ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ

Team Udayavani, Jul 5, 2022, 7:43 PM IST

ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ

ಗಂಗಾವತಿ : ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಯನ್ನು ಬಿಜೆಪಿ ಸಂಘಪರಿವಾರದವರು ಹೈಜಾಕ್ ಮಾಡಿ ಚುನಾವಣಾ ವಸ್ತುವಾಗಿ ಬಳಕೆ ಮಾಡಲು ಹವಣಿಸುತ್ತಿದ್ದು ಇದಕ್ಕೆ ತಾವು ಅವಕಾಶ ಕೊಡುವುದಿಲ್ಲ ಎಂದು ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಹೇಳಿದರು.

ಅವರು ಕಾಂಗ್ರೆಸ್ ಸೇರ್ಪಡೆಯ ನಂತರ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಆಪ್ತರು ಆಯೋಜಿಸಿದ್ದ ಬೈಕ್ ರ‍್ಯಾಲಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಜಾತಿ ಧರ್ಮದ ಆಧಾರದಲ್ಲಿ ನೆಲೆ ಕಂಡಿದೆ ಇದೀಗ ಕಿಷ್ಕಿಂದಾ ಅಂಜನಾದ್ರಿ ಮುನ್ನೆಲೆಗೆ ಬಂದಿದ್ದು ಇದರ ಲಾಭವನ್ನು ಬಿಜೆಪಿ ಸಂಘ ಪರಿವಾರದವರು ಪಡೆಯಲು ಪದೇ ಪದೇ ಅಂಜನಾದ್ರಿ ಹೆಸರನ್ನು ಪ್ರಸ್ತಾಪಿಸುತ್ತಿದ್ದಾರೆ. ಅಂಜನಾದ್ರಿಗೆ ಎಲ್ಲಾ ಜಾತಿ ಪಕ್ಷದವರು ಭಕ್ತರಾಗಿದ್ದು ಬಿಜೆಪಿ ಸಂಘ ಪರಿವಾರದವರು ಮಾತ್ರ ಭಕ್ತರಾಗಿಲ್ಲ.

ಕಳೆದ ಹಲವು ತಿಂಗಳಿಂದ  ಹೊಸಪೇಟೆ ರಾಜಕಾರಣದಿಂದಾಗಿ ಆನೆಗೊಂದಿ ಮತ್ತು ಸಾಣಾಪೂರ ಭಾಗದ ಗ್ರಾಮಗಳಲ್ಲಿದ್ದ ಸಣ್ಣಪುಟ್ಟ ವ್ಯಾಪಾರವನ್ನು ಸ್ಥಗಿತ ಮಾಡಲಾಗಿದೆ. ಸ್ಥಳೀಯ ಯುವಕರು ನಿರುದ್ಯೋಗಿಗಳಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಇದರಲ್ಲಿ ರಾಜಕೀಯ ಮಾಡುತ್ತಿಲ್ಲ. ಹೆಸರಿಗೆ ಮಾತ್ರ ಅಂಜನಾದ್ರಿ ಅಭಿವೃದ್ಧಿ ಎನ್ನುತ್ತ ಹಂಪಿ ಅಭಿವೃದ್ಧಿ ಪ್ರಾಧಿಕಾರದ ನಿಯಮಗಳ ನೆಪದಲ್ಲಿ ಶೋಷಣೆ ಮಾಡಲಾಗುತ್ತಿದೆ. ಇನ್ನೂ ಮುಂದೆ ಇಂತಹ ದೌರ್ಜನ್ಯಗಳಿಗೆ ತಕ್ಕ ಉತ್ತರ ನೀಡಲಾಗುತ್ತದೆ.

ತಾವು ಡಿಕೆ ಶಿವಕುಮಾರ,ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಬಿ.ಕೆ.ಹರಿಪ್ರಸಾದ ಸೇರಿ ಎಲ್ಲಾ ಹಿರಿಯ ಕಾಂಗ್ರೆಸ್ ಮುಖಂಡರ ಸಾಮೂಹಿಕ ನಾಯಕ್ವದಲ್ಲಿ ನಂಬಿಕೆ ಇಟ್ಟು  ಯಾವುದೇ ಷರತ್ತಿಲ್ಲದೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಗಂಗಾವತಿ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದು ಪಕ್ಷ ಯಾರಿಗೆ ಟಿಕೇಟ್ ನೀಡಿದರೂ ಗೆಲುವಿಗಾಗಿ ಶ್ರಮಿಸಲಾಗುತ್ತದೆ. ತಾವು ಪಕ್ಷಕ್ಕೆ ಸೇರ್ಪಡೆಯಾಗುವ ಮುಂಚೆ ಬೆಂಗಳೂರಿನಲ್ಲಿ ಹಿರಿಯ ಸಮ್ಮುಖದಲ್ಲಿ ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ, ಶಿವರಾಜ್ ತಂಗಡಗಿ, ರಾಯರೆಡ್ಡಿ ಸೇರಿ ಇತರೆ ಮುಖಂಡ ಜತೆ ಹಿರಿಯರು ಮಾತುಕತೆ ನಡೆಸಿದ ಸಂದರ್ಭದಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ್ದು  ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹಾಗೂ ಅವರ ಆಪ್ತರು ಪಕ್ಷದ ಸಂಘಟನೆಗೆ ಸಹಕಾರ ನೀಡಬೇಕೆಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಎಂ.ಸರ್ವೇಶ್ ಮಲ್ಲಿಕಾರ್ಜುನನಾಗಪ್ಪ, ಎಚ್.ಎಸ್.ಭರತ್, ಬಿ.ಕೃಷ್ಣಪ್ಪ, ಜೋಗದ ಲಿಂಗಪ್ಪ, ಮಹಮದ್ ಉಸ್ಮಾನ್ ಬಿಚ್ಚಗತ್ತಿ, ಗೌಳಿ ರಮೇಶ, ಆರ್.ಪಿ.ರೆಡ್ಡಿ, ಶೋಭಾಸಿಂಗ್, ಆಯುಬ್ ಖಾನ್, ವೀರನಗೌಡ ಪರನಗೌಡ,ವೀರಭದ್ರ,ಶಿವು ಕಂಪ್ಲಿ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.