
ಕಲುಷಿತ ನೀರು ಸೇವಿಸಿ ಬಚನಾಳ ಗ್ರಾಮದಲ್ಲಿ ವಾಂತಿ ಬೇಧಿ: ಇಪ್ಪತ್ತಕ್ಕೂ ಹೆಚ್ಚು ಜನ ಅಸ್ವಸ್ಥ
Team Udayavani, Nov 29, 2022, 6:45 PM IST

ದೋಟಿಹಾಳ: ಕಳೆದ ನಾಲ್ಕೈದು ದಿನಗಳಿಂದ ಕಲುಷಿತ ನೀರು ಸೇವಿಸಿ ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದಲ್ಲಿ ನಡೆದಿದೆ.
ಮೇಣೆದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ಬಚನಾಳ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿ ಭೇದಿ ಕಾಣಿಸಿಕೊಂಡು ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಸದ್ಯ ಈ ಗ್ರಾಮದ ಸುಮಾರು 20ಕ್ಕೂ ಹೆಚ್ಚು ರೋಗಿಗಳು ತಾವರೇಗರಾ ಮತ್ತು ಗಂಗಾವತಿ ಆಸ್ಪತ್ರೆಗಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು.
ಈ ಗ್ರಾಮದಲ್ಲಿ ಸುಮಾರು 200ಕ್ಕೂ ಅಧಿಕ ಮನೆಗಳಿದ್ದು, 2ಸಾವಿರ ಜನ ವಾಸಿಸುತಿದ್ದಾರೆ. ಗ್ರಾಮದ ಪಕ್ಕದ ಹಳ್ಳದ ದಡದಲ್ಲಿ ಕೊರೆಯಲಾಗಿರುವ ಕೊಳವೆಬಾವಿಯ ನೀರು ಸೇವನೆಯಿಂದ ಈ ವಾಂತಿ ಭೇದಿಗೆ ಕಾರಣವಾಗಿರಬಹುದು ಎಂದು ಗ್ರಾಮಸ್ಥರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.
ಈ ಗ್ರಾಮದಲ್ಲಿ ವಾಂತಿಭೇದಿಯ ವಿಷಯ ತಿಳಿದ ತಾಲೂಕು ವೈದ್ಯಾಧಿಕಾರಿ ಹಾಗೂ ಜಿಲ್ಲಾ ವೈದ್ಯಾಧಿಕಾರಿ ಸೇರಿದಂತೆ ಶಾಸಕರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಸ್ವಸ್ಥತೆಗೆ ಒಳಗಾದವರ ಆರೋಗ್ಯ ವಿಚಾರಿಸಿದ್ದಾರೆ ಹಾಗೂ ಗ್ರಾಮಸ್ಥರು ಸೇವಿಸುವ ನೀರನ್ನು ಆರೋಗ್ಯ ಇಲಾಖೆಯವರು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಶೇ.75ರಷ್ಟು ಪ್ಲೋರೈಡ್ ಯುಕ್ತ ನೀರು ಇರುವದು ಕಂಡುಬಂದಿದೆ. ಹೀಗಾಗಿ ತಾಲೂಕು ವೈದ್ಯಾಧಿಕಾರಿ ಡಾ.ಆನಂದ ಗೋಟೂರು ಅವರು ಈ ನೀರು ಕುಡಿಯಲು ನೀರು ಯೋಗ್ಯವಿಲ್ಲ ಸ್ಪಷ್ಟಪಡಿಸಿದ್ದಾರೆ.
ಗ್ರಾಮದಲ್ಲಿ ಇಂತಹ ಸ್ಥಿತಿಯಲ್ಲಿ ಆರೋಗ್ಯ ಇಲಾಖೆಯವರು ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಶಾಸಕರು ಇಂದು ಗ್ರಾಮಕ್ಕೆ ಭೇಟಿ ನೀಡಿದ ವೇಳೆ ನಾಳೆ ಗ್ರಾಮದಲ್ಲಿ ಒಂದು ತಾತ್ಕಾಲಿಕ ಚಿಕಿತ್ಸೆ ಕೇಂದ್ರ ತೆರೆಯಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.
ಹೀಗಾಗಿ ಗ್ರಾಮದ ಒಂದು ಸಮುದಾಯ ಭವನವನ್ನು ಸ್ವಚ್ಛತೆ ಮಾಡಲಾಗಿದೆ ಮತ್ತು ಸದ್ಯ ಗ್ರಾಮ ಪಂಚಾಯಿತಿಯರು ಕೊಳವೆಬಾವಿಯ ನೀರನ್ನು ಸ್ಥಗಿತ ಮಾಡಿ ಗ್ರಾಮಕ್ಕೆ ಜಲಜೀವನ ಮಿಷನ್ ಯೋಜನೆ ನದಿ ನೀರನ್ನು ಪೂರೈಸಲಾಗುತ್ತಿದೆ ಎಂದು ಪಿಡಿಒ ಹನುಮಂತರಾಯ ತಿಳಿಸಿದರು.
ಈ ಗ್ರಾಮದಲ್ಲಿ ಪ್ರತಿದಿನ 3-4 ವಾಂತಿ ಭೇದಿ ಪ್ರಕರಣಗಳು ಪತ್ತೆಯಾಗುತಿದ್ದು, ಹಿರೇಮನ್ನಾಪೂರ, ತಾವರಗೇರಾ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಸಿಗುವುದಿಲ್ಲ ಅಲ್ಲಿ ರೋಗಿಗಳಿಗೆ ವೈದ್ಯರು ಸರಿಯಾದ ರೀತಿ ಸ್ಪಂದನೆ ನೀಡದ ಕಾರಣ ಗ್ರಾಮಸ್ಥರು ಗಂಗಾವತಿ ಸೇರಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದ್ದೆ. ಆಸ್ಪತ್ರೆಗೆ ದಾಖಲಾದ ಒಬ್ಬೊಬ್ಬರು 20-30 ಸಾವಿರ ರೂಪಾಯಿ ಹಣ ಖರ್ಚುಗುತ್ತಿದ್ದು. ಬಡವರಿಗೆ ತುಂಬಾ ತೊಂದರೆಯಾಗುತ್ತಿದೆ.ಈ ಕುರಿತು ಡಿಹೆಚ್‌ಓ ಅವರ ಗಮನಕ್ಕೆ ತರಲಾಗಿದೆ ಎಂದು ಗ್ರಾಪಂ ಅಧ್ಯಕ್ಷ, ಸದಸ್ಯರುಗಳು ಹಾಗೂ ಗ್ರಾಮಸ್ಥರು ತಿಳಿಸಿದರು.
ಈ ವೇಳೆ ಗ್ರಾಮ ಪಂಚಾಯಿತಿ ಪಿಡಿಒ ಹನುಮಂತರಾಯ, ಗ್ರಾಪಂ ಅಧ್ಯಕ್ಷ ದಾವಲಭಾಷ ಸಾಬ್, ಗ್ರಾಪಂ ಸದಸ್ಯರು, ಮಾಜಿ ಅಧ್ಯಕ್ಷ ಶೇಖರಪ್ಪ ಸೂಳಿಕೇರಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಬಚನಾಳ ಗ್ರಾಮದಲ್ಲಿ ವಾಂತಿಭೇದಿ ಪ್ರಕರಣ ಗ್ರಾಮಸ್ಥರಿಂದ ತಿಳಿದು ಬಂದ ಕಾರಣ ಗ್ರಾಮಕ್ಕೆ ಭೇಟಿ ನೀಡಿದ್ದೇನೆ. ಗ್ರಾಮದ ಜನರು ಭಯಪಡುವ ಅಗತ್ಯ ಇಲ್ಲ. ಆರೋಗ್ಯ ಇಲಾಲೆ ಅಧಿಕಾರಿಗಳಿಗೆ ಗ್ರಾಮಸ್ಥರಿಗೆ ಸೂಕ್ತ ಚಿಕಿತ್ಸೆ ನೀಡಲು ತಿಳಿಸಿದ್ದೇನೆ.- ಅಮರೇಗೌಡ ಪಾಟೀಲ್ ಬಯ್ಯಾಪೂರ,ಶಾಸಕರು ಕುಷ್ಟಗಿ.
ಬಚನಾಳ ಗ್ರಾಮದಲ್ಲಿ ಕಳೆದ ಒಂದು ವಾರದಿಂದ 1-2 ವಾಂತಿಭೇದಿ ಪ್ರಕರಣಗಳು ಕಂಡು ಬಂದ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಯ ನೀರು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಶೇ.75ರಷ್ಟು ಪ್ಲೋರೈಡ್ ಯುಕ್ತ ನೀರು ಇರುವದು ಕಂಡು ಬಂದ್ದಿದೆ. ಅದನ್ನು ಸ್ಥಗಿತ ಮಾಡಿ ಬೇರೆ ನೀರು ಸರಬರಾಜು ಮಾಡಲು ಗ್ರಾಪಂನವರಿಗೆ ತಿಳಿಸಿಲಾಗಿದೆ ಹಾಗೂ ಆರೋಗ್ಯ ಸಿಬ್ಬಂದಿಗಳು ಅಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. –ಡಾ|| ಆನಂದ ಗೋಟುರು,ತಾಲೂಕು ವೈದ್ಯಾಧಿಕಾರಿ ಕುಷ್ಟಗಿ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೇಡಿಗಾಗಿ ಪಕ್ಷ ಸ್ಥಾಪಿಸಿಲ್ಲ, ಯಾರಿಗೂ ಹೆದರಲ್ಲ: ಜನಾರ್ದನ ರೆಡ್ಡಿ

ಸೋಮಶೇಖರ ರೆಡ್ಡಿ ವಿರುದ್ಧ ಅತ್ತಿಗೆ ಸ್ಪರ್ಧೆ

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಶ್ರೀ ರಾಮಮಂದಿರ ನಿರ್ಮಾಣದ ಕನಸು ಕಂಡವರಲ್ಲಿ ವಿಶ್ವೇಶ ತೀರ್ಥ ಶ್ರೀಗಳು ಪ್ರಮುಖರು: ಮುನವಳ್ಳಿ

ಬಿಜೆಪಿಯಲ್ಲೇ ಕುಟುಂಬ ರಾಜಕಾರಣ ಹೆಚ್ಚು… ರಾಜಕಾರಣಿಗಳ ಮಕ್ಕಳು ರಾಜಕಾರಣಿ ಆದರೆ ತಪ್ಪೇನು?
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

‘ಹೊಂದಿಸಿ ಬರೆಯಿರಿʼ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್