ಕ್ಷೇತ್ರದ ಗ್ರಾಮೀಣ ಪ್ರದೇಶ ಅಭಿವೃದ್ಧಿಗೆ ಒತ್ತು : ಹಿಟ್ನಾಳ


Team Udayavani, Dec 23, 2019, 1:13 PM IST

kopala-tdy-1

ಕೊಪ್ಪಳ: ನನ್ನ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರತಿ ಗ್ರಾಮಕ್ಕೂ 5 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲೂಕಿನ ಮುದ್ದಾಬಳ್ಳಿ ಹಾಗೂ ಗೊಂಡಬಾಳ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಬರುವ ಆರ್ಥಿಕ ವರ್ಷದಲ್ಲಿ ಸರಕಾರದಿಂದ ಸುಮಾರು 1000 ಕೋಟಿ ಅನುದಾನ ಮಂಜೂರು ಮಾಡಿಸಿ, ಗ್ರಾಮಗಳ ಜೊತೆಗೆ ಕೊಪ್ಪಳ ನಗರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು. ಗ್ರಾಮದ ಸೌಂದರ್ಯ ಹೆಚ್ಚಿಸಲಾಗುವುದು. ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದ್ದು, ಈ ಬಾರಿ ಕ್ಷೇತ್ರದಲ್ಲಿ ಮಳೆಯ ಪ್ರಮಾಣ ಅ ಧಿಕವಾಗಿರುವುದರಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವುದಿಲ್ಲ. ಪ್ರತಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಜನರ ಆರೋಗ್ಯ ಹಿತ ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಆರೂವರೆ ವರ್ಷದಲ್ಲಿ ಹೆಚ್ಚು ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾರ್ಯಗಳ ಪರ್ವವೇ ಸೃಷ್ಟಿಸಲಾಗಿದೆ ಎಂದರು.

ಜಿಪಂ ಸದಸ್ಯ ಗೂಳಪ್ಪ ಹಲಗೇರಿ, ಬ್ಲಾಕ್‌ಕಾಂಗ್ರೆಸ್‌ ಅಧ್ಯಕ್ಷ ಸುರೇಶ ಭೂಮರಡ್ಡಿ, ಕೆ.ಒ.ಎಫ್‌ ಅಧ್ಯಕ್ಷ ಸುರೇಶರಡ್ಡಿ ಮಾಡಿನೂರ, ತಾಪಂ ಅಧ್ಯಕ್ಷ ಬಾಲಚಂದ್ರನ್‌, ತಾಪಂ ಸದಸ್ಯ ರಾಜೀವರಡ್ಡಿ, ನಿಂಗಪ್ಪ ಯತ್ನಟ್ಟಿ, ನಗರಸಭೆ ಸದಸ್ಯ ಅಕ್ಬರ್‌ಪಾಷಾ ಪಲ್ಟನ್‌, ಮುಖಂಡರಾದ ಬಸವರಡ್ಡೆಪ್ಪ ಹಳ್ಳಿಕೇರಿ, ಪ್ರಸನ್ನ ಗಡಾದ, ನವೋದಯ ವಿರೂಪಣ್ಣ, ಕೇಶವರಡ್ಡಿ, ಕೃಷ್ಣಾರಡ್ಡಿ ಗಲಿಬಿ, ಶರಣಪ್ಪ ಸಜ್ಜನ್‌, ಹನುಮೇಶ ಹೊಸಳ್ಳಿ, ಶಿವಕುಮಾರ, ಎಂ.ಡಿ. ಜಹೀರಅಲಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಪ್ರಕಾಶ ರಡ್ಡಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.