10 ಎಕರೆಯಲ್ಲಿ ಹಣ್ಣು ಸಂಸ್ಕರಣಾ ಘಟಕ

ತೋಟಗಾರಿಕೆ ಇಲಾಖೆಯಿಂದ ಮಾವು ಮೇಳ

Team Udayavani, May 24, 2022, 4:43 PM IST

19

ಕೊಪ್ಪಳ: ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ಮಾವು ಮೇಳ ಸೇರಿದಂತೆ ಹಲವು ಮೇಳ ಆಯೋಜನೆ ಮಾಡಿ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುತ್ತಿದೆ. ಜಿಲ್ಲೆಯಲ್ಲಿ 10 ಎಕರೆಯಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ನಗರದ ತೋಟಗಾರಿಕೆ ಇಲಾಖೆಯಿಂದ ಏರ್ಪಡಿಸಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರಿಂದಲೇ ನೇರವಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮಾವಿನ ಹಣ್ಣುಗಳ ಮಾರಾಟಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ “ಮಾವು ಪ್ರದರ್ಶನ ಮತ್ತು ಮಾರಾಟ ಮೇಳ’ ಆರಂಭಿಸಿದೆ. ಈ ಮೂಲಕ ರೈತರು ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸುತ್ತಿದೆ. ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ತಲುಪಿಸುವ ಕಾರ್ಯ ಮಾಡುತ್ತಿದೆ. ಇಲಾಖೆ ಡಿಡಿ ಕೃಷ್ಣ ಉಕ್ಕುಂದ ಅವರ ಕಾರ್ಯ ಶ್ಲಾಘನೀಯ. ಬೆಳೆಗಾರರಿಗೆ ಉತ್ತಮ ಬೆಲೆ ದೊರಕಿಸಲು ಇಂತಹ ಮೇಳ ಸಹಕಾರಿ ಎಂದರು.

ಈ ಮೇಳದಲ್ಲಿ ಕೇಸರ್‌, ಆಫೂಸ್‌, ದಶಹರಿ, ಬೆನೆಶಾನ್‌, ಮಲ್ಲಿಕಾ, ಸಿಂಧೂರಿ, ರಸಪೂರಿ, ತೋತಾಪೂರಿ, ಕಲ್ಮಿ ಹಾಗೂ ಉಪ್ಪಿನಕಾಯಿಗೆ ಬಳಸುವ ಮಾವಿನಕಾಯಿ ಸೇರಿದಂತೆ 100ಕ್ಕೂ ಅಧಿಕ ತಳಿಯ ಮಾವು ಪ್ರದರ್ಶನ ಮಾಡುತ್ತಿದ್ದು, ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬೆಳೆದ ಮತ್ತು ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಸ್ಥಾಪಿಸಲಾದ 10 ಎಕರೆ ಘಟಕದಲ್ಲಿ ಪೇರಲೆ, ಪಪ್ಪಾಯಿ ಸೇರಿದಂತೆ ಇತರೆ ಹಣ್ಣುಗಳನ್ನು ಸಂಸ್ಕರಿಸಬಹುದು. ಮಾವು ಬೆಳೆಗಾರರಿಗೆ ಬ್ಯಾಂಕ್‌ ಸಾಲ ನೀಡುತ್ತದೆ. ಇದರ ಲಾಭ ಪಡೆದುಕೊಳ್ಳಬೇಕು. ಮೊನ್ನೆ ಸುರಿದ ಮಳೆಯಿಂದ ಹಲವೆಡೆ ಮಾವು ಬೆಳೆ ಹಾನಿಯಾಗಿದೆ. ಅದರ ಸಮೀಕ್ಷೆ ಮಾಡಿಸಿ ಮಾವು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.

ಮೇಳಕ್ಕೆ ಚಾಲನೆ: ಕೊಪ್ಪಳ ಮಾವು ಮೇಳ ನಿಮಿತ್ತ ತೋಟಗಾರಿಕೆ ಇಲಾಖೆಯಿಂದ ಈ ಬಾರಿ ಡಿಜಿಟಲ್‌ ವ್ಯವಸ್ಥೆ ಜಾರಿಗೆ ತಂದಿದ್ದು, ಮನೆಯಲ್ಲಿಯೇ ಕುಳಿತು ಯಾವುದೇ ತಳಿಯ ಮಾವುಗಳನ್ನು ಖರೀಸಬಹುದು. ತೋಟಗಾರಿಕೆ ಇಲಾಖೆ ಹಾಗೂ ಕೊಪ್ಪಳ ಒನ್‌ ಸಂಸ್ಥೆಯ ಆಶ್ರಯದಲ್ಲಿ ಕೊಪ್ಪಳ-ಒನ್‌ ಎಂಬ ಆ್ಯಪ್‌ ಸಿದ್ಧಪಡಿಸಿದ್ದು, ಗೂಗಲ್‌ ಪ್ಲೇಸ್ಟೋರ್‌ ನಿಂದ ಡೌನ್‌ಲೋಡ್‌ ಮಾಡಿಕೊಂಡು ಇದರ ಮೂಲಕ 200 ಗ್ರಾಮ್‌ನಿಂದ ಎಷ್ಟು ಕೆಜಿ ಬೇಕಾದರೂ ಮಾವುಗಳನ್ನು ತರಿಸಿಕೊಳ್ಳಬಹುದು. ಡಿಜಿಟಲ್‌ ಮಾವು ಮೇಳದ ಮಳಿಗೆಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ ಚಾಲನೆ ನೀಡಿದರು. ಸಚಿವರು ಆ್ಯಪ್‌ನ್ನು ಲೋಕಾರ್ಪಣೆ ಮಾಡಿದರು.

ಮಾವು ಸವಿದ ಗಣ್ಯರು: ಸಚಿವರು, ಶಾಸಕರು, ಜಿಲ್ಲಾಧಿಕಾರಿ, ಸಿಇಒ ಹಾಗೂ ಹಲವಾರು ಗಣ್ಯರು ಮಾವಿನ ರುಚಿ ಸವಿದರು. ಪ್ಲಾಸ್ಟಿಕ್‌ ಬಳಕೆ ತಡೆಯುವ ಉದ್ದೇಶದಿಂದ ತೋಟಗಾರಿಕೆ ಇಲಾಖೆ ಸಿದ್ಧಪಡಿಸಿದ ಪರಿಸರ ಸ್ನೇಹಿ ಬ್ಯಾಗ್‌ಗಳನ್ನು ಬಿಡುಗಡೆಗೊಳಿಸಲಾಯಿತು.

ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌, ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್‌, ಜಿಲ್ಲಾ ಹಾಪ್‌ಕಾಮ್ಸ್‌ ಅಧ್ಯಕ್ಷ ಯಂಕಣ್ಣ ಯರಾಶಿ, ಕೆಒಎಫ್‌ ಅಧ್ಯಕ್ಷ ಸುರೇಶರಡ್ಡಿ ಮಾದಿನೂರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಅಧಿಕಾರಿಗಳಾದ ಪೂರ್ಣಿಮಾ, ಮಂಜುನಾಥ ಲಿಂಗಣ್ಣನವರ, ದುರ್ಗಾಪ್ರಸಾದ್‌, ಶರಣಬಸವ ಮನ್ನಾಪುರ, ಜಗನ್ನಾಥರೆಡ್ಡಿ, ವಾಮನಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.