ಪರಿಸರ ಸಂರಕ್ಷಣೆಗೆ ಟೊಂಕ ಕಟ್ಟಿದರು

ಕಾಡು ಬೆಳೆಸಿದ ಪರಿಸರ ಪ್ರೇಮಿ ಮಹಮ್ಮದ್‌ ರಫಿ ; ಸಸಿ ಕೊಟ್ಟು ಶುಭ ಕೋರುವ ಸಂಪ್ರದಾಯ

Team Udayavani, Jun 5, 2022, 1:54 PM IST

6

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ, ಪರಿಸರ ಪ್ರೇಮಿ ಮಹಮ್ಮದ್‌ ರಫಿ ಎನ್ನುವರು ಬರೊಬ್ಬರಿ 300 ಎಕರೆ ಪ್ರದೇಶದಲ್ಲಿ ಆರು ಸಾವಿರಕ್ಕೂ ಅಧಿಕ ಗಿಡಗಳಿರುವ ದೊಡ್ಡ ಕಾಡನ್ನೇ ಬೆಳೆಸಿದ್ದಾರೆ. ಇವರಿಗೆ ಯಾವುದೇ ಪ್ರಚಾರದ ಗೀಳಿಲ್ಲ. ಪ್ರಚಾರದ ಗೋಜಿಗೂ ಹೋಗಲ್ಲ. ಎಲ್ಲರೂ ಸೇರಿ ಪರಿಸರ ಉಳಿಸೋಣ, ಅದು ನೆಮ್ಮೆಲ್ಲರನ್ನು ಕಾಪಾಡುತ್ತದೆ ಎನ್ನುವುದೊಂದೇ ಇವರ ಮಾತಾಗಿದೆ.

ಹೌದು. ಮಹಮ್ಮದ್‌ ರಫಿ ಅವರು ತಾಪಂ ಮಾಜಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಆದರೆ ಇವರ ರಾಜಕಾರಣವೇ ಬೇರೆ, ಪರಿಸರ ಜಾಗೃತಿಯೇ ಬೇರೆಯಾಗಿದೆ. ಶ್ರೀರಾಮನಗರ ಸೇರಿ ಇತರೆ ಭಾಗದಲ್ಲಿ ಅರಣ್ಯ ಪ್ರದೇಶವಿದೆ. ಅಲ್ಲಿ ಬರೊಬ್ಬರಿ ಆರು ಸಾವಿರಕ್ಕೂ ಹೆಚ್ಚು ಗಿಡಗಳನ್ನು ಇವರು ಬೆಳೆಸಿದ್ದಾರೆ.

ಪ್ರತಿ ರವಿವಾರ ಪರಿಸರ ಸಂರಕ್ಷಣೆಗಾಗಿ ಇವರ ಸೇವೆ ಮೀಸಲಿರುತ್ತದೆ. ಶಾಲೆ, ಕಾಲೇಜು, ಆಸ್ಪತ್ರೆ, ರಸ್ತೆ ಪಕ್ಕದಲ್ಲಿ ಸಸಿಗಳನ್ನು ನೆಡುವುದು, ಅವುಗಳ ಸುತ್ತ ಸ್ವಚ್ಛತೆ ಮಾಡುವುದು, ಅವುಗಳ ಆರೈಕೆ ಮಾಡುವುದು, ನೀರು ಪೂರೈಸುವುದು ಇವರ ಸೇವೆಯಾಗಿದೆ. ಯಾವುದೇ ಸಭೆ, ಸಮಾರಂಭಗಳಿಗೆ ತೆರಳಿದರೂ ಸಸಿ ಕೊಟ್ಟು ಶುಭ ಕೋರುವುದು ಇವರ ಸಂಪ್ರದಾಯವಾಗಿದೆ. ಇವರಿಗೆ ಓರ್ವ ವೈದ್ಯ ಪರಿಸರ ಬೆಳೆಸಲು ಪ್ರೇರಣೆಯಂತೆ.

ಆ ವೈದ್ಯ ನಿತ್ಯವೂ ಗಂಗಾವತಿಯಿಂದ ಶ್ರೀರಾಮನಗರಕ್ಕೆ ಸೈಕಲ್‌ನಲ್ಲಿ ಆಗಮಿಸಿ ಸಸಿಗಳಿಗೆ ನೀರುಣಿಸುತ್ತಿದ್ದರಂತೆ. ಇದನ್ನು ನೋಡಿದ ರಫಿಕ್‌ ಅವರು ದೂರದಿಂದ ಬರುವ ವೈದ್ಯರೇ ಇಂತಹ ಸೇವೆ ಮಾಡುತ್ತಿದ್ದಾರೆಂದರೆ ನಾವು ಇಲ್ಲೇ ಇದ್ದುಕೊಂಡು ಇಂತಹ ಪರಿಸರ ಸೇವೆ ಮಾಡೋಣ. ಆ ಪರಿಸರವೇ ನಮ್ಮನ್ನು ಉಳಿಸಲಿದೆ ಎಂದು 2016ರಿಂದ ಈ ಸೇವೆ ಆರಂಭಿಸಿದ್ದಾರೆ. ಕಳೆದ ಐದು ವರ್ಷದಲ್ಲಿ ದೊಡ್ಡ ಕಾಡನ್ನೇ ಸೃಷ್ಟಿ ಮಾಡಿದ್ದಾರೆ.

ಇವರ ಬಗ್ಗೆ ಏಷ್ಟೇ ಪ್ರಚಾರ ಮಾಡುತ್ತೇವೆ ಎಂದರೂ ಬೇಡವೆಂದು ಹಿಂಜರಿಯುತ್ತಾರೆ. ಇವರ ಪರಿಸರ ಕಾಳಜಿ ಪ್ರೇರಣೆಯಿಂದ ಹತ್ತಾರು ಗ್ರಾಮಗಳ ಯುವಕರ ತಂಡವು ತಮ್ಮೂರಿನಲ್ಲೂ ಸಸಿ ಬೆಳೆಸಿ ಪರಿಸರ ಸಂರಕ್ಷಣೆ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ. ಮಹಮ್ಮದ್‌ ರಫಿಕ್‌ ಅವರು ಬೆಳೆಸಿದ ಕಾಡು ನೋಡಿ ನಿಜಕ್ಕೂ ವಿಜ್ಞಾನಿಗಳ ತಂಡವೇ ಮೂಕ ವಿಸ್ಮಿತವಾಗಿದೆ. ಇವರ ಕಾರ್ಯದ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದೆ.

„ದತ್ತು ಕಮ್ಮಾರ

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.