ನಗರಸಭೆ ಮಾಜಿ ಅಧ್ಯಕ್ಷೆ ಹುಲಿಗೆಮ್ಮ ಕಾಮದೊಡ್ಡಿ ಮನೆಗೆ ಜನಾರ್ದನರೆಡ್ಡಿ ಭೇಟಿ… ಪಕ್ಷ ಸೇರ್ಪಡೆ
Team Udayavani, Jan 10, 2023, 5:09 PM IST
ಗಂಗಾವತಿ: ವಿವಿಧ ಪಕ್ಷದ ಮುಖಂಡರ ಮನೆಗಳಿಗೆ ಭೇಟಿ ನೀಡುವ ಕಾರ್ಯವನ್ನು ಮುಂದುವರಿಸಿದ್ದಾರೆ.
ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸಂಸ್ಥಾಪಕ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಮಂಗಳವಾರ ಬೆಳ್ಳಿಗ್ಗೆ ಗಂಗಾವತಿ ನಗರಸಭೆ ಮಾಜಿ ಅಧ್ಯಕ್ಷೆ ಹುಲಿಗೆಮ್ಮ ದೇವಪ್ಪ ಕಾಮದೊಡ್ಡಿ ನಿವಾಸಕ್ಕೆ ಭೇಟಿ ನೀಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಪಕ್ಷಕ್ಕೆ ಸೇರ್ಪಡೆಯಾಗಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ದಿವಂಗತ ದೇವಪ್ಪ ಕಾಮದೊಡ್ಡಿ ಜನಪರ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂಬರುವ ದಿನಗಳಲ್ಲಿ ಹುಲಿಗೆಮ್ಮ ಕಾಮದೊಡ್ಡಿ ಸೇರಿ ಎಸ್ಸಿ,ಎಸ್ಟಿ ಹಿಂದುಳಿದ ವರ್ಗಗಳ ಮುಖಂಡರು ಕಾರ್ಯಕರ್ತರು ಬೃಹತ್ ಸಮಾವೇಶದ ಮೂಲಕ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸೇರ್ಪಡೆಯಾಗಲಿದ್ದಾರೆ.
ಈ ಸಂದರ್ಭದಲ್ಲಿ ಮೇಘರಾಜ ಕಾಮದೊಡ್ಡಿ, ಮಲ್ಲಿಕಾರ್ಜುನ ಕಾಮದೊಡ್ಡಿ, ದೇವಪ್ಪ ಮಾಸ್ತರ್,ಹುಲುಗೇಶ ಹೊಸಪೇಟೆ,ಹುಸೇನಪ್ಪ ಗಾಂಧಿನಗರ, ಶ್ರೀ ಶೈಲ, ಜಿಲಾನಿಪಾಷಾ, ದಳಪತಿ, ಬಾಗವಾನ, ಹನುಮೇಶ ಸೇರಿ 27 ನೇ ವಾರ್ಡಿನ ಮುಖಂಡರಿದ್ದರು.
ಇದನ್ನೂ ಓದಿ: ಸ್ಯಾಂಟ್ರೋ ರವಿ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುವುದು ಬೇಡ: ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ