ಅರಣ್ಯ ಇಲಾಖೆ ಅಡ್ಡಿ: ವಿಜಯನಗರ ಕಾಲುವೆ ದುರಸ್ತಿ ಸ್ಥಗಿತ ಆತಂಕದಲ್ಲಿ ರೈತರು

ಮುಂಗಾರು ಭತ್ತ ನಾಟಿಗೆ ರೈತರ ತಯಾರಿ; ಇನ್ನೂ ದುರಸ್ತಿಯಾಗದ ವಿಜಯನಗರ ಕಾಲುವೆ

Team Udayavani, Jun 6, 2022, 9:36 PM IST

1-dfd-fdfs

ಗಂಗಾವತಿ :ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿ ಕಾರ್ಯ ಈಗಾಗಲೇ ಶೇಕಡಾ 50 ರಷ್ಟು ಮುಗಿದಿದ್ದು ಇದೀಗ ಗಂಗಾವತಿ ತಾಲೂಕಿನ ಸಣಾಪುರ ಹತ್ತಿರ ಇರುವ ವಿಜಯನಗರ ಕಾಲುವೆಯ ದುರಸ್ತಿ ಕಾರ್ಯ ನಡೆದಿದೆ ಈ ಮಧ್ಯೆ ಅರಣ್ಯ ಇಲಾಖೆಯ ಅಡ್ಡಿಯಿಂದಾಗಿ ಕಾಲುವೆ ದುರಸ್ತಿ ಕಾರ್ಯ ಕಳೆದ ವಾರದಿಂದ ನಿಲುಗಡೆಯಾಗಿದೆ.

ಸಣಾಪುರ ಗ್ರಾಮದ ಸರ್ವೆ ನಂಬರ್ 1ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿದೆ ಈ ವ್ಯಾಪ್ತಿಯಲ್ಲಿ ವಿಜಯನಗರ ಕಾಲುವೆ ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ನಿರ್ಮಾಣವಾಗಿದ್ದು ಇದೀಗ ಶಾಶ್ವತ ದುರಸ್ತಿ ಕಾರ್ಯ ನಡೆಯುತ್ತಿದೆ .ಇದು ಗುಡ್ಡ ಪ್ರದೇಶವಾಗಿರುವುದರಿಂದ ಕಾಲುವೆಯಲ್ಲಿ ಅಲ್ಲಲ್ಲಿ ಕಲ್ಲು ಬಂಡೆಗಳು ಬರುತ್ತಿವೆ ಇದನ್ನು ಕಂಪ್ರೈಸರ್ ಮಿಷನ್ ನಿಂದ ತೆರವುಗೊಳಿಸಿ ಕಾಲುವೆಯ ಗುತ್ತಿಗೆ ಪಡೆದ ಗುತ್ತಿಗೆದಾರರು ದುರಸ್ತಿ ಕಾರ್ಯ ಮಾಡುತ್ತಿದ್ದಾರೆ. ಅರಣ್ಯ ಇಲಾಖೆಯವರು ಇದಕ್ಕೆ ಅಡ್ಡಿಪಡಿಸಿ ಕಂಪ್ರೆಸ್ಸರ್ ಟ್ರ್ಯಾಕ್ಟರನ್ನು ಈಗಾಗಲೇ ವಶಕ್ಕೆ ಪಡೆದು ಕಾಮಗಾರಿ ನಿಲುಗಡೆ ಮಾಡುವಂತೆ ಸೂಚನೆ ನೀಡಿದ್ದರಿಂದ 1ವಾರದಿಂದ ವಿಜಯನಗರ ಸಣಾಪುರ ಕಾಲುವೆ ದುರಸ್ತಿ ಕಾರ್ಯ ಸ್ಥಗಿತಗೊಂಡಿದೆ .

ಈ ಮಧ್ಯೆ ತುಂಗಭದ್ರಾ ಡ್ಯಾಂನ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಈಗಾಗಲೇ ಡ್ಯಾಮ್ ಗೆ ಅರ್ಧದಷ್ಟು ನೀರು ಹರಿದು ಬರುತ್ತಿದ್ದು ಈ ಬಾರಿ ಮುಂಗಾರು ಭತ್ತದ ನಾಟಿ ಮತ್ತು ಇತರ ಬೆಳೆಗಳ ಬಿತ್ತನೆ ಕಾರ್ಯ ಬೇಗನೆ ಆಗುವ ಸಂಭವವಿದೆ .ವಿಜಯನಗರ ಕಾಲುವೆಗಳ ವ್ಯಾಪ್ತಿಯಲ್ಲಿ ಸುಮಾರು ಹತ್ತು ಸಾವಿರ ಎಕರೆ ಭೂಮಿ ಇದ್ದು .ಜೂನ್ ಮತ್ತು ಜುಲೈ ಮಧ್ಯಭಾಗದಲ್ಲಿ ಭತ್ತ ನಾಟಿ ಕಾರ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ನೀರು ಬೇಕಾಗುತ್ತದೆ .ಸಣಾಪುರ ಆನೆಗೊಂದಿ ಭಾಗ ಹಂಪಿ ವಿಶ್ವಪರಂಪರೆ ಪಟ್ಟಿಗೆ ವ್ಯಾಪ್ತಿಯಲ್ಲಿರುವುದರಿಂದ ಜಲಸಂಪನ್ಮೂಲ ಇಲಾಖೆ ಅರಣ್ಯ ಇಲಾಖೆ ಮತ್ತು ಕಾಮಗಾರಿಯನ್ನು ಗುತ್ತಿಗೆ ಪಡೆದವರು ಮುಂಚಿತವಾಗಿಯೇ ಈ ಭಾಗದಲ್ಲಿರುವ ಕಾನೂನು ತೊಡಕು ನಿವಾರಿಸಿಕೊಂಡು ಕಾಮಗಾರಿ ಆರಂಭಿಸಬೇಕಿತ್ತು .ಇಲಾಖೆಗಳ ಪರಸ್ಪರ ಪ್ರತಿಷ್ಠೆಯಿಂದಾಗಿ ಇದೀಗ ವಿಜಯನಗರ ಕಾಲುವೆಯ ಕಾಮಗಾರಿ ಸ್ಥಗಿತಗೊಂಡಿದೆ .ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶ ಮಾಡಿ ಇಲ್ಲಿರುವ ಕಾನೂನು ತೊಡಕು ನಿವಾರಿಸಿ ವಿಜಯನಗರ ಕಾಲುವೆ ಸಾಣಾಪುರ ಭಾಗದಿಂದ ಸಂಗಾಪುರದ ವರೆಗೆ ಶಾಶ್ವತ ದುರಸ್ತಿ ಕಾರ್ಯ ಬೇಗನೆ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಬೇಕಿದೆ .

ವಿಜಯನಗರ ಕಾಲುವೆಗಳು ವಿಜಯನಗರ ಸಾಮ್ರಾಜ್ಯದ ಅರಸರು ನಿರ್ಮಿಸಿ ಆನೆಗೊಂದಿ ಭಾಗದ ಹಳ್ಳಿಗಳಿಗೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸಿದ್ದರು .ಈ ಭಾಗದಲ್ಲಿರುವ ಕೋತಿ ಸೇರಿದಂತೆ ಪ್ರಾಣಿ ಪಕ್ಷಿಗಳಿಗೆ ಹಣ್ಣುಗಳ ಆಹಾರದ ವ್ಯವಸ್ಥೆ ಮಾಡಲು ಇಲ್ಲಿ ಹೆಚ್ಚಾಗಿ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿತ್ತು .ಇತ್ತೀಚಿನ ದಶಕಗಳಲ್ಲಿ ಬಾಳೆ ಭತ್ತ ಸೇರಿದಂತೆ ಇತರ ವಾಣಿಜ್ಯ ಬೆಳೆಗಳನ್ನು ಬೆಳೆಯಲಾಗುತ್ತಿದೆ .
ವಿಜಯನಗರ ಕಾಲುವೆಗಳ ನಿರ್ಮಾಣ ಮಾಡಿ ಸುಮಾರು 5- 6ನೂರು ವರ್ಷಗಳಾಗಿದ್ದು ಈ ಕಾಲುವೆಗಳನ್ನು ಶಾಶ್ವತವಾಗಿ ಇಲ್ಲಿಯ ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆ ಬರದಂತೆ ನಿರ್ಮಾಣ ಮಾಡುವಂತೆ ರೈತರು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದರು .2008 ರಲ್ಲಿ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ಸರ್ಕಾರ ನಂತರ ಕಾಂಗ್ರೆಸ್ ಸರ್ಕಾರ ವಿಜಯನಗರ ಕಾಲುವೆಗಳ ದುರಸ್ತಿಗೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೆರವಿನೊಂದಿಗೆ ಟೆಂಡರ್ ಕರೆದು ಕಳೆದ ವರ್ಷ ಕಾಮಗಾರಿ ನಡೆಸಿತ್ತು ಈಗಾಗಲೇ ದೇವಘಾಟ್, ಮೋತಿ ಘಾಟ್, ಕಂಪ್ಲಿ, ಶಿವಪುರ ಸೇರಿದಂತೆ ಹೊಸಪೇಟೆ ಭಾಗದ ವಿಜಯನಗರ ಕಾಲುವೆಗಳ ದುರಸ್ತಿ ಕಾರ್ಯ ಬಹುತೇಕ ಮುಗಿದಿದೆ.

ಕೂಡಲೇ ಜಲಸಂಪನ್ಮೂಲ ಇಲಾಖೆ ಅರಣ್ಯ ಇಲಾಖೆ ಮತ್ತು ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಮಧ್ಯಪ್ರವೇಶ ಮಾಡಿ ವಿಜಯನಗರ ಕಾಲುವೆ ಸೋನಾಪುರದಿಂದ ಸಂಗಾಪುರ ಇದುವರೆಗೂ ಶಾಶ್ವತ ದುರಸ್ತಿ ಕಾರ್ಯ ಗುಣಮಟ್ಟದಲ್ಲಿ ಬೇಗನೆ ಮುಗಿಸಬೇಕು ಮುಂಗಾರು ಹಂಗಾಮಿನಲ್ಲಿ ಭತ್ತ ನಾಟಿ ಸೇರಿದಂತೆ ರೈತರು ಇತರ ಬೆಳೆಗಳನ್ನು ಬೆಳೆಯಲು ಇದು ಅವಶ್ಯವಾಗಿದೆ .ಪರಸ್ಪರ ಮಾತುಕತೆಯ ಮೂಲಕ ನಿಯಮಗಳನ್ನು ಪಾಲಿಸಿ ಬೇಗನೆ ಕಾಮಗಾರಿ ಮುಗಿಸುವಂತೆ ಆನೆಗೊಂದಿ, ಸಣಾಪುರ ,ಜಂಗ್ಲಿ ಹನುಮನಹಳ್ಳಿ ಭಾಗದ ರೈತರು ಒತ್ತಾಯಿಸಿದ್ದಾರೆ .

ವಿಶೇಷ ವರದಿ:ಕೆ. ನಿಂಗಜ್ಜ ಗಂಗಾವತಿ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.