ಆರೋಗ್ಯ ಇಲಾಖೆ ನಿಯಮ ಪಾಲಿಸಿ


Team Udayavani, Oct 18, 2020, 3:49 PM IST

kopala-tdy-1

ಕೊಪ್ಪಳ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಸೇರಿ ವಿವಿಧ ಇಲಾಖೆಗಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ “ಕೋವಿಡ್‌-19 ಪ್ರಚಾರಾಂದೋಲನ'”ಸುರಕ್ಷಿತರಾಗಿರಿ ಮತ್ತು ಇತರರನ್ನು ಸುರಕ್ಷಿತವಾಗಿರಿಸಿ’ ಎಂಬ ಜನ ಆಂದೋಲನ ಜಾಥಾಕ್ಕೆ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾ ಧೀಶರಾದ ಬಿ.ಎಸ್‌. ರೇಖಾ ಅವರು ಚಾಲನೆ ನೀಡಿದರು.

ನ್ಯಾ| ಬಿ.ಎಸ್‌. ರೇಖಾ ಅವರು ಮಾತನಾಡಿ, ಮಹಾಮಾರಿ ಕೋವಿಡ್‌-19 ಹರಡುವಿಕೆ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ನ್ಯಾಯಾಲಯ, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು ಮತ್ತು ಎಲ್ಲೆಡೆ ಮಾಸ್ಕ್ ಹಾಕಿಕೊಳ್ಳದೇ ಇರುವವರಿಗೆ ಕಾನೂನಿನ ರೀತಿಯಲ್ಲಿ ತಿಳಿ ಹೇಳುವುದು, ಜನರಲ್ಲಿಇದರ ಬಗ್ಗೆ ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ “ಕೋವಿಡ್‌-19 ಪ್ರಚಾರಾಂದೋಲನ’ “ಸುರಕ್ಷಿತರಾಗಿರಿ ಮತ್ತುಇತರರನ್ನು ಸುರಕ್ಷಿತವಾಗಿರಿಸಿ’ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೋವಿಡ್ ಸಾಂಕ್ರಾಮಿಕ ರೋಗವು ಶ್ರೀಮಂತ, ಬಡವ ಎಂಬ ಬೇಧವಿಲ್ಲದೇ ಎಲ್ಲರನ್ನೂ ಕಾಡುತ್ತಿರುವ ಮಹಾಮಾರಿಯಾಗಿದೆ. ಎಲ್ಲಿಯವರೆಗೆ ಔಷಧ  ಲಭ್ಯವಾಗುವುದಿಲ್ಲವೋ, ಅಲ್ಲಿಯವರೆಗೆ ಜಾಗ್ರತೆಯಿಂದ ಮತ್ತು ಆರೋಗ್ಯದಕಡೆಗೆ ಗಮನಹರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ನ್ಯಾ| ಎಸ್‌.ಎಂ. ಜಾಲವಾದಿ, ನ್ಯಾ| ಕುಮಾರ ಎಸ್‌., ನ್ಯಾ| ಮನುಶರ್ಮಾ, ಕಿರ್ಲೋಸ್ಕರ್‌ ಫೆರಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ‌ ಉದಯ ಕುಲಕರ್ಣಿ ಸೇರಿದಂತೆ ವಕೀಲರು ಮತ್ತು ವಿವಿಧ ಇಲಾಖೆಗಳ ಹಾಗೂ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿಕಿರ್ಲೋಸ್ಕರ್‌ ಫೆರಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ವತಿಯಿಂದ ಮಾಸ್ಕ್ ವಿತರಿಸಲಾಯಿದೆ.

ವೈರಸ್‌ ಹತೋಟಿಗೆ ಜೀವನ ಶೈಲಿಗೆ ಬದಲಿಸಿಕೊಳ್ಳಿ :

ಕುಷ್ಟಗಿ: ಕೋವಿಡ್ ವೈರಸ್‌ ಸಮುದಾಯಿಕವಾಗಿ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ನ್ಯಾಯಾಲಯಗಳು ಕೋವಿಡ್‌-19 ಕುರಿತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದನ್ವಯ ಜಾಗೃತಿ ಆಂದೋಲನಕ್ಕೆ ಹಿರಿಯ ಶ್ರೇಣಿ ನ್ಯಾಯಾಲಯಗಳ ನ್ಯಾಯಾಧೀಶರಾದಬಿ.ಎಸ್‌. ಹೊನ್ನುಸ್ವಾಮಿ ಚಾಲನೆ ನೀಡಿದರು.

ಈ ವೇಳೆ ಸಾರ್ವಜನಿಕರಿಗೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಪಾಲಿಸುವ ಕುರಿತು ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಸಾಂಕೇತಿಕವಾಗಿ ಕೋವಿಡ್ ಜಾಗೃತಿ ಕರಪತ್ರ ವಿತರಿಸಿದರು.

ನಂತರ ಮಾತನಾಡಿದ ನ್ಯಾಯಾಧೀಶರಾದ ಹೊನ್ನುಸ್ವಾಮಿ ಅವರು, ಕೋವಿಡ್ ವೈರಸ್‌ ಶೂನ್ಯವಾಗುವವರೆಗೂ ಸಾರ್ವಜನಿಕರು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು, ಸೋಪಿನಿಂದ ಕೈ ತೊಳಿಯುವುದು ಜೀವನ ಶೈಲಿಗೆ ಬದಲಿಸಿಕೊಳ್ಳಬೇಕು ಎಂದರು.

ನ್ಯಾಯಾಧೀಶರಾದ ಚಂದ್ರಶೇಖರ ತಳವಾರ, ನ್ಯಾಯಾಧೀಶರಾದ ರಫೀಕ್‌ ಅಹ್ಮದ್‌, ತಹಶೀಲ್ದಾರ್‌ ಎಂ. ಸಿದ್ದೇಶ, ಸಿಪಿಐ ನಿಂಗಪ್ಪ ರುದ್ರಪ್ಪಗೋಳ್‌, ವೈದ್ಯಾಧಿ ಕಾರಿಡಾ| ಕೆ.ಎಸ್‌. ರಡ್ಡಿ, ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಎಚ್‌.ಬಿ. ಕುರಿಮತ್ತಿತರಿದ್ದರು. ಜಾಥಾದಲ್ಲಿ ಅಂಗನವಾಡಿ, ಆಶಾಕಾರ್ಯಕರ್ತೆಯರು, ಗೃಹರಕ್ಷಕ ದಳ, ಕಲಾವಿದರು, ವಕೀಲರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.