ಹಿಜಾಬ್‌ ಹೈ ತೀರ್ಪು: ಬಂದೋಬಸ್ತ್

ಶಾಲಾ ಕಾಲೇಜುಗಳಿಗೆ ಪೊಲೀಸ್‌ ಭದ್ರತೆ

Team Udayavani, Mar 16, 2022, 5:59 PM IST

15

ಕೊಪ್ಪಳ: ಹಿಜಾಬ್‌ ವಿಚಾರ ಕುರಿತಂತೆ ಹೈಕೋರ್ಟ್‌ ಅಂತಿಮ ತೀರ್ಪು ಪ್ರಕಟಿಸಿದ್ದು, ಜಿಲ್ಲಾದ್ಯಂತ ಶಾಂತಿಯುತ ವಾತಾವರಣ ಕಂಡು ಬಂದಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ವಿದ್ಯಾರ್ಥಿಗಳು ಎಂದಿನಂತೆ ಶಾಲಾ-ಕಾಲೇಜು ತರಗತಿಗಳಿಗೆ ತೆರಳಿ ಪಾಠ ಆಲಿಸಿದರು. ಆದರೂ ಪೊಲೀಸ್‌ ಇಲಾಖೆ ನಗರ ಪ್ರದೇಶದಲ್ಲಿನ ಕಾಲೇಜುಗಳಿಗೆ ಬಿಗಿ ಭದ್ರತೆ ಒದಗಿಸಿತ್ತು.

ಜಿಲ್ಲಾಡಳಿತವು ಹೈಕೋರ್ಟ್‌ ತೀರ್ಪು ಪ್ರಕಟಿಸುವ ಮುನ್ನವೇ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪ್ರದೇಶಗಳಲ್ಲಿ ಶಾಲಾ-ಕಾಲೇಜುಗಳಿಗೆ ಪೊಲೀಸ್‌ ಭದ್ರತೆ ಒದಗಿಸಿತ್ತು.

ಮಂಗಳವಾರ ಎಂದಿನಂತೆ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಿ ಪಾಠ, ಬೋಧನೆ ಆಲಿಸಿದರು. ನಗರ ಪ್ರದೇಶದ ಸರ್ಕಾರಿ ಕಾಲೇಜುಗಳಲ್ಲಿ ಕೆಲ ದಿನಗಳ ಹಿಂದೆ ಹಿಜಾಬ್‌ ವಿವಾದ ಸದ್ದು ಮಾಡಿತ್ತು. ಜಿಲ್ಲಾದ್ಯಂತ ನಗರ ಪ್ರದೇಶದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಿತ್ತು. ಹೈಕೋರ್ಟ್‌ ಆದೇಶ ಪಾಲನೆ ಮಾಡುತ್ತಿರುವ ಕುರಿತು ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆಯೂ ಒಂದು ಕೋಮಿನ ಜನ ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೇ, ತಳ್ಳಾಡಿದ ಘಟನೆಯೂ ಜರುಗಿತ್ತು. ಹಾಗಾಗಿ ಜಿಲ್ಲೆಯಲ್ಲಿನ ಕೆಲವೊಂದು ಕಾಲೇಜುಗಳನ್ನು ಅತಿ ಸೂಕ್ಷ್ಮವೆಂದು ಪರಿಗಣಿಸಿ ಅಂತಹ ಶಾಲೆ ಹಾಗೂ ಕಾಲೇಜುಗಳ ಮೇಲೆಯೂ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮೊದಲೇ ನಿಗಾ ವಹಿಸಿತ್ತು.

ಶಾಲಾ ಕಾಲೇಜುಗಳಿಗೆ ಬಿಗಿ ಭದ್ರತೆ: ಮಂಗಳವಾರ ನಗರ ಪ್ರದೇಶದ ಕಾಲೇಜುಗಳಿಗೆ ಬೆಳಗ್ಗೆಯಿಂದಲೇ ಭಾರಿ ಭದ್ರತೆ ಒದಗಿಸಲಾಗಿತ್ತು. ಮಹಿಳಾ ಪೇದೆ ಸೇರಿ ಹೆಚ್ಚುವರಿ ಪೊಲೀಸ್‌ ತುಕಡಿ, ವಾಹನಗಳನ್ನು ನಿಯೋಜಿಸಿತ್ತು. ಇಷ್ಟಾದರೂ ಕೆಲು ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ಬಂದಿದ್ದರು. ಇದಕ್ಕೆ ಯಾವುದೇ ಪ್ರತಿರೋಧವು ಕಾಣಲಿಲ್ಲ. ಎಂದಿನಂತೆ ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸಿ ತರಗತಿಗೆ ತೆರಳಿ ಪಾಠ ಆಲಿಸಿ ಮನೆಗಗಳತ್ತ ಮರಳಿದರು.

ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶಗಳಲ್ಲೇ ಹಿಜಾಬ್‌ ವಿಚಾರ ಭಾರಿ ಸದ್ದು ಮಾಡಿತ್ತು. ಇಲ್ಲಿವರೆಗೂ ಹೈಕೋಟ್‌ ìನ ಮಧ್ಯಂತರ ತೀರ್ಪು ಪಾಲನೆ ಜಾರಿಯಲ್ಲಿತ್ತು. ಪ್ರಸ್ತುತ ಅಂತಿಮ ತೀರ್ಪು ಪ್ರಕಟವಾಗಿದ್ದು, ಇಲಾಖೆಯಿಂದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳಲ್ಲಿ ಕೋರ್ಟ್‌ ಆದೇಶ ಪಾಲನೆಗೆ ವಿದ್ಯಾರ್ಥಿಗಳಿಗೆ ಸೂಚನೆ ನೀಡುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ, ಯಾವುದೇ ಅಹಿತಕರ ಘಟನೆಗಳು ಜಿಲ್ಲೆಯಲ್ಲಿ ನಡೆದಿಲ್ಲ ಎಂದು ಇಲಾಖೆ ಅ ಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೈಕೋರ್ಟ್‌ ತೀರ್ಪು ಪ್ರಕಟವಾದ ನಂತರ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೇ ಶಾಂತಿಯುತ ವಾತಾವರಣ ಕಂಡುಬಂತು.

 

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.