ಕಾರಟಗಿಯಲ್ಲಿ ಹೈಟೆಕ್‌ ಬಸ್‌ನಿಲ್ದಾಣ: ದಢೇಸುಗೂರು

Team Udayavani, Jan 28, 2021, 3:33 PM IST

Hi-tech bus station in Karatagi

ಕಾರಟಗಿ: ಪಟ್ಟಣದ ಆರ್‌.ಜಿ. ರಸ್ತೆಯ ಕನಕದಾಸ ವೃತ್ತದ ಬಳಿಯ ಹಳೇ ಪಶು ಚಿಕಿತ್ಸಾಲಯದ 30 ಗುಂಟೆ ಜಾಗದಲ್ಲಿ ಬೆಂಗಳೂರು ಮಹಾನಗರಿಯಲ್ಲಿನ ಮಾದರಿಯಲ್ಲೇ ಸುಸಜ್ಜಿತ ಹೈಟೆಕ್‌ ಬಸ್‌ ನಿಲ್ದಾಣ ನಿರ್ಮಿಸಲಾಗುವುದು ಎಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.

ಅವರು ಪಟ್ಟಣದ ಪೊಲೀಸ್‌ ವಸತಿ ಗೃಹಗಳ ಬಳಿ ಪಶುಪಾಲನಾ ಇಲಾಖೆಗೆ 2014-15ನೇ ಸಾಲಿನಲ್ಲಿ ಮಂಜೂರಾಗಿದ್ದ 14.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪಶು ಚಿಕಿತ್ಸಾಲಯವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಪಟ್ಟಣದ ಮಧ್ಯವರ್ತಿ ಸ್ಥಳದಲ್ಲಿ ಜಾಗೆ ಅಭಾವವಿದ್ದ ಕಾರಣ ಕಡಿಮೇ ಜಾಗದಲ್ಲೇ ಅತ್ಯುತ್ತಮ ಬಸ್‌ ನಿಲ್ದಾಣ ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಬಸ್‌ ನಿಲ್ದಾಣದ ನೀಲನಕ್ಷೆ ತಯಾರಿಕೂಡ ನಡೆದಿದೆ. ಬಸ್‌ ನಿಲ್ದಾಣ ನಿರ್ಮಿಸುವ ನಿಟ್ಟಿನಲ್ಲಿ ಇತ್ತೀಚಿಗೆ ಜನನಿಬೀಡ ಪ್ರದೇಶಗಳಲ್ಲಿನ  ಗೂಡಂಗಡಿಗಳನ್ನು ತೆರವುಗೊಳಿಸಲಾಗಿದೆ.

ಇದನ್ನೂ ಓದಿ:5 ಅಡಿ 7 ಅಂಗುಲಕ್ಕೆ ಶತದಿನದ ಸಂಭ್ರಮ

ಅಲ್ಲದೇ ಕಾರಟಗಿ ತಾಲೂಕು ಕೇಂದ್ರದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಮಿನಿ ವಿಧಾನಸೌಧ, ನೂತನ ಬಸ್‌ ನಿಲ್ದಾಣ, ಕೆರೆ ಅಭಿವೃದ್ಧಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ಧಪಡಿಸುತ್ತಿರುವ ನೀಲನಕ್ಷೆ ಕೆಲವೇ ದಿನಗಳಲ್ಲಿ ಅಂತಿಮಗೊಳ್ಳಲಿದೆ. ಕೆರೆ ಅಭಿವೃದ್ಧಿಗಾಗಿ ಜಿಲ್ಲಾ ಧಿಕಾರಿ ಸೇರಿ ವಿವಿಧ ಇಲಾಖೆ ಅಧಿ ಕಾರಿಗಳೊಂದಿಗೆ ಸಭೆ ನಡೆಸಿ ಜಾಗದ ಲಭ್ಯತೆ ಇನ್ನಿತರ ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಕರೆಯ ಸುತ್ತ ಜೌಗು ನೀರು ನಿಲ್ಲದಂತೆ 2 ಕೋಟಿ ರೂ. ವೆಚ್ಚದಲ್ಲಿ ಚರಂಡಿ ಕಾಮಗಾರಿಗೂ ಚಾಲನೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾರಟಗಿ ಅಭಿವೃದ್ಧಿ ಹೇಗಿರಬೇಕು ಎಂಬುದರ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದರು.

ಅಧಿಕಾರಿಗಳ ಮನವಿ: ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕರಾದ ಡಾ| ಮಹೇಂದ್ರ ಸುಬೇದಾರ್‌, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರಟಗಿ ತಾಲೂಕಾಧ್ಯಕ್ಷ ಸರ್ದಾರ್‌ ಅಲಿ ಕಾರಟಗಿ ಆಸ್ಪತ್ರೆ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದ್ದು, ಇಲ್ಲಿ ಒಟ್ಟು 12 ಜನ ಸಿಬ್ಬಂದಿ ಅವಶ್ಯಕತೆಯಿದ್ದು, ಒಬ್ಬರೂ ಕಾಯಂ ಸಿಬ್ಬಂದಿ ಇಲ್ಲದಿರುವ ಕುರಿತು ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಶರಣೇಶ ಸಾಲೋಣಿ, ಮುಖ್ಯಾ ಧಿಕಾರಿ ಡಾ| ಎನ್‌. ಶಿವಲಿಂಗಪ್ಪ, ಪಶು ವೈದ್ಯಾ ಧಿಕಾರಿ ಡಾ| ಆಕಾಶ್‌, ಪಶು ವೈದ್ಯಕೀಯ ಪರೀಕ್ಷಕ ಕನಕಪ್ಪ ಮುಖಂಡರಾದ ಚನ್ನಬಸಪ್ಪ ಸುಂಕದ್‌, ಶರಣಪ್ಪ ಗದ್ದಿ ಇತರರು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.