ಆಪ್‌ ಜತೆ ರೈತ ಸಂಘ ಚುನಾವಣೆ ಕಣಕ್ಕೆ

Team Udayavani, May 21, 2022, 6:41 PM IST

21formers

ಕೊಪ್ಪಳ: ಕೇಂದ್ರ-ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ, ಜನಪರ ಕಾಳಜಿ ಮರೆತ ಕಾಂಗ್ರೆಸ್‌, ಕುಟುಂಬ ರಾಜಕಾರಣದಲ್ಲಿಯೇ ಮುಳುಗಿದ ಜೆಡಿಎಸ್‌ ವಿರೋಧಿಸಿ ಈ ಬಾರಿ ಆಪ್‌ ಪಕ್ಷದೊಂದಿಗೆ ರೈತ ಸಂಘಟನೆ ಚುನಾವಣಾ ಕಣಕ್ಕೆ ಇಳಿಯಲಿದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಸರ್ಕಾರಕ್ಕೂ ಒಕ್ಕೊರಲಿನ ಒತ್ತಾಯ ಮಾಡಿದರೂ ಎಂಎಸ್‌ಪಿ ಜಾರಿಗೊಳಿಸುತ್ತಿಲ್ಲ. ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯಿತು. ಆದರೆ ರಾಜ್ಯದಲ್ಲಿನ ಬೊಮ್ಮಾಯಿ ಸರ್ಕಾರ ಮೂರು ಕಾಯ್ದೆ ಹಿಂಪಡೆಯುತ್ತಿಲ್ಲ. ಸುಮ್ಮನೇ ಕಾಲಹರಣ ಮಾಡುವ ಕೆಲಸದಲ್ಲಿ ತೊಡಗಿದೆ. ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಭ್ರಷ್ಟಾಚಾರದಲ್ಲಿಯೇ ತೊಡಗಿವೆ. ಈ ಹಿಂದೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ 20 ಪರ್ಸೆಂಟ್‌ ಸರ್ಕಾರ ಎಂದು ಪ್ರಧಾನಿ ಮೋದಿ ಅವರೇ ಹೇಳಿದ್ದರು.

ಆದರೆ ಅದೇ ಮೋದಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್‌ ಸರ್ಕಾರ ಎಂದು ಜಗಜ್ಜಾಹೀರಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದ ಜನರು ರೋಸಿ ಹೋಗಿದ್ದಾರೆ. ಈಗ ಜನ ಜಾಗೃತರಾಗುತ್ತಿದ್ದು, ಪರ್ಯಾಯ ರಾಜಕೀಯ ಬಯಸುತ್ತಿದ್ದಾರೆ. ಸದ್ಯ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ದೇಶದ ವಿವಿಧ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಆಪ್‌ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ. ಇದರಿಂದ ನಾವು ಆಪ್‌ ಪಕ್ಷದೊಂದಿಗೆ ರಾಜಕೀಯ ಹೋರಾಟ ನಡೆಸಲು ಸಜ್ಜಾಗಿದ್ದೇವೆ. ಮುಂದಿನ ಚುನಾವಣೆಯಲ್ಲಿ ಆಪ್‌ ಪಕ್ಷದ ಚಿಹ್ನೆಯೊಂದಿಗೆ ರೈತ ಸಂಘದ ಪ್ರತಿನಿಧಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ರೈತ ಸಂಘದ ಹಂಗಾಮಿ ಅಧ್ಯಕ್ಷರನ್ನಾಗಿ ಇಸ್ಮಾಯಿಲ್‌ ನಾಲಬಂದ್‌ ಅವರನ್ನು ಆಯ್ಕೆ ಮಾಡಲಾಗಿದೆ. 6 ತಿಂಗಳೊಳಗಾಗಿ ಜಿಲ್ಲಾದ್ಯಂತ ತಾಲೂಕು ಘಟಕಗಳನ್ನು ರಚನೆ ಮಾಡಿ ಸಂಘದ ಆಶಯ ಜಾರಿಗೊಳಿಸಬೇಕು ಎಂದು ಸೂಚನೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಹನುಮಂತಪ್ಪ ಹೊಳೆಯಾಚೆ, ಇಸ್ಮಾಯಿಲ್‌ ನಾಲಬಂದ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.