ಜಾನಪದ ಸಂಸ್ಕೃತಿ ಹಳ್ಳಿಗರ ಜೀವನಾಡಿ


Team Udayavani, Jul 8, 2019, 3:45 PM IST

kopala-tdy-6..

ಕುಷ್ಟಗಿ: ಬಸವ ಭವನದಲ್ಲಿ ಜಾನಪದ ಕಲಾವಿದೆ ಮುದುಕವ್ವ ಗಂಜಿಹಾಳ ಗೀಗೀ ಪದ ಪ್ರಸ್ತುತ ಪಡಿಸಿದರು.

ಕುಷ್ಟಗಿ: ಮೂಲ ಜಾನಪದ ಸಂಸ್ಕೃತಿ ಮತ್ತು ಪರಂಪರೆ ಗ್ರಾಮೀಣ ಜನರ ಜೀವನಾಡಿಯಾಗಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಪ್ಪ ವಡಿಗೇರಿ ಹೇಳಿದರು.

ಇಲ್ಲಿನ ಬಸವ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ| ಬಿ.ಆರ್‌. ಅಂಬೇಡ್ಕರ್‌ ಸಾಂಸ್ಕೃತಿಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಪರಿಶಿಷ್ಟ ಜಾತಿ, ಸಾಮಾನ್ಯ ಯೋಜನೆ ಅಡಿಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರ ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆ ಹಾಗೂ ಭಾಷೆಯ ಉಳಿವಿಗೆ ಹೆಚ್ಚು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದರ ಸದುಪಯೋಗ ಪಡೆದು ಜನರಲ್ಲಿ ಮತ್ತಷ್ಟು ಆಸಕ್ತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿರಬೇಕು. ಹಿಂದೆ ಹಳ್ಳಿಗಳಲ್ಲಿ ಹಬ್ಬ, ಮದುವೆ, ಶುಭ ಕಾರ್ಯಗಳಲ್ಲಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಹಾಡುವ ಪದಗಳು ಜಾನಪದಗಳಾಗಿ ಪ್ರಸ್ತುವಾಗಿವೆ. ಆಧುನಿಕತೆ ಪ್ರಭಾವ ಜಾನಪದ ಸಂಸ್ಕೃತಿ ಕಡಿಮೆಯಾಗಿದೆ. ಜಾಗತೀಕರಣದ ಪ್ರಭಾವದಲ್ಲೂ ಜನಪದ ಜನರಲ್ಲಿ ಉಳಿದಿದೆ. ಅದನ್ನು ಬೆಳೆಸಿಕೊಂಡು ಹೋಗುವ ಗುರಿ ಯುವ ಸಮುದಾಯದ ಮೇಲಿದೆ ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಸಮಿತಿ ಸದಸ್ಯ ರವೀಂದ್ರ ಬಾಕಳೆ ಮಾತನಾಡಿ, ಆಧುನಿಕತೆ ಭರಾಟೆ ನಡುವೆಯೂ ಜನಪದ ಹಳ್ಳಿಗರಿಂದಲೇ ಜೀವಂತವಾಗಿದೆ. ನಾಡಿನ ಕನ್ನಡ ಜನಪದ ಸಂಸ್ಕೃತಿ ಉಳಿಸಲು ರಾಜ್ಯದೆಲ್ಲೆಡೆ ಕಾರ್ಯಕ್ರಮ ನೀಡಲು ಇನ್ನಷ್ಟು ಅನುದಾನ ಹೆಚ್ಚಿಸಬೇಕಿದೆ. ಕಲಾವಿದರ ಪರಿಕರಕ್ಕೆ ಸಹಾಯಧನ ನೀಡಬೇಕು, ಜಾನಪದ ಜಾತ್ರೆ ಪುನಃ ಆರಂಭಿಸಬೇಕು ಎಂದರು.

ಜಾನಪದ ಕಲಾವಿದ ಜೀವನಸಾಬ್‌ ಬಿನ್ನಾಳ ಮಾತನಾಡಿ, ಭವಿಷ್ಯದ ದಿನಗಳಲ್ಲಿ ಜಾನಪದ ಹಾಡುವವರು ನೇಪಥ್ಯಕ್ಕೆ ಸರಿಯುವ ಕಾಲಘಟ್ಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಾವಿದರನ್ನು ಗುರುತಿಸಿ, ಅನುದಾನ ನೀಡಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುತ್ತಿರುವುದು ಸ್ವಾಗತಾರ್ಹವಾಗಿದೆ. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಉಮೇಶ ಹಿರೇಮಠ, ದೊಡ್ಡಾಟ ಕಲಾವಿದ ಶರಣಪ್ಪ ಬನ್ನಿಗೋಳ, ಮೋಹನಲಾಲ್ ಜೈನ್‌, ರಾಮಣ್ಣ ಗೊಲ್ಲರ, ಹನುಮಂತ ಕುಮಾರ, ದೇವೇಂದ್ರಪ್ಪ ಕ್ಯಾದಗುಂಪಿ, ಬಸವ ಸಮಿತಿ ಅಧ್ಯಕ್ಷ ಶಂಕ್ರಗೌಡ ಪಾಟೀಲ ಇದ್ದರು. ಬಸವರಾಜ ಉಪ್ಪಲದಿನ್ನಿ ನಿರೂಪಿಸಿದರು ಸುಕಮುನಿ ಗುಮಗೇರಿ ವಂದಿಸಿದರು. ನಂತರ ಜಾನಪದ ಕಲಾವಿದೆ ಮುದುಕವ್ವ ಗಂಜಿಹಾಳ ಸಂಗಡಿಗರಿಂದ ಗೀಗೀ ಪದ, ತತ್ವಪದಕಾರ ಖಾಜಾಹುಸೇನ್‌ ಅತ್ತಾರ ಅವರು ತತ್ವಪದ ಹಾಡುವ ಮೂಲಕ ರಂಜಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.