ಜಿಲ್ಲೆಯಲ್ಲಿ ಕೋವಿಡ್ ನ್ಪೋಟ

Team Udayavani, Jul 12, 2020, 1:22 PM IST

ಜಿಲ್ಲೆಯಲ್ಲಿ ಕೋವಿಡ್ ನ್ಪೋಟ

ಕೊಪ್ಪಳ: ಜಿಲ್ಲೆಯಲ್ಲಿ ಶನಿವಾರ ಬರೊಬ್ಬರಿ 44 ಜನರಿಗೆ ಕೋವಿಡ್ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಇದು ನಿಜಕ್ಕೂ ಜನರಲ್ಲಿ ಆತಂಕವನ್ನುಂಟು ಮಾಡಿದ್ದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು 11 ಜನರು ಬಿಡುಗಡೆಯಾಗಿದ್ದಾರೆ. ಓರ್ವ ಮಹಿಳೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಪ್ರತಿದಿನವೂ ಹತ್ತಾರು ಕೋವಿಡ್ ಕೇಸ್‌ ಜಿಲ್ಲೆಯಲ್ಲಿ ದೃಢಪಡುತ್ತಿರುವುದರಿಂದ ಜನರ ನೆಮ್ಮದಿ ಹಾಳಾಗಿದೆ. ಜಿಲ್ಲೆಯಲ್ಲಿ ಮೊದಲೆಲ್ಲ 20ರ ಸರಾಸರಿ ಸಂಖ್ಯೆಯಲ್ಲಿದ್ದ ಕೋವಿಡ್ ಸೋಂಕು ಈಗ ಬರೋಬ್ಬರಿ 44 ಜನರಿಗೆ ಸೋಂಕು ದೃಢಪಟ್ಟಿದೆ. ಇದೊಂದು ದೊಡ್ಡ ಆಘಾತವೆಂದರೂ ತಪ್ಪಾಗಲಾರದು. ಜಿಲ್ಲೆಯಲ್ಲಿಯೇ ಕೊರೊನಾ ಟೆಸ್ಟ್‌ ಸೆಂಟರ್‌ ಆರಂಭವಾಗಿರುವುದರಿಂದ ಪ್ರತಿನಿತ್ಯ ನೂರಕ್ಕೂ ಹೆಚ್ಚು ಜನರ ಸ್ವಾಬ್‌ ಪರೀಕ್ಷೆ ಮಾಡಲಾಗುತ್ತಿದೆ. ಇದರಿಂದ ದಿನೇ ದಿನೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗಿದೆ. ಅಲ್ಲದೇ ಸರ್ಕಾರ ಲಾಕ್‌ ಡೌನ್‌ ತೆರವು ಮಾಡಿದ ಬಳಿಕವಂತೂ ಅನ್ಯ ಜಿಲ್ಲೆ, ರಾಜ್ಯಗಳಿಂದ ಜನರು ನಿರ್ಭಯವಾಗಿಬಂದು ಮನೆ ಸೇರುತ್ತಿದ್ದಾರೆ. ಕೆಲವರು ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರೆ ಇನ್ನೂ ಕೆಲವರು ನಮಗ್ಯಾಕೇ ಅದೆಲ್ಲ ಎಂದು ಮೂಗು ಮುರಿಯುತ್ತಿದ್ದು, ಇದರಿಂದಲೇ ಸೋಂಕಿನ ಪ್ರಮಾಣ ದ್ವಿ ಶತಕ ದಾಟಿದೆ.

ಆಸ್ಪತ್ರೆಯಿಂದ 11 ಜನರ ಬಿಡುಗಡೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಚಿಕಿತ್ಸೆ ಪಡೆದು ಗುಣಮುಖರಾದವರ ಸಂಖ್ಯೆಯೂ ನೂರರ ಗಡಿ ದಾಟಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸೋಂಕಿತರು ಬೇಗ ಗುಣಮುಖರಾಗಿ ಮನೆ ಸೇರುತ್ತಿದ್ದು,ಶನಿವಾರ 11 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ ಇದುವರೆಗೂ ನೂರು ಜನರು ಆಸ್ಪತ್ರೆಯಿಂದ ಬಿಡುಗಡೆಯಾದ ಮಾಹಿತಿ ಲಭ್ಯವಾಗಿದೆ.

ಸಾವಿನ ಸಂಖ್ಯೆ ಆರಕ್ಕೆ: ಜಿಲ್ಲೆಯಲ್ಲಿ ಕೋವಿಡ್ ದಿಂದಾಗಿ ಸಾವಿನ ಸಂಖ್ಯೆಯು ಹೆಚ್ಚುತ್ತಿದೆ. ಈಚೆಗೆ ಐವರು ಸೋಂಕಿನಿಂದ ಬಳಲಿ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ, ಶನಿವಾರ 61 ವರ್ಷದ ಮಹಿಳೆ ಮೃತಪಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆಯೂ ಆರಕ್ಕೆ ಏರಿಕೆಯಾಗಿದೆ. ಇದು ಜನರಲ್ಲಿ ಆತಂಕ ಮೂಡಿಸುತ್ತಿದೆ.

2224 ಜನರ ವರದಿ ಬಾಕಿ: ಇನ್ನೂ ಜಿಲ್ಲಾಡಳಿತ ಅನ್ಯ ಜಿಲ್ಲೆ, ರಾಜ್ಯ ಸೇರಿದಂತೆ ವಿವಿಧ ಹೈರಿಸ್ಕ್ ಏರಿಯಾದಿಂದ ಆಗಮಿಸಿದ ಜನರ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನೆ ಮಾಡುತ್ತಿದ್ದು, ಈ ವರೆಗೂ 14284 ಜನರ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನೆ ಮಾಡಿದೆ. ಇವರಲ್ಲಿ 12060 ಜನರ ವರದಿ ನೆಗೆಟಿವ್‌ ಬಂದಿದೆ. ಇನ್ನೂ 2224 ಜನರ ವರದಿ ಬರುವುದು ಬಾಕಿಯಿದೆ.

ಟಾಪ್ ನ್ಯೂಸ್

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21publisher

ಪ್ರಕಾಶಕರು ಆರ್ಥಿಕವಾಗಿ ಸದೃಢರಾಗಲಿ

ಕುಷ್ಟಗಿ: ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋದ ವೃದ್ದ

ಕುಷ್ಟಗಿ: ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋದ ವೃದ್ದ

ಜಿಲ್ಲಾಸ್ಪತ್ರೆ ಸಮಸ್ಯೆ ವಾರದಲ್ಲಿ ಇತ್ಯರ್ಥ: ಆಚಾರ್‌

ಜಿಲ್ಲಾಸ್ಪತ್ರೆ ಸಮಸ್ಯೆ ವಾರದಲ್ಲಿ ಇತ್ಯರ್ಥ: ಆಚಾರ್‌

gangavathi news

ಸಿಂದಗಿ, ಹಾನಗಲ್ ನಲ್ಲಿ ಬಿಜೆಪಿಗೆ ಗೆಲುವು: ಸಚಿವ ಬಿ. ಶ್ರೀರಾಮುಲು

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

1school

ಇಂದಿನಿಂದ ಕಿರಿಯರೂ ಬರ್ತಾರೆ ಶಾಲೆಗೆ

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.