ತೋಟಗಾರಿಕೆ ಬೆಳೆಗಳಿಗೆ ಒತ್ತು ನೀಡಿ: ಪಾಟೀಲ


Team Udayavani, Aug 22, 2020, 3:47 PM IST

kOPALA-TDY-1

ಸಾಂದರ್ಭಿಕ ಚಿತ್ರ

ಯಲಬುರ್ಗಾ: ಅತಿ ಕಡಿಮೆ ನೀರಿನ ಬಳಕೆ ಮಾಡುವ ಮೂಲಕ ತೋಟಗಾರಿಕೆ ಬೆಳೆ ಬೆಳೆದು ಹೆಚ್ಚಿನ ಲಾಭ ಗಳಿಸಬಹುದಾಗಿದ್ದರಿಂದ ತೋಟಗಾರಿಕೆ ಬೆಳೆ ಬೆಳೆಯಲು ರೈತರು ಹೆಚ್ಚು ಒತ್ತು ನೀಡಬೇಕು ಎಂದು ತೋಟಗಾರಿಕೆ ನಿರ್ದೇಶಕ ಲಿಂಗನಗೌಡ ಪಾಟೀಲ ಹೇಳಿದರು.

ತಾಲೂಕಿನ ನರಸಾಪೂರ ಗ್ರಾಮದ ಡಾ| ಅವಿನಾಶ ಕೋರಾ ಅವರ ಹೊಲದಲ್ಲಿ ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಆಶ್ರಯದಲ್ಲಿ ದಿ. ಡಾ|ಎಂ.ಎಚ್‌. ಮರಿಗೌಡರ ಜನ್ಮದಿನಾಚರಣೆ ನಿಮಿತ್ತ ನಡೆದ ಜೇನು ಸಾಕಾಣಿಕೆ ಮತ್ತು ಅಣಬೆ ಕೃಷಿ ಕುರಿತು ರೈತರಿಗೆ ತರಬೇತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರು ರಾಗಿ, ಭತ್ತ, ಕಡಲೆ, ಜೋಳ ಇನ್ನಿತರ ಬೆಳೆಗಳಿಗೆ ಜೋತು ಬೀಳದೇ ಅಧಿಕ ಆದಾಯ ತರುವ ತೋಟಗಾರಿಕೆ ಬೆಳೆ ಬೆಳೆಯಲು ಮುಂದಾಗಿ ಎಂದರು.

ಕೋವಿಡ್‌-19 ಸಂಕಷ್ಟ ಸಮಯದಲ್ಲಿ ತೋಟಗಾರಿಕೆ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗವಕಾಶಗಳು ಇರುವುದರಿಂದ ವಿದ್ಯಾವಂತ ನಿರುದ್ಯೋಗ ಯುವಕ, ಯುವತಿಯರು ಉದ್ಯೋಗ ಅರಸಿ ಹೋಗದೆ ತಮ್ಮ ಸ್ವಂತು ಜಮೀನಿನಲ್ಲಿ ಅಣಬೆ ಬೆಳೆದು ಕೇವಲ ತಿಂಗಳ ಅವಧಿಯಲ್ಲಿ ಅತ್ಯ ಧಿಕ ಲಾಭದಾಯಕ ಆದಾಯ ಪಡೆಯಬಹುದಾಗಿದೆ ಎಂದರು.

ದಿ. ಡಾ| ಎಂ.ಎಚ್‌. ಮರಿಗೌಡರ ಅವರು 1965ರಲ್ಲಿ ಕೃಷಿ ಇಲಾಖೆಯಿಂದ ತೋಟಗಾರಿಕೆ ಇಲಾಖೆ ಬೇರ್ಪಡಿಸಿ ಪ್ರತ್ಯೇಕ ಇಲಾಖೆಯನ್ನಾಗಿ ರೂಪಿಸುವಲ್ಲಿ ಇವರ ಪಾತ್ರ ಅಮೋಘವಾಗಿದೆ. ಅಷ್ಟೇ ಅಲ್ಲದೇ ಇವರನ್ನು ತೋಟಗಾರಿಕೆ ಪಿತಾಮಹ ಎಂದು ಕರೆಯಲಾಗುತ್ತದೆ. ತೋಟಗಾರಿಕೆ ಎಂದರೆ ಕೇವಲ ಶ್ರೀಮಂತರಿಗೆ ಮಾತ್ರ ಸಿಮೀತ ಎಂಬ ಭಾವನೆ ಇತ್ತು. ಆದರೆ ಸಾಮಾನ್ಯ ರೈತರಿಂದಲೂ ತೋಟಗಾರಿಕೆ ಮಾಡಬಹುದೆಂದು ಎಂದು ತೋರಿಸಿಕೊಡುವ ಮೂಲಕ ದಿ. ಡಾ| ಮರಿಗೌಡರ ದಾರಿದೀಪವಾಗಿದ್ದಾರೆ ಎಂದು ಹೇಳಿದರು.

ತೋಟಗಾರಿಕೆ ವಿಶೇಷ ತಜ್ಞ ವಾಮನಮೂರ್ತಿ ಮಾತನಾಡಿ, ಆ. 30ರವರೆಗೆ ವಿವಿಧ ತೋಟಗಾರಿಕೆ ವಿಷಯಗಳ ಬಗ್ಗೆ ತಾಲೂಕಿನಲ್ಲಿ ಎರಡು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. ಟಿ. ಸತ್ಯನಾರಾಯಣ ಹುಲಿಗಿ ಹಣಬೆ ಬೇಸಾಯದ ಕುರಿತು ಮಾತನಾಡಿದರು. ನಿಂಗಪ್ಪ ಇಂದರಗಿ ಅವರು ಜೇನು ಕೃಷಿ ವಿಷಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ತೋಟಗಾರಿಕೆ ಉಪನಿರ್ದೇಶಕ ಕೃಷ್ಣಾ ಉಕ್ಕುಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೈತರಾದ ಡಾ| ಅವಿನಾಶ ಕೋರಾ, ಅಖೀಲ್‌ ರಾಠೊಡ, ನಾಗರಾಜ ಪೊಲೀಸ್‌ಪಾಟೀಲ, ಲಕ್ವೀರ್‌ ಸಿಂಗ್‌, ವೆಂಕಟೇಶ ನಾಯಕ, ಮಂಜುನಾಥ, ಹನುಮಂತಗೌಡ, ನಾಗಪ್ಪ, ಪ್ರವೀಣ, ಹನುಮಂತಪ್ಪ ಹಿರೇಮನಿ, ಪ್ರಭುರಾಜ ತಾಳಕೇರಿ, ಶ್ರೀನಿವಾಸ ದೇಸಾಯಿ, ಬಸವರಾಜ ಭಂಡಾರಿ, ಬಸವರಾಜ ಕೊಡದಾಳ, ಶಿವಪ್ಪ ಇದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.