ಪಂಪಾ ಸರೋವರ: ಜಯಲಕ್ಷ್ಮಿ ಮೂರ್ತಿ ಮತ್ತು ಶ್ರೀ ಚಕ್ರ ಸ್ಥಳಾಂತರಕ್ಕೆ ಸಂಜೀವ ಮರಡಿ ವಿರೋಧ
Team Udayavani, May 28, 2022, 1:08 PM IST
ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಪಂಪಾ ಸರೋವರದ ಗರ್ಭಗುಡಿಯನ್ನು ಆಗೆದು ಜಯಲಕ್ಷ್ಮಿ ಮೂರ್ತಿ ಮತ್ತು ಶ್ರೀ ಚಕ್ರವನ್ನು ಅಕ್ರಮವಾಗಿ ಸ್ಥಳಾಂತರ ಮಾಡಿರುವುದನ್ನು ಶ್ರೀರಾಮ ಸೇನೆ ಖಂಡಿಸುತ್ತದೆ ಇದಕ್ಕೆ ಕಾರಣರಾದವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸುವಂತೆ ಶ್ರೀರಾಮ ಸೇನೆಯ ವಿಭಾಗೀಯ ಅಧ್ಯಕ್ಷ ಸಂಜೀವ ಮರಡಿ ಆಗ್ರಹಿಸಿದ್ದಾರೆ ಖಂಡಿಸಿದ್ದಾರೆ .
ಪಂಪಾ ಸರೋವರ ಗರ್ಭಗುಡಿಯ ಅಗೆದಿರುವ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಅವರು, ಹಿಂದೂಗಳ ಪವಿತ್ರ ಕ್ಷೇತ್ರಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಜೀರ್ಣೋದ್ಧಾರದ ನೆಪದಲ್ಲಿ ಪಂಪಾಸರೋವರದ ಜಯಲಕ್ಷ್ಮಿ ಗುಡಿಯನ್ನು ಅಗೆದು ಮೂರ್ತಿ ಮತ್ತು ಪವಿತ್ರ ಶ್ರೀಚಕ್ರವನ್ನು ಅಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ .ಈ ಸಂದರ್ಭದಲ್ಲಿ ಪುರಾತತ್ವ ಪ್ರಾಚ್ಯವಸ್ತು ಇಲಾಖೆ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ತಾಲ್ಲೂಕು ಜಿಲ್ಲಾ ಮಟ್ಟದ ಯಾವುದೇ ಅಧಿಕಾರಿಗಳು ಇಲ್ಲದೇ ಇರುವುದು ಖಂಡನೀಯ ಎಂದಿದ್ದಾರೆ.
ಅದಕ್ಕೆ ಕಾರಣ ಅವರ ವಿರುದ್ಧ ಕೂಡಲೇ ಸರಕಾರ ಜಿಲ್ಲಾಡಳಿತ ಕೇಸ್ ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಶ್ರೀರಾಮಸೇನೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳು ದೇವರ ದೇವಾಲಯಗಳನ್ನು ಅಭಿವೃದ್ಧಿ ಮಾಡಲು ಅನುಮತಿ ನೀಡುವ ಸಂದರ್ಭದಲ್ಲಿ ಕಠಿಣ ಕಾನೂನು ಕ್ರಮ ಅನ್ವಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ವಿಡಿಯೋದಲ್ಲಿ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.
ಕೂಡಲೇ ಪುರಾತತ್ವ ಇಲಾಖೆ ಪ್ರಾಚ್ಯವಸ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡುವಂತೆ ಸಂಜು ಮರಡಿ ವೀಡಿಯೊದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
ಹೈಕೋರ್ಟ್ ಸೂಚನೆಯಂತೆ ವಿರೂಪಾಪೂರಗಡ್ಡಿ ಹಳೆ ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ
ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ
ಮಳೆಯ ನಡುವೆಯೂ ವಿದ್ಯುತ್ ತಂತಿ ದುರಸ್ತಿಗೊಳಿಸಿ ಜೆಸ್ಕಾಂ ಸಿಬ್ಬಂದಿಗಳ ಕರ್ತವ್ಯ ಪ್ರಜ್ಞೆ
ಕುಷ್ಟಗಿ : ತಡೆಗೋಡೆಗೆ ಢಿಕ್ಕಿ ಹೊಡೆದ ಬೈಕ್ : ತಂದೆ ಮಗಳು ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ
MUST WATCH
ಹೊಸ ಸೇರ್ಪಡೆ
ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ
ಚಿಕ್ಕೋಡಿ: ವಿದ್ಯುತ್ ಅವಘಡದಿಂದ ವಿದ್ಯಾರ್ಥಿನಿ ಸಾವು: ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ
ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ
ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ
ಕೆಲಸಕಿದ್ದ ಮನೆಯಲ್ಲಿ ನಗನಾಣ್ಯ ಕದ್ದ ತಾಯಿ-ಮಗಳು