮೂರನೇ ಹಂತದ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ  ಹೋರಾಟದಲ್ಲಿ ಅವರು ಮಾತನಾಡಿದರು.

ಕಾಮಗಾರಿ ನಿಲ್ಲಿಸದಿರಿ: ಯೋಜನೆಗೆ 2013ರಲ್ಲಿಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅಡಿಗಲ್ಲು ಹಾಕಿರುವ ಯೋಜನೆಯ ವಿಳಂಬದ ಬಗ್ಗೆ ಪ್ರಶ್ನಿಸಿ, ಈ ವಿಷಯದಲ್ಲಿ ಸ್ಥಳೀಯ ಶಾಸಕ ತದ್ವಿರುದ್ಧ ಹೇಳಿಕೆ ನೀಡುವುದು ಖಂಡನೀಯ. ಕೈಗೆತ್ತಿಕೊಳ್ಳುವ 3ನೇ ಹಂತದ ಯೋಜನೆ ಪೂರ್ಣಗೊಳ್ಳುವವರೆಗೂ ನಿಲ್ಲಿಸಲೇಬಾರದು. ಆಲಮಟ್ಟಿ ಅಣೆಕಟ್ಟೆ ಎತ್ತರಿಸಿ, ಇಲ್ಲವೇ ಕೈ ಬಿಡಲಿ. ಇದಕ್ಕೆ ಸಂಬಂಧವೇ ಇಲ್ಲ. ಕೃಷ್ಣಾ ಬಿ ಸ್ಕೀಂ ಯೋಜನೆಯನ್ವಯ ಈ ಭಾಗಕ್ಕೆ ಎಷ್ಟು ನೀರು ಹಂಚಿಕೆಯಾಗಬೇಕು ಅದಕ್ಕೆ ಆದ್ಯತೆ ನೀಡಬೇಕು. ಈ ಮೂರು ದಿನಗಳಲ್ಲಿ ರಾಜ್ಯ ಸರ್ಕರ ಸ್ಪಂದಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುತ್ತಿದ್ದು, ಏನಾದರೂ ಅನಾಹುತಗಳಾದರೆ ಅದಕ್ಕೆ ಅಧಿಕಾರಿಗಳು- ಸರ್ಕಾರವೇ ಹೊಣೆ ಎಂದು ಎಚ್ಚರಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಆರ್‌.ಕೆ. ದೇಸಾಯಿ ಮಾತನಾಡಿ, ಕೃಷ್ಣಾ ಬಿ ಸ್ಕೀಂ ಅನ್ವಯ ನೀರು ಹಂಚಿಕೆ ನಮ್ಮ ಹಕ್ಕು. ಈ ಭಾಗದಲ್ಲಿ ಮಳೆಗಾಲ ಅಸರ್ಪಕವಾಗಿದ್ದು, ಬಹುತೇಕ ಜನ ಉದ್ಯೋಗಕ್ಕಾಗಿ ಗುಳೆ ಹೋಗುತ್ತಿದ್ದು, ಇದನ್ನು ತಪ್ಪಿಸಲು ಈ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಆಗ್ರಹಿಸಿದರು. ನಂತರ ಪ್ರತಿಭಟನಾಕಾರರು ತಹಶೀಲ್ದಾರ್‌ ಎಂ. ಸಿದ್ದೇಶ ಅವರಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್‌ ಸಿದ್ಧೇಶ ಮನವಿ ಸ್ವೀಕರಿಸಿ ಮಾತನಾಡಿ, ಶಾಸಕ ಅಮರೇಗೌಡರ ಗಮನಕ್ಕೆ ತರುವುದಾಗಿ ತಿಳಿಸಿದರು.

ಬೆಂಬಲ: ನನೆಗುದಿಯಲ್ಲಿರುವ ಕೃಷ್ಣಾ ಬಿ ಸ್ಕೀಂ ಕೊಪ್ಪಳ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಮಹಾದಾಯಿ ಹೋರಾಟ ಸಮಿತಿ ಸೇರಿದಂತೆ ಕರ್ನಾಟಕ ರೈತ ಸೇನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ, ಕರ್ನಾಟಕ ರೈತ ಸಂಘದ ಮಾಜಿ ಅಧ್ಯಕ್ಷ ಕೆ.ಟಿ. ಗಂಗಾಧರಯ್ಯ, ಪ್ರಧಾನ ಕಾರ್ಯದರ್ಶಿ ಟಿ. ಪುಟ್ಟಯ್ಯ, ಅಶೋಕ ಬಸೆಟ್ಟಿ, ಮಹಾದಾಯಿ ಹೋರಾಟ ಸಮಿತಿಯ ವಿಜಯ ಕುಲಕರ್ಣಿ ಮೊದಲಾದವರು ಸಾತ್‌ ನೀಡಿದರು.

ರೈತ ಸಂಘದ ರಾಜ್ಯ ಘಟಕದ ಅಣ್ಣಪ್ಪಗೌಡ ದೇಸಾಯಿ, ಮಹಿಳಾ ಘಟಕದ ಮಲ್ಲಮ್ಮ ಹೆಬಸೂರು ಶಲವಡಿ, ಸುವರ್ಣ, ಶ್ಯಾಮಸ್ಸಾದ್‌ ಬೇಗಂ, ಎಚ್‌. ಮೀನಾಕ್ಷಿ, ಜಿಲ್ಲಾ ಉಪಾಧ್ಯಕ್ಷ ಪರಶುರಾಮ ಕೋನಾಪುರ, ತಾಲೂಕು ಅಧ್ಯಕ್ಷ ನಿಂಗಪ್ಪ ಬೆಳವಣಕಿ, ಬಸವರಾಜ ಹಂಪಣ್ಣವರ, ಬಸವರಾಜ ರೇವಡಿ ಇತರರಿದ್ದರು.

ಟಾಪ್ ನ್ಯೂಸ್

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

ಕೆಜಿಎಫ್ 2 ಚಿತ್ರ 1,200 ಕೋಟಿ ರೂ. ಕ್ಲಬ್ ಗೆ: ಅಮೆಜಾನ್ ಪ್ರೈಮ್ ನಲ್ಲೂ ಸಿನಿಮಾ ವೀಕ್ಷಿಸಿ

ಕೆಜಿಎಫ್ 2 ಚಿತ್ರ 1,200 ಕೋಟಿ ರೂ. ಕ್ಲಬ್ ಗೆ: ಅಮೆಜಾನ್ ಪ್ರೈಮ್ ನಲ್ಲೂ ಸಿನಿಮಾ ವೀಕ್ಷಿಸಿ

siddaramaiah

ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

15DKSHi

ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ?: ಡಿಕೆಶಿ ಪ್ರಶ್ನೆ

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ : 25,000 ರೂ. ಪರಿಹಾರ : ಸಿಎಂ ಬೊಮ್ಮಾಯಿ

ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ

1-sdsfsfsf

ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

1-ssddsad

ಕುಷ್ಟಗಿ: ಕಾಂಗ್ರೆಸ್ ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹಕ್ಕೆ ಹೈಕೋರ್ಟ್ ತಡೆ

22

ಸಚಿವ ಸ್ಥಾನ ಸಿಗಲು ಜನಾಶೀರ್ವಾದ ಕಾರಣ

21

ಯಲಬುರ್ಗಾ ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಮರೀಚಿಕೆ

21

ಹೆತ್ತವರ ಅಪಸ್ವರ ಲೆಕ್ಕಿಸದೇ ಹಿಂದೂ ಯುವಕ, ಮುಸ್ಲಿಂ ಯುವತಿ ವಿವಾಹ

MUST WATCH

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

ಹೊಸ ಸೇರ್ಪಡೆ

1-dsfdsfd

ಮಂಗಳೂರು: ವಿಚ್ಛೇದನಕ್ಕೆ ಸಿದ್ದವಾಗಿದ್ದ ಮಹಿಳೆಯ ಮಾನಭಂಗ ಯತ್ನ; ಆರೋಪಿ ಬಂಧನ

ಸ್ಪ್ಲೆಂಡರ್‌ನಲ್ಲಿ ಯುವಕರ ದೇಶ ಪರ್ಯಟನೆ! ಭಾರತ ಧ್ವಜ ಕಂಡು ಹಲ್ಲೆಗೆ ಮುಂದು

ಸ್ಪ್ಲೆಂಡರ್‌ನಲ್ಲಿ ಯುವಕರ ದೇಶ ಪರ್ಯಟನೆ! ಭಾರತದ ಧ್ವಜ ಕಂಡು ಹಲ್ಲೆಗೆ ಯತ್ನ

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

chikmagaluru

ಜಿಲ್ಲೆಯ ಸಮಸ್ಯೆಗಳಿಗೆ ಸಿಕ್ಕಿತೇ ಪರಿಹಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.