ಶಾಸಕ ಪರಣ್ಣರಿಂದ ಪ್ರಗತಿಯ ಪರ್ವ

Team Udayavani, Sep 1, 2022, 2:44 PM IST

paranna news ad

ಗಂಗಾವತಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕನಸಿನೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜಯಿಶಾಲಿಯಾದ ಜನಪ್ರಿಯ ಶಾಸಕ ಪರಣ್ಣ ಮುನವಳ್ಳಿ ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ರಸ್ತೆ, ಪ್ರವಾಸೋದ್ಯಮ ಮತ್ತು  ಶೈಕ್ಷಣಿಕ ಸೇರಿ ಹಲವು ಸೌಕರ್ಯ ಕಲ್ಪಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ.

ಗಂಗಾವತಿ ಸೇರಿ ಸುತ್ತಲಿರುವ ಐತಿಹಾಸಿಕ ಮತ್ತು ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಿ ಇಡೀ ಕ್ಷೇತ್ರವನ್ನು ಪ್ರವಾಸೋದ್ಯಮವಾಗಿಸುವ ನಿಟ್ಟಿನಲ್ಲಿ ಅವರು ಕಾರ್ಯಯೋಜನೆ ರೂಪಿಸಿದ್ದಾರೆ.

ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟ, ಪಂಪಾ ಸರೋವರ, ಋಷಿಮುಖ ಪರ್ವತ, ವಾಲೀಕಿಲ್ಲಾ ಆದಿಶಕ್ತಿ ದೇಗುಲ, ಚಿಂತಾಮಣಿ, ನವವೃಂದಾವನಗಡ್ಡಿ, ವಾಣಿಭದ್ರೇಶ್ವರ ಬೆಟ್ಟ, ಹಿರೇಬೆಣಕಲ್‌ ಮೊರ್ಯರ ಬೆಟ್ಟ(ಶಿಲಾಸಮಾಧಿ ಅಥವಾ ಮನೆಗಳು), ಜಬ್ಬಲಗುಡ್ಡ ಗಂಡುಗಲಿ ಕುಮಾರರಾಮನ ಬೆಟ್ಟ, ವೆಂಕಟಗಿರಿ ಶ್ರೀ ವೆಂಕಟೇಶ್ವರ ದೇಗುಲ, ಹಿರೇಜಂತಗಲ್‌ ಶ್ರೀ ಪ್ರಸನ್ನಪಂಪಾ ವಿರೂಪಾಕ್ಷೇಶ್ವರ ದೇಗುಲ, ಅಯ್ಯಪ್ಪಸ್ವಾಮಿ ಗಿರಿ ಹೀಗೆ ಹಲವು ಐತಿಹಾಸಿಕ, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ ದೇಶ-ವಿದೇಶದ ಜನರಿಗೆ ಈ ಕ್ಷೇತ್ರಗಳನ್ನು ಪರಿಚಯಿಸುವ ಕಾರ್ಯ ಮಾಡಲು ಯೋಜನೆ ರೂಪಿಸಿ ಸರಕಾರದ ಮಟ್ಟದಲ್ಲಿ ಅನುಷ್ಠಾನ ಮಾಡುತ್ತಿದ್ದಾರೆ ಶಾಸಕ ಪರಣ್ಣ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಂಜನಾದ್ರಿಗೆ ಭೇಟಿ ನೀಡಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವಲ್ಲಿ ಶಾಸಕ ಪರಣ್ಣ ಶ್ರಮ ವಹಿಸಿದ್ದಾರೆ. ಅಂಜನಾದ್ರಿಗೆ ರೂಪ್‌ ವೇ ಅಗತ್ಯ ಸೌಕರ್ಯಕ್ಕೆ 120 ಕೋಟಿ, ಹಿಟ್ನಾಳ-ಗಂಗಾವತಿ ಚತುಷ್ಪಥ ರಸ್ತೆ ಕಾಮಗಾರಿಗಾಗಿ 349 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಅಂಜನಾದ್ರಿ ಸುತ್ತಲಿನ ರೈತರ 61 ಎಕರೆ ಭೂಮಿ ಸರಕಾರ ವಶಕ್ಕೆ ಪಡೆದು ವಸತಿ ಸಮುತ್ಛಯಗಳು, ಸ್ನಾನಘಟ್ಟ, ರಸ್ತೆ, ವಾಣಿಜ್ಯ ಸಂಕೀರ್ಣ ನಿರ್ಮಿಲು ಯೋಜನೆ ರೂಪಿಸಲಾಗಿದೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಸಂಗಾಪೂರ, ಆನೆಗೊಂದಿ, ಬಸಾಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು 13 ಕೋಟಿ ರೂ.ಗಳ ಮಂಜೂರಾತಿ., ಜೆಜೆಎಂ ಯೋಜನೆ ಮೂಲಕ ಮನೆ ಮನೆಗೆ ಕುಡಿಯುವ ನೀರು ಪೂರೈಸಲು 40 ಕೋಟಿ ರೂ. ಯೋಜನೆ ಅನುಷ್ಠಾನ ಮಾಡಲಾಗಿದೆ.

ಅಮೃತಸಿಟಿ ಯೋಜನೆ: ಗಂಗಾವತಿ ನಗರದಲ್ಲಿ ಅನುಷ್ಠಾನವಾಗುತ್ತಿರುವ ಅಮೃತಸಿಟಿ ಯೋಜನೆಯಡಿ 109 ಕೋಟಿ ರೂ.ಗಳ ಯೋಜನೆಯಡಿ 4.50 ಕೋಟಿ ರೂ.ಗಳ ರಸ್ತೆ, ಚರಂಡಿ ಹಾಗೂ ದುರುಗಮ್ಮನಹಳ್ಳದ ಹೂಳೆತ್ತುವ ಕಾಮಗಾರಿಗೆ 10 ಕೋಟಿ ರೂ.ಖರ್ಚು ಮಾಡಲಾಗಿದೆ. ನಗರಸಭೆ ನೂತನ ಕಟ್ಟಡ ನಿರ್ಮಾಣಕ್ಕೆ ಸುಮಾರು 6 ಕೋಟಿ ಹಣ ಮಂಜೂರು ಮಾಡಲಾಗಿದೆ.

ಆರೋಗ್ಯಸೇವೆ: ಗಂಗಾವತಿಯಲ್ಲಿರುವ ಸರಕಾರಿ ಆಸ್ಪತ್ರೆಗೆ ಸರಕಾರ ವಿಶೇಷ ಅನುದಾನದ ಮೂಲಕ ಸಿಟಿ ಸ್ಕ್ಯಾನಿಂಗ್‌ ಮಷಿನ್‌, ಆಕ್ಸಿಜನ್‌ ಮಿಷನ್‌ ಸೇರಿ ಹಲವು ಸೌಕರ್ಯ ಕಲ್ಪಿಸಲಾಗಿದೆ. ಶಾಸಕರ ಅನುದಾನದಲ್ಲಿ ಆಂಬ್ಯುಲೆನ್ಸ್‌ ವಿತರಿಸಲಾಗಿದೆ.

ಶೈಕ್ಷಣಿಕ ಪ್ರಗತಿ: ಗಂಗಾವತಿಯಲ್ಲಿ 2008 ರಿಂದ ವೃತ್ತಿಪರ ಕೋರ್ಸ್‌ಗಳ ಕಾಲೇಜು ಆರಂಭವಾಗಿವೆ. ಸರಕಾರಿ ಇಂಜಿನಿಯರಿಂಗ್‌ ಕಾಲೇಜು, ಶ್ರೀಕೊಲ್ಲಿನಾಗೇಶ್ವರರಾವ್‌ ಸರಕಾರಿ ಕಾಲೇಜ್‌ನಲ್ಲಿ ಹತ್ತು ಹಲವು ಸ್ನಾತಕೋತ್ತರ ಕೋರ್ಸ್‌ಗಳ ಜತೆಗೆ ಕೋಟ್ಯಂತರ ರೂ.ಗಳನ್ನು ಖರ್ಚು ಮಾಡಿ ಪ್ರಯೋಗಾಲಯ, ತರಗತಿ ಕೊಠಡಿ, ಸಭಾಂಗಣ, ಗ್ರಂಥಾಲಯ, ಮೈದಾನ ನಿರ್ಮಿಸಲಾಗಿದೆ. ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಪ್ರಾಪರ್‌ ಶಾಲೆ ನೂತನ ಕೊಠಡಿಗಳ ನಿರ್ಮಾಣಕ್ಕೆ 16 ಲಕ್ಷ ರೂ. ಖರ್ಚು ಮಾಡಲಾಗಿದೆ. ಕೃಷಿ ಮಹಾವಿದ್ಯಾಲಯ ಕಾರ್ಯಾರಂಭ ಮಾಡಿದ್ದು ಶಾಸಕರ ವಿಶೇಷ ನಿಧಿಯಿಂದ 5.5 ಕೋಟಿ ಖರ್ಚು ಮಾಡಿ ವಿದ್ಯಾರ್ಥಿ ನಿಲಯ, ಎರಡು ಬಿಸಿಎಂ ಕಾಲೇಜು ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 3.30 ಕೋಟಿ, ಎಸ್ಸಿ, ಎಸ್ಟಿ ಹಾಸ್ಟೇಲ್‌ ನಿರ್ಮಾಣಕ್ಕೆ 3.50 ಕೋಟಿ, ಅಬ್ದುಲ್‌ ಕಲಾಂ ಆಜಾದ್‌ ಆದರ್ಶ ಶಾಲೆ ನಿರ್ಮಾಣಕ್ಕೆ 1.80 ಕೋಟಿ, ಅರಳಿಹಳ್ಳಿಯಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ ನಿರ್ಮಾಣಕ್ಕೆ 9 ಕೋಟಿ ರೂ., ಶಾಲಾಕಾಲೇಜು ಕೊಠಡಿಗಳ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 2 ಕೋಟಿ ರೂ. ಖರ್ಚು ಮಾಡಲಾಗಿದೆ.

ಪ್ರವಾಸೋದ್ಯಮಕ್ಕೆ ಆದ್ಯತೆ: ಶಾಸಕ ಪರಣ್ಣ ಮುನವಳ್ಳಿಯವರು ಕಿಷ್ಕಿಂದಾ ಅಂಜನಾದ್ರಿ ಬೆಟ್ಟ ಸೇರಿ ಸುತ್ತಲಿನ ಪ್ರವಾಸಿತಾಣಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ವಿಶೇಷ ಅನುದಾನ ತಂದು ಮುಂದಿನ 8 ತಿಂಗಳಲ್ಲಿ ಯೋಜನೆ ಅನುಷ್ಠಾನ ಮಾಡಲು ಅಧಿಕಾರಿಗಳು ಕಾರ್ಯ ಮಾಡುತ್ತಿದ್ದಾರೆ. ಹಿರೇಜಂತಗಲ್‌ ಪಂಪಾಪತಿ ದೇಗುಲಕ್ಕೆ 10 ಲಕ್ಷ, ಶ್ರೀರಾಘವೇಂದ್ರಸ್ವಾಮಿ ಮಠಕ್ಕೆ 10 ಲಕ್ಷ, ವೆಂಕಟರಮಣ ದೇಗುಲಕ್ಕೆ 10 ಲಕ್ಷ ರೂ. ಮಂಜೂರು ಮಾಡಲಿದೆ. ಆದಿಶಕ್ತಿ ದೇಗುಲದ ಗೋಶಾಲೆಗೆ 25 ಲಕ್ಷ ರೂ. ಮಂಜೂರು ಮಾಡಲಾಗಿದೆ.

ಹಕ್ಕುಪತ್ರ ವಿತರಣೆ: ಗಂಗಾವತಿಯಲ್ಲಿ ಸ್ಲಂ ಪ್ರದೇಶದಲ್ಲಿರುವ 96 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ, ಅರಣ್ಯವಾಸಿಗಳ ಕಲ್ಯಾಣ ಯೋಜನೆಯಡಿ ಮುಕ್ಕುಂಪಿ, ಅರಸಿನಕೆರೆ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ವಿರೂಪಾಪೂರ ಗಡ್ಡಿಯಿಂದ ಸ್ಥಳಾಂತರಗೊಂಡ 72 ಕುಟುಂಬಗಳಿಗೆ ಕರಿಯಮ್ಮಗಡ್ಡಿ ಹತ್ತಿರ ನಿವೇಶನ ಮಾಡಿ ಹಕ್ಕುಪತ್ರ ವಿತರಣೆಗೆ ಯೋಜನೆ ರೂಪಿಸಲಾಗಿದೆ.

ನೀರಾವರಿ: 2008 ಮತ್ತು 2018-22ರ ವರೆಗಿನ ಅವಧಿಯಲ್ಲಿ ಗಂಗಾವತಿ ಕ್ಷೇತ್ರದಲ್ಲಿ ನೀರಾವರಿಗಾಗಿ ಶಾಸಕ ಪರಣ್ಣ ಮುನವಳ್ಳಿ ಕೋಟ್ಯಂತರ ರೂ.ಗಳ ಅನುದಾನ ತಂದು ಕಾಮಗಾರಿ ಅನುಷ್ಠಾನ ಮಾಡಿಸುತ್ತಿದ್ದಾರೆ. ಪುರಾತನ ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿಗೆ 460 ಕೋಟಿ, ಮುಕ್ಕುಂಪಿ ಕೆರೆ ಮತ್ತು ಸುತ್ತಲಿನ 6 ಕೆರೆಗಳನ್ನು ತುಂಗಭದ್ರಾ ನದಿಯಿಂದ ಪ್ರವಾಹದ ಸಂದರ್ಭದಲ್ಲಿ ಭರ್ತಿ ಮಾಡುವ ಕಾಮಗಾರಿಗಾಗಿ 105 ಕೋಟಿ ರೂ.,ಇರಕಲ್‌ ಭಾಗದ ಕೆರೆಗಳನ್ನು ಭರ್ತಿ ಮಾಡಲು ಕೃಷ್ಣಾ ಬೀ ಸ್ಕೀಂ ಯೋಜನೆ ಕಾಮಗಾರಿಗಾಗಿ 56 ಕೋಟಿ ರೂ. ಮಂಜೂರು ಮಾಡಿಸಲಾಗಿದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.