30 ತಿಂಗಳು ಬಳಿಕ ನಗರಸಭೆ ಅಧ್ಯಕ್ಷರ ದರ್ಬಾರ್‌

ಹೈಕೋರ್ಟ್‌ ನಿರ್ದೇಶನದಿಂದ ಫಲಿತಾಂಶ ಪ್ರಕಟ ! ಅಧ್ಯಕ್ಷರಾಗಿ ಲತಾ, ಉಪಾಧ್ಯಕ್ಷರಾಗಿ ಜರೀನಾ ಆಯ್ಕೆ

Team Udayavani, Apr 28, 2021, 4:56 PM IST

hftyht

ಕೊಪ್ಪಳ: ನಗರಸಭೆಗೆ ನೂತನ ಸದಸ್ಯರು ಆಯ್ಕೆಯಾದ 30 ತಿಂಗಳ ಬಳಿಕ ಅಧ್ಯಕ್ಷರ ದರ್ಬಾರ್‌ ಶುರುವಾಗಿದೆ. ಹೈಕೋರ್ಟ್‌ ನಿರ್ದೇಶನದ ಹಿನ್ನೆಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹೆಸರು ಘೋಷಣೆ ಮಾಡಲಾಯಿತು. ಅಧ್ಯಕ್ಷರಾಗಿ ಲತಾ ಗವಿಸಿದ್ದಪ್ಪ ಚಿನ್ನೂರು, ಉಪಾಧ್ಯಕ್ಷರಾಗಿ ಜರೀನಾ ಬೇಗಂ ಅರಗಂಜಿ ಅವರು ಆಯ್ಕೆಯಾಗಿದ್ದಾರೆ.

ನಗರಸಭೆ 31 ಸದಸ್ಯರ ಸ್ಥಾನಕ್ಕೆ 2018ರಲ್ಲಿ ಚುನಾವಣೆ ನಡೆದಿತ್ತು. ಆದರೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಹಂಚಿಕೆಯ ವಿಚಾರದಲ್ಲಿ ಸರ್ಕಾರವೇ ಪದೇ ಪದೆ ಪರಿಷ್ಕರಣೆ ಮಾಡಿದ್ದಲ್ಲದೇ, ಸ್ಥಳೀಯ ಸದಸ್ಯರೂ ಮೀಸಲಾತಿ ಪ್ರಶ್ನೆ ಮಾಡಿ ಕೋರ್ಟ್‌ ಮೊರೆ ಹೋಗಿದ್ದರು. ಕೊಪ್ಪಳ ನಗರಸಭೆ ಮೀಸಲಾತಿ ಪ್ರಕರಣ ಸೇರಿದಂತೆ ರಾಜ್ಯಾದ್ಯಂತ ಇರುವ ಸ್ಥಳೀಯ ಸಂಸ್ಥೆಯ ಮೀಸಲಾತಿ ವಿವಾದವು ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಾಕಿಯಿತ್ತು.

ಕಳೆದ 6 ತಿಂಗಳ ಹಿಂದೆ ಹೈಕೋರ್ಟ್‌ ಕೊಪ್ಪಳ ಚುನಾವಣಾಧಿಕಾರಿಗೆ ನಿರ್ದೇಶನ ನೀಡಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ನಡೆಸಬೇಕು. ಆದರೆ ಫಲಿತಾಂಶ ಘೋಷಣೆ ಮಾಡದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ ಗೆ ವರದಿ ಸಲ್ಲಿಸಬೇಕೆಂಬ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿ ಫಲಿತಾಂಶದ ವರದಿ ಕೋರ್ಟ್‌ಗೆ ಸಲ್ಲಿಸಲಾಗಿತ್ತು. ಕೊನೆಗೆ ಎರಡು ದಿನದ ಹಿಂದಷ್ಟೇ ಫಲಿತಾಂಶ ಪ್ರಕಟಿಸುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಎಸಿ ನಾರಾಯಣರಡ್ಡಿ ಕನಕರಡ್ಡಿ ನೇತೃತ್ವದಲ್ಲಿ ಫಲಿತಾಂಶ ಪ್ರಕಟಿಸಲಾಯಿತು.

ನಗರಸಭೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ ಸದಸ್ಯೆ ಲತಾ ಗವಿಸಿದ್ಧಪ್ಪ ಚಿನ್ನೂರು, ಉಪಾಧ್ಯಕ್ಷರಾಗಿ ಜರೀನಾ ಬೇಗಂ ಅರಗಂಜಿ ಅವರು ಆಯ್ಕೆಯಾದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರ ಹೆಸರು ಘೋಷಣೆ ಮಾಡುತ್ತಿದ್ದಂತೆ ನಗರಸಭೆಯ ಪೌರಾಯುಕ್ತ ಮಂಜುನಾಥ ಹೂಗುತ್ಛ ನೀಡಿ ಸನ್ಮಾನಿಸಿದರು. ಅಲ್ಲದೇ, ಇತರೆ ಸದಸ್ಯರು ಶುಭಾಶಯ ಕೋರಿದರು. ಹೊರಗಡೆ ಕೆಲವರು ವಿಜಯೋತ್ಸವ ಆಚರಣೆ ಮಾಡಿದರು. ಸೋಂಕು ಮರೆತ ಜನ: ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಣಿಸಲಿಲ್ಲ. ಕೆಲವರು ಮಾಸ್ಕ್ ಧರಿಸಿದ್ದು ಬಿಟ್ಟರೆ ಮತ್ತಾವ ನಿಯಮಗಳು ಪಾಲನೆಯಾಗಲಿಲ್ಲ. ಎಲ್ಲ ಸದಸ್ಯರು ಗುಂಪು ಗುಂಪಾಗಿಯೇ ಆಗಮಿಸಿ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಶುಭ ಕೋರಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.