270 ಆಕ್ಸಿಜನ್‌ ಬೆಡ್‌ ಆರಂಭಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ

ಕೋವಿಡ್‌ಗೆ ಮೆಡಿಕಲ್‌ ವಿದ್ಯಾರ್ಥಿಗಳ ಬಳಕೆ ­ತುರ್ತಾಗಿ ನಡೆಯಬೇಕಿದೆ ಬೆಡ್‌ಗಳ ವ್ಯವಸ್ಥೆ

Team Udayavani, May 8, 2021, 6:46 PM IST

ytyrrtyryrt

ವರದಿ : ದತ್ತು ಕಮ್ಮಾರ

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಿರುವುದನ್ನು ಮನಗೊಂಡ ಜಿಲ್ಲಾಡಳಿತ ಸೋಂಕಿತರ ಚಿಕಿತ್ಸೆಗಾಗಿ 270 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆಗೆ ನಿರ್ಧರಿಸಿದೆ. ಇದಲ್ಲದೇ, ಕೋವಿಡ್‌ಗಾಗಿ ಸದ್ಯ ಕೊಪ್ಪಳ ಮೆಡಿಕಲ್‌ ಕಾಲೇಜಿನ 142 ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಮುಂದಾಗಿದ್ದು, ಬೆಡ್‌ಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಜಿಲ್ಲೆಯಲ್ಲಿ ಮೊದಲ ಅಲೆ ಹಾಗೂ ಎರಡನೆ ಅಲೆಯಲ್ಲಿ ಆರಂಭಿಕದಲ್ಲಿ ಸೋಂಕಿನ ಪ್ರಮಾಣ ಹೆಚ್ಚು ಇರಲಿಲ್ಲ. ಕ್ರಮೇಣ ಸೋಂಕಿನ ಆರ್ಭಟವು ಜೋರಾಗುತ್ತಿದ್ದು, ಅದರೊಟ್ಟಿಗೆ ಸಾವಿನ ಸಂಖ್ಯೆಯು ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದು ಜನರಲ್ಲಿ ಆತಂಕ ತರಿಸುತ್ತಿದೆ. ಈಗಾಗಲೆ ಜಿಲ್ಲೆಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಬೆಡ್‌ಗಳೂ ಬಹುತೇಕ ಭರ್ತಿಯಾಗಿವೆ. ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಬೆಡ್‌ಗಳು ಭರ್ತಿಯಾಗಿದ್ದು ಕೆಳ ಹಾಗೂ ಮಧ್ಯಮ ವರ್ಗದ ಜನ ಸೋಂಕು ದೃಢಪಟ್ಟಾಗ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳುತ್ತಿದ್ದರೆ ಬೆಡ್‌ಗಳೇ ಸಿಗುತ್ತಿಲ್ಲ. ಅತ್ತ ಖಾಸಗಿ ಆಸ್ಪತ್ರೆಗಳತ್ತ ಹೋಗಲು ಶುಲ್ಕಕ್ಕಾಗಿಯೇ ಹೆದರುತ್ತಿದ್ದಾರೆ. ಇದರಿಂದ ಬೆಡ್‌ಗಳ ಕೊರತೆಯೂ ಸೃಷ್ಟಿಯಾಗಿವೆ.

ಜಿಲ್ಲೆಯ ಸಮಸ್ಯೆ ಅರಿತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್‌ ಅವರು ಎರಡು ದಿನ ಜಿಲ್ಲೆಯಲ್ಲಿನ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರೊಟ್ಟಿಗೆ ಜಿಲ್ಲೆಯ ಶಾಸಕ ಸಂಸದರು ವಿವಿಧ ಜನಪ್ರತಿನಿಧಿ ಗಳೂ ಸಹ ಪರಿಸ್ಥಿತಿ ನಿಯಂತ್ರಿಸಲು ಸಮಾಲೋಚನೆ ನಡೆಸಿ, ಸರ್ಕಾರಕ್ಕೆ 270 ಆಕ್ಸಿಜನ್‌ ಬೆಡ್‌ಗಳ ಆರಂಭಕ್ಕೂ ಮನವಿ ಮಾಡಿದ್ದಾರೆ. ಈ ಬೆನ್ನಲ್ಲೇ ಜಿಲ್ಲಾಡಳಿತವು ಸರ್ಕಾರಕ್ಕೆ ಬೆಡ್‌ಗಳ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜೊತೆಗೆ ಬೆಡ್‌ಗಳಿಗೆ ಅಗತ್ಯಕ್ಕನುಗುಣವಾಗಿ 3 ಕೆ.ಎಲ್‌ ಆಕ್ಸಿಜನ್‌ ಬಳಕೆಗೂ ಸರ್ಕಾರಕ್ಕೆ ಅನುಮತಿ ಕೇಳಿದೆ.

ಎಲ್ಲೆಲ್ಲಿ ಆಕ್ಸಿಜನ್‌ ಬೆಡ್‌ ವ್ಯವಸ್ಥೆ?: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ 50 ಆಕ್ಸಿಜನ್‌ ಬೆಡ್‌, ಕೊಪ್ಪಳದ ಗವಿಸಿದ್ದೇಶ್ವರ ಆರ್ಯುವೇದ ಆಸ್ಪತ್ರೆಯಲ್ಲಿ 100 ಆಕ್ಸಿಜನ್‌ ಬೆಡ್‌, ಮುನಿರಾಬಾದ್‌ ಸಾರ್ವಜನಿಕ ಆಸ್ಪತ್ರೆಯಲ್ಲಿ 30 ಬೆಡ್‌, ತಾವರಗೇರಾದ ಸಾರ್ವಜನಿಕ ಆಸ್ಪತ್ರೆಯಲ್ಲಿ 30 ಬೆಡ್‌, ಹನುಮಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ 30 ಬೆಡ್‌, ಶ್ರೀರಾಮನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ 30 ಬೆಡ್‌ ಸೇರಿದಂತೆ ಒಟ್ಟು 270 ಆಕ್ಸಿಜನ್‌ ಬೆಡ್‌ಗಳು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿವೆ.

ಮೆಡಿಕಲ್‌ ವಿದ್ಯಾರ್ಥಿಗಳ ಬಳಕೆ: ಇನ್ನೂ ಜಿಲ್ಲೆಯಲ್ಲಿಯೇ ಮೆಡಿಕಲ್‌ ಕಾಲೇಜು ಇದ್ದು, ಕಾಲೇಜಿನ ಅಂತಿಮ ವರ್ಷದ 142 ವಿದ್ಯಾರ್ಥಿಗಳನ್ನು ಕೋವಿಡ್‌ ಕರ್ತವ್ಯಕ್ಕೆ ಬಳಕೆ ಮಾಡಿಕೊಳ್ಳಲು ಜಿಲ್ಲಾಡಳಿತವು ನಿರ್ಧರಿಸಿದೆ. ಇಂದು ಜಿಲ್ಲೆಗೆ ಒಂದು ರೀತಿಯ ವರದಾನವಾಗಿದೆ. ಮೊದಲೇ ವೈದ್ಯರ ಕೊರತೆಯಿಂದ ನರಳುತ್ತಿದ್ದ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳು ನೂರೆಂಟು ಸಮಸ್ಯೆ ಎದುರಿಸುತ್ತಿದ್ದವು, ಕೋವಿಡ್‌ ನಿರ್ವಹಣೆಯು ಯುದೊœàಪಾದಿಯಲ್ಲಿ ಮಾಡಬೇಕಾದ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿ ನಿಯಂತ್ರಿಸಲು 142 ವಿದ್ಯಾರ್ಥಿಗಳ ಬಳಕೆಗೆ ಮುಂದಾಗಿದೆ.

ತುರ್ತಾಗಿ ನಡೆಯಬೇಕಿದೆ ಬೆಡ್‌ ಅಳವಡಿಕೆ: ಸೋಂಕಿನ ಪ್ರಮಾಣ ಜಿಲ್ಲೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವೇನೋ 270 ಬೆಡ್‌ಗಳ ವ್ಯವಸ್ಥೆಗೆ ಮುಂದಾಗಿದೆ. ಆದರೆ ಆ ಎಲ್ಲ ಬೆಡ್‌ ಗಳು ಇದ್ದರೂ ಆಕ್ಸಿಜನ್‌ ಅಳವಡಿಕೆಗೆ ಕಾಲವಕಾಶ ಬೇಕಿದೆ. ಸದ್ಯದ ಪರಿಸ್ಥಿತಿ ಅರಿತು ಜಿಲ್ಲಾಡಳಿತವು ತುರ್ತಾಗೆ ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಿದರೆ ಕನಿಷ್ಟ ನಿತ್ಯವೂ ಬೆಡ್‌, ಆಕ್ಸಿಜನ್‌ ಇಲ್ಲದೇ ಜನರು ಸಾವನ್ನಾದರೂ ತಪ್ಪಿಸಬಹುದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಕಾರ್ಯ ವೇಗವಾಗಬೇಕಿದೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.