ಬಿಜೆಪಿ ಮುಖಂಡರ ನಡೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಪೂರ್ವಾಪರ ತಿಳಿಯದ ಬಿಜೆಪಿ ಎಸ್‌ಸಿ ಮೋರ್ಚಾ ಸಿದ್ದರಾಮಯ್ಯರ ವಿರುದ್ಧ ಪ್ರತಿಭಟನೆ

Team Udayavani, Nov 12, 2021, 6:20 PM IST

ಬಿಜೆಪಿ ಮುಖಂಡರ ನಡೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಕೊಪ್ಪಳ: ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿ ಎಸ್‌ಸಿ ಮೋರ್ಚಾ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌
ಎಸ್‌ಸಿ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಶೋಷಿತ ವರ್ಗದ ಪರವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಅವಧಿ ಯಲ್ಲಿ ಹಲವು ಜನಪರ ಯೋಜನೆ ಘೋಷಣೆ ಮಾಡುವ ಮೂಲಕ ಎಲ್ಲ ವರ್ಗದ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ.

ಅಂತಹ ವ್ಯಕ್ತಿತ್ವದ ನಾಯಕನನ್ನು ದಲಿತ ವಿರೋಧಿ ಎಂದು ಬಿಜೆಪಿ ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಅಲ್ಲದೇ ದಲಿತ ಸಮುದಾಯ ಒಡೆಯುವ ಹುನ್ನಾರದಿಂದ ಬಿಜೆಪಿ ಈ ಕೆಲಸಕ್ಕೆ ಮುಂದಾಗಿದೆ. ಸಿದ್ದರಾಮಯ್ಯರ ವಿರುದ್ಧ ಬಿಜೆಪಿ ಎಸ್‌ಸಿ ಮೋರ್ಚಾ ಪ್ರತಿಭಟನೆ ನಡೆಸಿ ತಮ್ಮ ಕೀಳುಮಟ್ಟವನ್ನು ತೋರಿಸಿದೆ ಎಂದು ಕಾಂಗ್ರೆಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರು ದಲಿತ ನಾಯಕರಾದ ಗೋವಿಂದ ಕಾರಜೋಳ, ನಾರಾಯಣಸ್ವಾಮಿ, ರಮೇಶ ಜಿಗಜಿಣಗಿ ಅವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದಿದ್ದಾರೆ ವಿನಃ ದಲಿತ ವಿರೋಧಿ  ಹೇಳಿಕೆ ನೀಡಿಲ್ಲ. ಆದರೆ ಸುಮ್ಮನೆ ಸಿದ್ದರಾಮಯ್ಯರ ಹೇಳಿಕೆ ತಿರುಚಿ ಬಿಜೆಪಿ ವಿವಾದ ಸೃಷ್ಟಿಸಲು ಮುಂದಾಗಿದೆ. ಇದು ಅವರ ನೈತಿಕತೆಯನ್ನು ಪ್ರದರ್ಶನ ಮಾಡುತ್ತಿದೆ. ಪೂರ್ವಾಪರ ತಿಳಿಯದ ಬಿಜೆಪಿ ಎಸ್‌ಸಿ ಮೋರ್ಚಾ ಸಿದ್ದರಾಮಯ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದು ಖಂಡನೀಯ ಎಂದರು.

ದಲಿತರ ವಿರುದ್ಧ ಬಿಜೆಪಿಯ ತೇಜಸ್ವಿ ಸೂರ್ಯ, ಅನಂತಕುಮಾರ ಹೆಗಡೆ, ಸಿ.ಟಿ. ರವಿ ಸೇರಿದಂತೆ ಹಲವು ಬಿಜೆಪಿಯ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇಷ್ಟಾದರೂ ಬಿಜೆಪಿಯಲ್ಲಿನ ದಲಿತ ನಾಯಕರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಕಾಂಗ್ರೆಸ್‌ನಿಂದ ದಲಿತರ ಬಗ್ಗೆ ಕಾಳಜಿ ತೋರಿದೆ. ಆದರೆ ಬಿಜೆಪಿ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವನ್ನೇ ಸುಟ್ಟುಹಾಕಲು, ಬದಲಾವಣೆ ಮಾಡುವ ಹೇಳಿಕೆ ನೀಡಿದ್ದು ನಾಚಿಕೆಗೇಡಿನ ಸಂಗತಿ. ಕೂಡಲೇ ಸಿದ್ದರಾಮಯ್ಯರ ವಿರುದ್ಧ ಹೇಳಿಕೆ ನೀಡಿರುವ ಎಲ್ಲ ಬಿಜೆಪಿ ನಾಯಕರು, ಬಿಜೆಪಿ ಎಸ್‌ಸಿ ಮೋರ್ಚಾ ಕ್ಷಮೆ ಕೇಳಬೇಕು.

ದಲಿತ ಸಮಾಜವನ್ನು ಒಡೆಯುವ ಕೆಲಸಕ್ಕೆ ಮುಂದಾಗಬೇಡಿ ಎಂದು ಒತ್ತಾಯಿಸಿದರು. ಎಸ್‌ಸಿ ಮೋರ್ಚಾ ಮುಖಂಡರಾದ ಗೂಳಪ್ಪ ಹಲಗೇರಿ, ಗಾಳೆಪ್ಪ ಪೂಜಾರ, ಯಮನೂರಪ್ಪ ನಾಯಕ್‌, ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣಾರಡ್ಡಿ ಗಲಬಿ, ನಗರ ಬ್ಲಾಕ್‌ ಅಧ್ಯಕ್ಷ ಕಾಟನ್‌ ಪಾಷಾ, ಮುಖಂಡರಾದ ಕೆ.ಎಂ. ಸೈಯದ್‌, ಹುಸೇನ್‌ ಪೀರ, ಮಾನ್ವಿ ಪಾಷಾ, ಪರಶುರಾಮ ಕೆರೆಹಳ್ಳಿ ಸೇರಿ ಮಹಿಳಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.