Udayavni Special

ಕಿಷ್ಕಿಂದಾ ಅಂಜನಾದ್ರಿಯಲ್ಲಿ ಸಾಮಾಜಿಕ ಅಂತರ ಮರೆತು ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು

Team Udayavani, Jul 10, 2021, 9:47 AM IST

ಕಿಷ್ಕಿಂದಾ ಅಂಜನಾದ್ರಿಯಲ್ಲಿ ಸಾಮಾಜಿಕ ಅಂತರ ಮರೆತು ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಗಂಗಾವತಿ: ಸರಕಾರ ಕೋವಿಡ್ ಲಾಕ್ ಡೌನ್ ಸಡಿಲಿಕೆ ಮಾಡಿದ ಕಾರಣ ತಾಲ್ಲೂಕಿನ ಕಿಷ್ಕಿಂದಾ ಅಂಜನಾದ್ರಿಯಲ್ಲಿ ಶನಿವಾರ ಬೆಳಿಗ್ಗೆ ಭಕ್ತರು  ಸಾಮಾಜಿಕ ಅಂತರ ಮರೆತು, ಮಾಸ್ಕ್ ಇಲ್ಲದೆ ದೇವರ ದರ್ಶನಕ್ಕೆ ಮುಗಿಬಿದ್ದ ದೃಶ್ಯ ಕಂಡು ಬಂತು.

ಕಳೆದ ಮಾರ್ಚ್ 23 ರಿಂದ ಅಂಜನಾದ್ರಿಯನ್ನು ಭಕ್ತರ ಪ್ರವೇಶಕ್ಕೆ ನಿಷೇಧಿಸಲಾಗಿತ್ತು .ಇಂದು ಶನಿವಾರವಾಗಿದ್ದರಿಂದ ತಾಲ್ಲೂಕು ಮತ್ತು ಬೇರೆ ಜಿಲ್ಲೆಗಳಿಂದ ಭಕ್ತರು ಅಂಜನಾದ್ರಿಗೆ ಆಗಮಿಸಿದ್ದರು. ನೂರಾರು ವಾಹನಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಅಂಜನಾದ್ರಿ ಬೆಟ್ಟವನ್ನು ಹತ್ತುವ ದೃಶ್ಯ ಕಂಡುಬಂತು. ಕೋವಿಡ್ ರೋಗದ ಹೆದರಿಕೆಯಿಲ್ಲದ ಜನರು ಸಾಮಾಜಿಕ ಅಂತರವನ್ನು ಕಾಪಾಡುವಲ್ಲಿ ವಿಫಲವಾಗಿದ್ದರು. ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ದೇಗುಲ ಸಮಿತಿಯವರು ಹಾಕಿರುವ ಪ್ರಕಟಣೆಯನ್ನು ಭಕ್ತರು ನಿರ್ಲಕ್ಷಿಸಿದ್ದಾರೆ.

ಇದನ್ನೂ ಓದಿ:ಪ್ರವಾಸಿ ತಾಣಗಳಲ್ಲಿ ಹೆಚ್ಚುತ್ತಿರುವ ಜನ, ನಿಯಮಗಳತ್ತ ನಿರ್ಲಕ್ಷ್ಯ : 3ನೇ ಅಲೆಗೆ ಆಹ್ವಾನ?

ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಕೆಳಗಿನಿಂದ ಮೇಲಿನ ದೇಗುಲದವರೆಗೂ ಭಕ್ತರು ಸಾಮಾಜಿಕ ಅಂತರ ಮರೆತು ಕ್ಯೂ ನಿಂತಿದ್ದರು. ಆಗಾಗ ದೇವಸ್ಥಾನದವರು ಕೋವಿಡ್ ಸಾಮಾಜಿಕ ಅಂತರ ಕಾಪಾಡುವಂತೆ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಧ್ವನಿವರ್ಧಕದ ಮೂಲಕ ನೀಡುತ್ತಿದ್ದ ಪ್ರಕಟಣೆಯನ್ನು ಭಕ್ತರು ಗಮನಿಸುತ್ತಿರಲಿಲ್ಲ.

ಮೊದಲಿನಂತೆ ತೆಂಗಿನಕಾಯಿ ವ್ಯಾಪಾರ, ಕೇಸರಿ ಟವಲ್ ಗಳ ವ್ಯಾಪಾರ, ಹೂವು ಹಣ್ಣು, ಕೂಲ್ ಡ್ರಿಂಕ್ಸ್ ಗಳ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ.ಬೆಟ್ಟದ ಕೆಳಗಿನ ವಾಹನಗಳ ಪಾರ್ಕಿಂಗ್ ತುಂಬಾ ವಾಹನಗಳ ನಿಂತಿದ್ದು ರಸ್ತೆಯುದ್ದಕ್ಕೂ ಸಹ ವಾಹನಗಳು ನಿಂತಿರುವ ದೃಶ್ಯ ಕಂಡುಬಂತು.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dasara festival

ವೈಭವದ ಹೇಮಗುಡ್ಡ ಅಂಬಾರಿ ಮೆರವಣಿಗೆ

hyjkhgfdsa

ಹಾಸ್ಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್  : ಕಂಪ್ಯೂಟರ್ ಭಸ್ಮ

koppala news

ಕೋರ್ಸ್‌ ಪುನಃ ಆರಂಭಿಸಲು ಒತ್ತಾಯ

gangavathi news

ರಾಜಕಾಲುವೆ ಮೇಲೆ ಮಳಿಗೆ ನಿರ್ಮಾಣ

koppala news

ಸಪ್ತಪದಿಗೆ ಜಿಲ್ಲಾಡಳಿತದಿಂದ ಬೇಕು ಮುದ್ರೆ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.