
ಗಂಗಾವತಿ: ವೈಭವಯುತವಾಗಿ 5 ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ
ಮಾಜಿ ಸಂಸದ ಎಚ್. ಜಿ. ರಾಮುಲು ಚಾಲನೆ
Team Udayavani, Sep 22, 2022, 9:06 AM IST

ಗಂಗಾವತಿ: ಗಣೇಶ ಚತುರ್ಥಿ ನಿಮಿತ್ತ ಪ್ರತಿಷ್ಠಾಪನೆಯಾಗಿದ್ದ 5 ಗಣೇಶನ ಮೂರ್ತಿಗಳನ್ನು ಬುಧವಾರ ಸಂಜೆ ವಿಸರ್ಜನೆ ಮಾಡಲಾಯಿತು. ಗಂಗಾವತಿಯ ಮಹಾರಾಜ ಎಂದೇ ಖ್ಯಾತಿ ಪಡೆದ ವಿಜಯ ವೃಂದ ಗಣೇಶನ ವಿಸರ್ಜನಾ ಮೆರವಣಿಗೆಗೆ ಮಾಜಿ ಸಂಸದ ಹಿರಿಯ ಮುಖಂಡ ಎಚ್ .ಜಿ. ರಾಮುಲು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಹಬ್ಬ ಹರಿದಿನಗಳು ಶಾಂತಿ ಮತ್ತು ಐಕ್ಯತೆಯ ಧ್ಯೋತಕವಾಗಿವೆ. ಆದ್ದರಿಂದ ಗಣೇಶ ಹಬ್ಬವನ್ನು ವೈಭವಯುತವಾಗಿ ಆಚರಣೆ ಮಾಡಿ ಶಾಂತಿಯುತವಾಗಿ ವಿಸರ್ಜನಾ ಮೆರವಣಿಗೆ ಜರುಗುವಂತಾಗಲಿ ಎಂದು ಯುವಕರಿಗೆ ಕರೆ ನೀಡಿದರು.
ಬುಧವಾರ ಸಂಜೆ ಗಾಂಧಿನಗರ, ಲಿಂಗರಾಜ ಕ್ಯಾಂಪ್, ಪ್ರಶಾಂತ ನಗರ, ಸಿಬಿಎಸ್ ಗಂಜ್ ಗಣೇಶನ ಮೂರ್ತಿಗಳು ವಿಸರ್ಜನೆಗೊಂಡವು. ಸಂಜೆ 6 ಗಂಟೆಗೆ ಆರಂಭವಾದ ವಿಸರ್ಜನಾ ಮೆರವಣಿಗೆ ಗುರುವಾರ ಬೆಳಗಿನ ಜಾವ 5 ಗಂಟೆ ವರೆಗೂ ಜರುಗಿತು. ಬಳಿಕ ತಾಲೂಕಿನ ದಾಸನಾಳ ಕಾಲುವೆಯಲ್ಲಿ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಹಾಗೂ ಡಿವೈಎಸ್ ಪಿ ರುದ್ರೇಶ್ ಉಜ್ಜನಕೊಪ್ಪ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ವರ್ಗದವರು ಮೆರವಣಿಗೆಗೆ ಭದ್ರತೆ ಕಲ್ಪಿಸಿದ್ದರು .5 ಡಿಜೆಗಳಲ್ಲಿ ಯುವಕರು ಕುಣಿದು ಕುಪ್ಪಳಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಮೆರವಣಿಗೆಯನ್ನು ವೀಕ್ಷಣೆ ಮಾಡಲು ಮಹಿಳೆಯರು ಮಕ್ಕಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಷ್ಟಗಿ: ಗೂಡಂಗಡಿಯಲ್ಲಿ ಕಳ್ಳತನ ಮಾಡಿದ್ದ ಕಳ್ಳನ ಬಂಧನ

ರಾಜ್ಯಾದ್ಯಂತ ಸಂಭ್ರಮದ 74ನೇ ಗಣರಾಜ್ಯೋತ್ಸವ ಆಚರಣೆ

ಕುಷ್ಟಗಿ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬೈಕ್; ಬಾಲಕ ದುರ್ಮರಣ

ಗಂಗಾವತಿ ಸೇರಿ ರಾಜ್ಯದ ಯಾವುದೇ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಫೈನಲ್ ಆಗಿಲ್ಲ: ಜೇಬಿ ಮಾಥರ್

ಮಳೆಯಿಂದ ಮನೆ ಕಳೆದುಕೊಂಡಿದ್ದ ವೃದ್ಧೆಗೆ ದಾನಿಗಳಿಂದಲೇ ನಿರ್ಮಾಣವಾಗುತ್ತಿದೆ ಸೂರು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
