ಗವಿಶ್ರೀ ಸದ್ಭಾವನಾ ಪಾದಯಾತ್ರೆ

Team Udayavani, Nov 18, 2019, 2:48 PM IST

kopala-tdy-2

ಸಿದ್ದಾಪುರ: ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮೀಜಿ ಗ್ರಾಮದಲ್ಲಿ ರವಿವಾರ ಬೆಳಗ್ಗೆ ಮೂರನೇ ದಿನದ ಸದ್ಭಾವನಾ ಪಾದಯಾತ್ರೆ ಕೈಗೊಂಡರು. ಶ್ರೀಗಳು ಬಸ್‌ನಿಲ್ದಾಣದ ಬಳಿ ಆಗಮಿಸುತ್ತಿದ್ದಂತೆ ಪುಟಾಣಿ ಮಕ್ಕಳು ಶ್ರೀಗಳಿಗೆ ಹೂವುಗಳನ್ನು ನೀಡಿ ಸ್ವಾಗತಿಸಿದರು.

ಗ್ರಾಮದ ಗಂಗಾವತಿ-ರಾಯಚೂರು ಮುಖ್ಯರಸ್ತೆಯ ಬಸ್‌ನಿಲ್ದಾಣದಿಂದ ಆರಂಭಗೊಂಡಶ್ರೀಗಳ ಸದ್ಭಾವನಾ ಪಾದಯಾತ್ರೆ ಗ್ರಾಮದೇವತೆ ದುಗಲಮ್ಮದೇವಿ ದೇವಸ್ಥಾನ, ವೀರಭದ್ರೇಶ್ವರ ದೇವಸ್ಥಾನ, ಭೋವಿ ಓಣಿ, ಛಲವಾದಿ ಓಣಿ, ಹರಿಜನ ಕೆರಿ, ಕುರುಬರ ಓಣಿ, ವಿರುಪಯ್ಯತಾತನ ದೇವಸ್ಥಾನ, ಮರಕುಂಬಿ ವಿರುಪಣ್ಣ ರಸ್ತೆ, ಪಾಟೀಲ ಮತ್ತು ತಿಮ್ಮನಗೌಡ ರಸ್ತೆ, ಎದುರು ಬಸವಣ್ಣ ರಸ್ತೆ, ಗೂಳಿ ಬಸವೇಶ್ವರ ವೃತ್ತ, ಮಲ್ಲಿಕಾರ್ಜುನ ನಗರದ ಆಂಜನೇಯ ದೇವಸ್ಥಾನದ ಮೂಲಕ ಬಸವರಾಜ ಭಾವಿ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾದಯಾತ್ರೆಯನ್ನು ಸಮಾಪ್ತಿಗೊಳಿಸಿದರು.

ಸ್ಥಳೀಯರು ಶ್ರೀಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಮುಖ್ಯರಸ್ತೆಯ ತುಂಬಾ ಮತ್ತು ಮನೆಗಳ ಎದುರು ರಂಗೋಲಿ ಹಾಕಿ, ತೆಂಗಿನ ಗರಿ, ಬಾಳೆದಿಂಡು ಸೇರಿದಂತೆ ತಳಿರು ತೋರಣಗಳಿಂದ ಶೃಂಗರಿಸಿದ್ದರು. ಪಾದಯಾತ್ರೆಯಲ್ಲಿ ಬಳಗಾನೂರಿನ ಚಿಕೇನಕೊಪ್ಪ ಚನ್ನವೀರ ಶರಣರ ಮಠದ ಶಿವಶಾಂತವೀರ ಶರಣರ ವಚನಗಾಯನ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿತು.

ಸೌಹಾರ್ದತೆಗೆ ಸಾಕ್ಷಿ: ಸಿದ್ದಾಪುರ ಗ್ರಾಮದಲ್ಲಿ ಕೊಪ್ಪಳ ಶ್ರೀಗವಿಸಿದ್ದೇಶ್ವರ ಸ್ವಾಮಿಗಳು ನಡೆಸಿದ 3ನೇ ದಿನದ ಸದ್ಭಾವನ ಯಾತ್ರೆ ಹಿಂದೂ-ಮುಸ್ಲಿಮರ ಸೌಹಾರ್ದತೆಗೆ ಸಾಕ್ಷಿಯಾಯಿತು. ಗ್ರಾಮದ ಬಸ್‌ನಿಲ್ದಾಣದ ಬಳಿ ಅಪಾರಸಂಖ್ಯೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಬಾಂಧವರು ನೆರೆದಿದ್ದರು. ಮುಸ್ಲಿಂ ಸಮುದಾಯದವರು ಹಿಂದೂಗಳಿಗೆ ಟೋಪಿ ತೊಡಿಸಿದರೆ, ಹಿಂದೂಗಳು ಮುಸ್ಲಿಂ ಸಮುದಾಯದವರಿಗೆ ಕೊರಳಲ್ಲಿ ಲಿಂಗದವಸ್ತ್ರ ಹಾಕಿ ಶ್ರೀಗಳ ಸಂದೇಶ ಮತ್ತು ಆಶಯದಂತೆ ಸೌಹಾರ್ದತೆಮೆರೆದರು. ಶ್ರೀಗಳ ಸದ್ಭಾವನಾ ಪಾದಯಾತ್ರೆಗೆ ಆಗಮಿಸಿದ್ದ ಭಕ್ತರಿಗೆ ಶ್ರೀಗೂಳಿ ಬಸವೇಶ್ವರ ಸಮಿತಿ ಸದಸ್ಯರು ಬಾದಾಮಿ ಹಾಲಿನ ವ್ಯವಸ್ಥೆ ಮಾಡಿದ್ದರು. ಪಾದಯಾತ್ರೆ ವೇಳೆ ಗವಿ ಶ್ರೀಗಳು ವೃದ್ಧರು, ಮಹಿಳೆಯರು, ಮಕ್ಕಳನ್ನು ಆಶೀರ್ವದಿಸಿದರು.

ಪಾದಯಾತ್ರೆಯಲ್ಲಿ ಕಾರಟಗಿ, ಶ್ರೀರಾಮನಗರ, ಈಳಿಗನೂರು, ಉಳೇನೂರು, ಕೊಕ್ಲೃಕಲ್‌, ಬರಗೂರು, ಗುಂಡೂರು, ಕಕ್ಕರಗೋಳ, ನಂದಿಹಳ್ಳಿ, ಸಿಂಧನೂರು ತಾಲೂಕಿನ ಜಾಲಿಹಾಳ, ಸಿದ್ರಾಂಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು.

ಹೂವಿನಹಡಗಲಿಯ ಗವಿಸಿದ್ದೇಶ್ವರ ಶಾಖಾಮಠದ ಹಿರೇಶಾಂತವೀರ ಸ್ವಾಮೀಜಿ, ಗ್ರಾಮದ ಹಿರೇಮಠದ ಶಿವಕುಮಾರ ಸ್ವಾಮಿ, ಉಮೇಶ ತಾತ, ಜಿಪಂ ಅಧ್ಯಕ್ಷ ವಿಶ್ವನಾಥರೆಡ್ಡಿ ಹೊಸಮನಿ, ಕನಕಗಿರಿ ಶಾಸಕ ಬಸವರಾಜ ದಢೇಸುಗೂರು, ವಿಶೇಷ ಎಪಿಎಂಸಿ ಅಧ್ಯಕ್ಷ ಶರಣಪ್ಪ ಭಾವಿ, ಜಿಪಂ ಮಾಜಿ ಉಪಾಧ್ಯಕ್ಷ ಬಿ. ಬಸವರಾಜಪ್ಪ, ತಾಪಂ ಸದಸ್ಯ ಪ್ರಕಾಶ ಭಾವಿ, ತಾಪಂ ಮಾಜಿ ಸದಸ್ಯ ನೀರಗಂಟಿ ಬಸವರಾಜ, ಡಾ| ಕೆ.ಎನ್‌. ಪಾಟಿಲ, ಚನ್ನನಗೌಡ ಪೊಲೀಸ್‌ ಪಾಟೀಲ, ಶಿವಲಿಂಗಪ್ಪ ಮಿರಾಲಿ, ಎಂ.ಡಿ. ಸಿರಾಜ್‌, ಮಹೆಬೂಬ್‌ ಮುಲ್ಲಾ, ಚುನಾಯಿತ ಜನಪ್ರತಿನಿ ಧಿಗಳು, ವಿವಿಧ ಸಮಾಜದ ಮುಖಂಡರು, ಸ್ತ್ರೀಶಕ್ತಿ ಗುಂಪಿನ ಸದಸ್ಯೆಯರು, ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.