ನಗರಸಭಾ ಅಧ್ಯಕ್ಷರ ವಿರುದ್ಧ ಆಡಳಿತಾರೂಢ ಸದಸ್ಯರಿಂದ ಅವಿಶ್ವಾಸ ಗೊತ್ತುವಳಿ ಪತ್ರ

ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್- ಬಿಜೆಪಿ ರಾಜಕೀಯ ತಂತ್ರ; ಸ್ವಯಂ ಆಗಿ ರಾಜೀನಾಮೆ ನೀಡಲು ಅಧ್ಯಕ್ಷರ ನಿರ್ಧಾರ

Team Udayavani, Mar 9, 2022, 2:18 PM IST

ನಗರಸಭಾ ಅಧ್ಯಕ್ಷರ ವಿರುದ್ಧ ಆಡಳಿತಾರೂಢ ಸದಸ್ಯರಿಂದ ಅವಿಶ್ವಾಸ ಗೊತ್ತುವಳಿ ಪತ್ರ

ವಿಶೇಷ ವರದಿ-ಗಂಗಾವತಿ: ನಗರಸಭೆಯ ಅಧ್ಯಕ್ಷೆ ಮಾಲಾಶ್ರೀ ಸಂದೀಪ್ ವಿರುದ್ದ ಆಡಳಿತಾರೂಢ ಕಾಂಗ್ರೆಸ್ ಸದಸ್ಯರು ಬಂಡಾಯವೆದ್ದಿದ್ದು ಅಧ್ಯಕ್ಷರ ವಿರುದ್ಧ 18 ಸದಸ್ಯರು ಅವಿಶ್ವಾಸ ನಿರ್ಣಯ ಮಂಡನೆಗೆ ಜಿಲ್ಲಾಧಿಕಾರಿ ಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ನಗರಸಭೆಯ 35 ಸ್ಥಾನಗಳಲ್ಲಿ 17 ಕಾಂಗ್ರೆಸ್, ಬಿಜೆಪಿ 14 ಜೆಡಿಎಸ್ 02 ಹಾಗೂ ಪಕ್ಷೇತರ 02 ಸದಸ್ಯರಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಆಡಳಿತ ಮಂಡಳಿಗೆ ಜೆಡಿಎಸ್ ಬಿಜೆಪಿ ತಲಾ ಒರ್ವ ಸದಸ್ಯರ ಬೆಂಬಲವಿದ್ದು ಅವಿಶ್ವಾಸ ಗೊತ್ತುವಳಿಗೆ 17 ಕಾಂಗ್ರೆಸ್ ಹಾಗೂ ಒರ್ವ ಜೆಡಿಎಸ್ ಸದಸ್ಯ ಸಹಿ ಹಾಕಿ ಜಿಲ್ಲಾಧಿಕಾರಿಗಳಿಗೆ ಬೇಗನೆ ಅವಿಶ್ವಾಸಗೊತ್ತುವಳಿ ಸಭೆ ನಡೆಸುವಂತೆ ಮನವಿ ಮಾಡಲಾಗಿದೆ.

ಕಾಂಗ್ರೆಸ್‌ನಿಂದ ವಿಜೇತರಾಗಿರುವ ಮಾಲಾಶ್ರೀ ಸಂದೀಪ್ ಇವರು ಕಳೆದ 15 ತಿಂಗಳಿಂದ ಆಡಳಿತ ನಡೆಸುತ್ತಿದ್ದು ಆಡಳಿತಾರೂಢ ಸದಸ್ಯರ ಮನವಿಗೆ ಸ್ಪಂದನೆ ಮಾಡುತ್ತಿಲ್ಲ. ಆದ್ದರಿಂದ ಅವಿಶ್ವಾಸಗೊತ್ತುವಳಿ ಮೂಲಕ ಕೆಳಗಿಳಿಸಲು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ(ಹೈಕಮಾಂಡ್) ಸೂಚನೆ ನೀಡಿದ್ದರಿಂದ 18 ಸದಸ್ಯರ ಸಹಿಯನ್ನೊಳಗೊಂಡ ಅವಿಶ್ವಾಸ ಗೊತ್ತುವಳಿ ಅರ್ಜಿ ಸಲ್ಲಿಸಲಾಗಿದೆ ಎನ್ನಲಾಗುತ್ತಿದೆ.

ಈ ಮಧ್ಯೆ ಸುದ್ದಿಗೋಷ್ಠಿ ನಡೆಸಿ ನಗರಸಭೆಯ ಪೌರಾಯುಕ್ತರು ಹಾಗೂ ಸಿಬ್ಬಂದಿ ವರ್ಗದಿಂದ ಸೂಕ್ತ ರೀತಿಯಲ್ಲಿ ಸ್ಪಂದನೆ ಇಲ್ಲ. ಇದುವರೆಗೂ ಪಕ್ಷದ ಹೈಕಮಾಂಡ್ ಹಾಗೂ ಸದಸ್ಯರ ಅಪೇಕ್ಷೆಯಂತೆ ಆಡಳಿತ ನಡೆಸುತ್ತಿದ್ದು ಈ ಮಧ್ಯೆ ತಮ್ಮ ವಿರುದ್ಧ ಅವಿಶ್ವಾಸಗೊತ್ತುವಳಿ ಯಾಕೆ ಮಂಡನೆಯಾಗಿದೆ ಗೊತ್ತಾಗುತ್ತಿಲ್ಲ. ತನ್ನನನ್ನು ಕರೆದು ರಾಜೀನಾಮೆ ನೀಡುವಂತೆ ಹೇಳಿದ್ದರೆ ಮನಪೂರ್ವಕವಾಗಿ ರಾಜೀನಾಮೆ ಸಲ್ಲಿಸುತ್ತಿದೆ ಎಂದು ಅಧ್ಯಕ್ಷೆ ಮಾಲಾಶ್ರೀ ತಿಳಿಸಿದ್ದಾರೆ.

ಕಳೆದ ಭಾರಿ ನಗರಸಭೆಯ ಗದ್ದುಗೆ ಹಿಡಿಯಲು ಯತ್ನಿಸಿ ವಿಫಲವಾಗಿದ್ದ ಬಿಜೆಪಿ. ಕಾಂಗ್ರೆಸ್ ಪಕ್ಷ ಸದಸ್ಯರ ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಯಶಸ್ವಿಗೊಳಿಸಿ ಕಾಂಗ್ರೆಸ್ ನ ಕೆಲ ಸದಸ್ಯರನ್ನು ಬಿಜೆಪಿ ಸೆಳೆದು ಅಧಿಕಾರ ಹಿಡಿಯಲು ಯತ್ನ ನಡೆಸಿದ್ದು ಈಗಾಗಲೇ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಅವರ ಜತೆ ಜೆಡಿಎಸ್, ಪಕ್ಷೇತರ, ಅತೃಪ್ತ ಕಾಂಗ್ರೆಸ್ ಕೆಲವರು ಮತ್ತು ಬಿಜೆಪಿ ಸದಸ್ಯರು ಮಾತುಕತೆ ನಡೆಸಿದ್ದಾರೆ.

ಈ ಮಧ್ಯೆ ಕಾಂಗ್ರೆಸ್ ಪುನಃ ಹೈಕಮಾಂಡ್‌ಗೆ ಹತ್ತಿರದವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ತೀರ್ಮಾನಿಸಿದ್ದು ಕಳೆದ 20 ವರ್ಷಗಳಿಂದ ನಗರಸಭೆಯ ಹಿಡಿತ ಕೈ ತಪ್ಪದಂತೆ ಯೋಜನೆ ರೂಪಿಸಿದ್ದು ಸ್ವತಹ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅಖಾಡಕ್ಕೆ ಇಳಿದಿದ್ದು ಮೇಲಿಂದ ಮೇಲೆ ಸಭೆ ನಡೆಸಿ ಕಾಂಗ್ರೆಸ್ ಸದಸ್ಯರು ಬಿಜೆಪಿ ಅಥವಾ ಮಾಜಿ ಎಂಎಲ್ಸಿ ಎಚ್.ಆರ್. ರಚಿಸುವ ನಾಗರೀಕ ವೇದಿಕೆ ಕಡೆ ವಾಲದಂತೆ ಕಾರ್ಯತಂತ್ರ ಹೆಣೆದಿದ್ದಾರೆ.

ಹೈಕಮಾಂಡ್ ಆದೇಶದಂತೆ ನಗರಸಭೆ ಅಧ್ಯಕ್ಷೆ ಮಾಲಾಶ್ರೀ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲಾಗಿದೆ. ಪ್ರತಿಯೊಂದು ವರ್ಗದವರಿಗೆ ಆಧ್ಯತೆ ನೀಡುವ ಉದ್ದೇಶವಿರಬಹುದು. ಸದ್ಯ ಹೈಕಮಾಂಡ್ ನ ಸೂಚನೆ ಪಾಲನೆ ಮಾಡಲಾಗಿದೆ. ಮುಂದಿನ ಬೆಳವಣಿಗೆ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗಾಗಲೇ ಒಂದು ಭಾರಿ ಬಿಜೆಪಿಯವರು ಅಧಿಕಾರ ಪಡೆಯಲು ಯತ್ನಿಸಿ ಕೈ ಸುಟ್ಟುಕೊಂಡಿದ್ದಾರೆ. ಬಿಜೆಪಿಯವರು ನಗರದ ಪ್ರಭಾವಿಗಳ ಮನೆಯಲ್ಲಿ ಸಭೆ ನಡೆಸಿದ ಮಾತ್ರಕ್ಕೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಪುನಃ ಅಧಿಕಾರ ಹಿಡಿಯುವಷ್ಟು ಬಹುಮತವಿದೆ. ಜಾತ್ಯತೀತ ನಿಲುಗಳ ಬಗ್ಗೆ ಮಾತನಾಡುವ ನಗರದ ಹಿರಿಯ ಮುಖಂಡರು ಕಾಂಗ್ರೆಸ್ ಹೊರತುಪಡಿಸಿ ಬಿಜೆಪಿಗೆ ಬೆಂಬಲಿಸಿದರೆ ಮುಂದೆ ಇದಕ್ಕೆ ಪ್ರತಿಫಲ ಪಡೆಯಲು ಸಿದ್ದರಾಗಿರಬೇಕು.
-ಶಾಮೀದ್ ಮನಿಯಾರ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು.

ಕಳೆದ ಒಂದುವರೆ ವರ್ಷದಿಂದ ನಗರಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಕಾಂಗ್ರೆಸ್ ಆಡಳಿತ ಮಂಡಳಿ ಸಂಪೂರ್ಣ ವಿಫಲವಾಗಿದೆ. ಆಡಳೀತಾರೂಢ ಸದಸ್ಯರೇ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದಾರೆ. ಬಿಜೆಪಿಯವರು ಸಹ ಅವಿಶ್ವಾಸಗೊತ್ತುವಳಿ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಲಾಗುತ್ತದೆ. ಕಳೆದ ಭಾರಿ ತಮ್ಮ ತಾಯಿ ಜಯಶ್ರೀ ಸಿದ್ದಾಪೂರ ಅವರನ್ನು ಬಿಜೆಪಿ ಸದಸ್ಯರು ಶಾಸಕರು ಸಂಸದರು ಪಕ್ಷದ ಮುಖಂಡರು ಅಧ್ಯಕ್ಷರನ್ನಾಗಿ ಮಾಡಲು ಪ್ರಯತ್ನಿಸಿ ವಿಫಲರಾಗಿದ್ದು ಈ ಭಾರಿ ಬಿಜೆಪಿಗೆ ಅಧಿಕಾರ ಸಿಗುವ ಸಾಧ್ಯತೆ ಇದೆ.
-ರಾಚಪ್ಪ ಸಿದ್ದಾಪೂರ ಬಿಜೆಪಿ ಮುಖಂಡರು ನಗರಸಭೆ ಮಾಜಿ ಸದಸ್ಯರು.

ಕಳೆದ ಒಂದುವರೆ ವರ್ಷದಿಂದ ನಗರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಸದ್ಯ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ನವರು ಅವಿಶ್ವಾಸಗೊತ್ತುವಳಿ ಮಂಡನೆ ಮಾಡಿದ್ದಾರೆ. ಸಾಧಕ ಬಾಧಕ ಪರಿಶೀಲಿಸಿ ನಾಗರೀಕ ವೇದಿಕೆ ರಚನೆ ಮಾಡಿಕೊಂಡು ಪಕ್ಷಾತೀತವಾಗಿ ಆಡಳಿತ ನಡೆಸುವವರಿಗೆ ಜೆಡಿಎಸ್ ಒರ್ವ ಸದಸ್ಯ ಪಕ್ಷೇತರರು ಬಿಜೆಪಿಯವರು ಮತ್ತು ಅತೃಪ್ತ ಕಾಂಗ್ರೆಸ್ ಸದಸ್ಯರ ಬೆಂಬಲದೊಅದಿಗೆ ಸಹಕಾರ ನೀಡಲಾಗುತ್ತದೆ. ಈಗಾಗಲೇ ನಗರಸಭೆಯ ಕೆಲ ಸದಸ್ಯರು ತಮ್ಮ ಭೇಟಿಯಾಗಿ ಮಾತನಾಡಿದ್ದಾರೆ.
-ಎಚ್.ಆರ್.ಶ್ರೀನಾಥ ಮಾಜಿ ಎಂಎಲ್ಸಿ

ಈಗಾಗಲೇ ತಮ್ಮ ವಿರುದ್ಧ ಸ್ವಪಕ್ಷೀಯರು ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದಾರೆ. ಹೈಕಮಾಂಡ್ ಹೇಳಿದ್ದರೆ ತಾವೇ ಸ್ವತಹ ರಾಜೀನಾಮೆ ಸಲ್ಲಿಸುತ್ತಿದ್ದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರನ್ನು ಭೇಟಿಯಾಗಿ ಮುಂದಿನ ನಿರ್ಧಾರ ಮಾಡಲಾಗುತ್ತದೆ.
-ಮಾಲಾಶ್ರೀ ಸಂದೀಪ್ ಅಧ್ಯಕ್ಷರು ನಗರಸಭೆ

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.