ವಿಜಯನಗರ ಕಾಲುವೆ ದುರಸ್ತಿಗೆ ಚಾಲನೆ

Team Udayavani, May 12, 2019, 4:56 PM IST

kopp-3

ಗಂಗಾವತಿ: ತುಂಗಭದ್ರಾ ಡ್ಯಾಂ ನಿರ್ಮಾಣಕ್ಕೂ ಮೊದಲೇ ನದಿಗೆ ನೈಸರ್ಗಿಕವಾಗಿ ನಿರ್ಮಿಸಿದ್ದ ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿ ಕಾರ್ಯಕ್ಕೆ ಕೊನೆಗೂ ಸರಕಾರ ಹಾಗೂ ಏಷಿಯನ್‌ ಅಭಿವೃದ್ಧಿ ಬ್ಯಾಂಕು ಚಾಲನೆ ನೀಡಿದ್ದು, ಮುಂದಿನ ಜನವರಿಯಲ್ಲಿ ದುರಸ್ತಿ ಕಾರ್ಯ ಆರಂಭಿಸುವಂತೆ ರೈತರು ಸಲಹೆ ನೀಡಿದ್ದಾರೆ. ಇದಕ್ಕಾಗಿ ಒಂದು ಬೆಳೆಯನ್ನು ಬೆಳೆಯದಿರಲು ರೈತರು ತೀರ್ಮಾನಿಸಿದ್ದಾರೆ. 2007-08ನೇ ಸಾಲಿನಲ್ಲಿ ಕಲಬುರ್ಗಿಯಲ್ಲಿ ಜರುಗಿದ ರಾಜ್ಯ ಸರಕಾರದ ಕ್ಯಾಬಿನೆಟ್ ಸಭೆಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಜಯನಗರ ಕಾಲುವೆಗಳ ದುರಸ್ತಿ ಮಾಡುವ ನಿರ್ಣಯ ಕೈಗೊಂಡಿದ್ದರು. ಬೃಹತ್‌ ಕಾಮಗಾರಿ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವುದರಿಂದ ಕೇಂದ್ರ ಜಲಸಂಪನ್ಮೂಲ ಇಲಾಖೆ ಮತ್ತು ಪರಿಸರ ಇಲಾಖೆಗಳ ಪರವಾನಗಿ ಅಗತ್ಯವಿತ್ತು. ಕೇಂದ್ರ ಸರಕಾರದ ಪರವಾನಗಿ ಪಡೆದು ಏಷಿಯನ್‌ ಅಭಿವೃದ್ಧಿ ಬ್ಯಾಂಕ್‌ ಹಣಕಾಸು ನೆರವಿನೊಂದಿಗೆ ಕಾಮಗಾರಿ ಕೈಗೊಳ್ಳಲು ರಾಜ್ಯ ಸರಕಾರ ತೀರ್ಮಾನಿಸಿದೆ. 432 ಕೋಟಿ ವೆಚ್ಚದಲ್ಲಿ ವಿಜಯನಗರ ಕಾಲುವೆಗಳ ದುರಸ್ತಿ ನಡೆಯಲಿದ್ದು, ಹುಬ್ಬಳ್ಳಿಯ ಆರ್‌.ಎನ್‌. ಶೆಟ್ಟಿ ಮತ್ತು ಕಂಪನಿ ಕಾಲುವೆ ಶಾಶ್ವತ ದುರಸ್ತಿ ಕಾಮಗಾರಿ ಗುತ್ತಿಗೆ ಪಡೆದಿದೆ.

ಹಂಪಿ, ಆನೆಗೊಂದಿ, ಕಿಷ್ಕಿಂದಾ ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ವಿಜಯನಗರ ಕಾಲುವೆಗಳು ಇರುವುದರಿಂದ ಅಲ್ಲಿಯ ಪರಿಸರಕ್ಕೆ ಧಕ್ಕೆಯಾಗದಂತೆ ಮತ್ತು ತುಂಗಭದ್ರಾ ನದಿಯಲ್ಲಿರುವ ಚೀರ್‌ ನಾಯಿ ಸೇರಿ ಜಲಚರಗಳಿಗೆ ಹಾನಿಯಾದಂತೆ ಕಾಮಗಾರಿ ನಿರ್ವಹಿಸಬೇಕಿದ್ದು, ಈಗಾಗಲೇ ಏಷಿಯನ್‌ ಬ್ಯಾಂಕಿನ ಅಧಿಕಾರಿಗಳು ಆನೆಗೊಂದಿ, ಸಾಣಾಪೂರ, ಹನುಮನಹಳ್ಳಿ ಜನರು ಮತ್ತು ರೈತರ ಜತೆ ಹಲವು ಸುತ್ತಿನ ಮಾತುಕತೆ ಸಲಹೆ ಸೂಚನೆ ಪಡೆದಿದೆ. ಇದೀಗ ಅಂತಿಮವಾಗಿ ಕಾಮಗಾರಿಯನ್ನು 2019 ಡಿಸೆಂಬರ್‌ನಲ್ಲಿ ಕಾಲುವೆ ದುರಸ್ತಿ ಕಾರ್ಯ ನಡೆಸಲು ಆರ್‌.ಎನ್‌. ಶೆಟ್ಟಿ ಕಂಪನಿ ನಿರ್ಧರಿಸಿತ್ತು. ರೈತರ ಜತೆ ನಡೆಸಿದ ಮಾತುಕತೆ ವೇಳೆ ಡಿಸೆಂಬರ್‌ ಬದಲಿಗೆ 2020 ಜನವರಿ ಕೊನೆಯ ವಾರದಲ್ಲಿ ಕಾಮಗಾರಿ ನಡೆಸುವ ಮೂಲಕ ಬೆಳೆದು ನಿಂತ ಬೆಳೆಗಳನ್ನು ಕಟಾವು ಮಾಡಿದ ನಂತರ ಕೆಲಸ ಆರಂಭಿಸುವಂತೆ ರೈತರ ಸಲಹೆ ಹಿನ್ನೆಲೆಯಲ್ಲಿ ಮುಂದಿನ ವರ್ಷ ಕಾಮಗಾರಿ ಆರಂಭಿಸಲು ಈಗಾಗಲೇ ಅಗತ್ಯ ಕಾರ್ಯ ನಡೆದಿದೆ.

ಶಿವಪೂರ, ಸಾಣಾಪೂರ, ಕಂಪ್ಲಿ, ದೇವಘಾಟನಲ್ಲಿ ತುಂಗಭದ್ರಾ ನದಿಯಲ್ಲಿ ನಿರ್ಮಿಸಿರುವ ಅಣೆಕಟ್ಟು, ಮುಖ್ಯಕಾಲುವೆ, ಕಾಲುವೆ ಮೇಲಿನ ರಸ್ತೆ ಹಾಗೂ ಉಪಕಾಲುವೆಗಳ ಶಾಶ್ವತ ದುರಸ್ತಿ ಕಾರ್ಯಕ್ಕೆ ಡಿಪಿಆರ್‌ ಸಿದ್ಧಪಡಿಸಲಾಗಿದೆ. ರೈತರ ಸಲಹೆಯಂತೆ ಕಾಮಗಾರಿ ನಡೆಸಲು ಸರಕಾರ ಸೂಚನೆ ನೀಡಿದೆ. ಹೊಸಪೇಟೆ, ಕಂಪ್ಲಿ, ಕೊಪ್ಪಳ, ಗಂಗಾವತಿ, ಸಿರಗುಪ್ಪಾ ತಾಲೂಕುಗಳಲ್ಲಿ ವಿಜಯನಗರ ಕಾಲುವೆಗಳಿದ್ದು ಸಾವಿರಾರು ಎಕರೆ ಭೂಪ್ರದೇಶಕ್ಕೆ ನೀರಾವರಿ ಮಾಡಲಾಗಿದೆ. ಡ್ಯಾಮ್‌ ನಿರ್ಮಾಣ ನಂತರ ಎಡ ಮತ್ತು ಬಲದಂಡೆ ಕಾಲುವೆ ಮೂಲಕ ರೈತರು ಭೂಮಿಗೆ ನೀರು ಪಡೆಯುತ್ತಿದ್ದಾರೆ. ಆದರೆ ಹಳೆಯ ಮಗಾಣಿ ರೈತರಿಗೆ ವಿಜಯನಗರ ಕಾಲುವೆಗಳು 12 ತಿಂಗಳು ನೀರಾವರಿ ಕಲ್ಪಿಸಿವೆ.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.