ತಪ್ಪಲಿಲ್ಲ ಹೂಳಿನ ಗೋಳು; ಭರವಸೆ ಹುಸಿ

•ಜಲಾಶಯ ಹೆಸರೇಳಿ ಗೆದ್ದವರು ಈಗ ಮೌನ•ಸಮನಾಂತರ ಡ್ಯಾಂ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧ

Team Udayavani, Jul 7, 2019, 10:44 AM IST

kopala-tdy-2..

ಗಂಗಾವತಿ: ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಹೂಳಿನ ಸಮಸ್ಯೆಯಿಂದ ಅಚ್ಚುಕಟ್ಟು ಪ್ರದೇಶದ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. 37 ಟಿಎಂಸಿ ಅಡಿ ಹೂಳಿರುವುದರಿಂದ ನೀರು ವ್ಯರ್ಥವಾಗಿ ಹರಿಯುತ್ತಿದೆ.

ಹೂಳಿನ ಹೆಸರಲ್ಲೇ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು 20 ವರ್ಷಗಳಿಂದ ರಾಜಕೀಯ ಮಾಡುತ್ತ ಅಧಿಕಾರ ಅನುಭವಿಸಿವೆ. ಆದರೆ ರೈತರ ನೆರವಿಗೆ ಮಾತ್ರ ಯಾವ ಪಕ್ಷಗಳು ಬಂದಿಲ್ಲ. ಕಳೆದ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಗಂಗಾವತಿಗೆ ಆಗಮಿಸಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತುಂಗಭದ್ರಾ ಜಲಾಶಯದ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭಾಷಣದಲ್ಲಿ ರೈತರಿಗೆ ಭರವಸೆ ನೀಡಿದ್ದರು. ಶುಕ್ರವಾರ ಮಂಡನೆಯಾದ ಕೇಂದ್ರ ಸರಕಾರದ ಬಜೆಟ್‌ನಲ್ಲಿ ತುಂಗಭದ್ರಾ ಜಲಾಶಯ ಹೂಳು ಮತ್ತು ನವಲಿ ಹತ್ತಿರ ನಿರ್ಮಾಣ ಉದ್ದೇಶದ ಸಮನಾಂತರ ಜಲಾಶಯ ಕುರಿತು ಯಾವುದೇ ಪ್ರಸ್ತಾಪವಿಲ್ಲ.

ಕಳೆದ ನಾಲ್ಕೈದು ವರ್ಷಗಳಿಂದ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದ ಜಲಾಶಯಕ್ಕೆ ನೀರು ಹರಿದು ಬರುವುದು ಕಡಿಮೆಯಾಗಿದೆ. ಕಳೆದ ವರ್ಷ ಮಾತ್ರ ಉತ್ತಮ ಮಳೆಯಾಗಿದ್ದು ಸುಮಾರು 250 ಟಿಎಂಸಿ ಅಡಿ ನೀರು ನದಿ ಮೂಲಕ ಸಮುದ್ರ ಸೇರಿದೆ. ಜಲಾಶಯ ಹೂಳು ತೆಗೆದಿದ್ದರೆ ಅಷ್ಟೂ ನೀರನ್ನು ಜಲಾಶಯದಲ್ಲಿ ಸಂಗ್ರಹಿಸಬಹುದಾಗಿತ್ತು. ಸಮನಾಂತರ ಜಲಾಶಯ ನಿರ್ಮಿಸಿದ್ದರೂ ನೀರನ್ನು ಸಂಗ್ರಹಿಸಿ ರೈತರಿಗೆ ಸಹಾಯ ಮಾಡಬಹುದಿತ್ತು. ತುಂಗಭದ್ರಾ ಜಲಾಶಯ ಮತ್ತು ನದಿಯಿಂದ ಮೇಲ್ಮಟ್ಟದ ಕೆರೆಗಳ ಭರ್ತಿ ಮಾಡುವ ಯೋಜನೆಯನ್ನು ಸರಕಾರ ಘೋಷಣೆ ಮಾಡಿದ್ದು ಮಳೆಗಾಲದಲ್ಲಿ ಜಲಾಶಯಕ್ಕೆ ಬರುವ ನೀರನ್ನು ಸಮನಾಂತರ ಜಲಾಶಯಗಳ ನಿರ್ಮಿಸಿ ಸಂಗ್ರಹಿಸುವ ಅಗತ್ಯವಿದೆ.

ತುಂಗಭದ್ರಾ ಜಲಾಶಯದ ಹಿನ್ನೀರು ಸುಮಾರು 84 ಸಾವಿರ ಎಕರೆ ಪ್ರದೇಶದಲ್ಲಿ ನಿಲುಗಡೆಯಾಗುತ್ತದೆ. ಅವೈಜ್ಞಾನಿಕ ಗಣಿಗಾರಿಕೆ ಮತ್ತು ಜಲಾಶಯದ ಮೇಲ್ಮಟ್ಟದಲ್ಲಿ ಅಕ್ರಮ ಮರಳು ದಂಧೆ ಪರಿಣಾಮ ಜಲಾಶಯದಲ್ಲಿ ಹೂಳು ತುಂಬಿದೆ. ಈಗಾಗಲೇ ಸರಕಾರ ಹೂಳು ತೆಗೆಸುವ ವಿಚಾರದಲ್ಲಿ ನೇಮಿಸಿದ್ದ ತಜ್ಞರ ಸಮಿತಿ ಹೂಳು ತೆಗೆಯುವುದು ಅವೈಜ್ಞಾನಿಕ, ಜಲಾಶಯ ಎತ್ತರಿಸಬೇಕು. ಮಳೆಗಾಲದಲ್ಲಿ ನೀರು ಸಂಗ್ರಹಿಸಲು ಜಲಾಶಯದ ಕೆಳಭಾಗದಲ್ಲಿ ಸಮನಾಂತರ ಜಲಾಶಯ ನಿರ್ಮಿಸುವಂತೆ ಶಿಫಾರಸು ಮಾಡಿದೆ.

ಹಿಂದಿನ ರಾಜ್ಯ ಸರಕಾರ ಕನಕಗಿರಿ ತಾಲೂಕಿನ ನವಲಿ ಹತ್ತಿರ ಸಮನಾಂತರ ಜಲಾಶಯ ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸಿದೆ. ಆಗಿನ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಹೈದ್ರಾಬಾದ್‌ಗೆ ತೆರಳಿ ತೆಲಂಗಾಣ ಮತ್ತು ಆಂಧ್ರಪ್ರದೇಶ ಸರಕಾರಗಳ ಜತೆ ಮಾತುಕತೆ ನಡೆಸಿ ಒಪ್ಪಿಗೆ ಪಡೆಯಲಾಗಿತ್ತು. ಕೇಂದ್ರ ಸರಕಾರ ಒಪ್ಪಿಗೆ ಅನುದಾನ ಅಗತ್ಯವಾಗಿದ್ದು ರಾಯಚೂರು-ಕೊಪ್ಪಳ ಸಂಸದರು ಈ ನಿಟ್ಟಿನಲ್ಲಿ ಕಾರ್ಯ ಮಾಡಬೇಕಿದೆ.

ಪೋಲಾವರಂ ಯೋಜನೆಯಂತೆ ತುಂಗಭದ್ರಾಕ್ಕೂ ನೀಡಬೇಕಿದೆ ನೆರವು:

ಅಖಂಡ ಅಂಧ್ರಪ್ರದೇಶ ರಾಜ್ಯದ ಅತೀ ಮಹತ್ವದ ಪೋಲಾವರಂ ಯೋಜನೆ ನಿರ್ಮಾಣಕ್ಕೆ ಕೇಂದ್ರ ಸರಕಾರ ವಿಶೇಷ ಅನುದಾನ ನೀಡುವ ಮೂಲಕ ಯೋಜನೆ ಪೂರ್ಣಗೊಳಿಸಲು ಸಹಕಾರ ನೀಡಿದಂತೆ ತುಂಗಭದ್ರಾ ಜಲಾಶಯದ ಸಮಸ್ಯೆ ಇತ್ಯರ್ಥ ಮತ್ತು ಸಮನಾಂತರ ಜಲಾಶಯ ನಿರ್ಮಾಣ, ಕೃಷ್ಣ ಪೆನ್ನಾರ್‌ ತುಂಗಭದ್ರಾ ನದಿ ಜೋಡಣೆ ಕಾಮಗಾರಿಯನ್ನು ಕೇಂದ್ರ ಸರಕಾರವೇ ನಿರ್ವಹಿಸಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರು ತುಂಗಭದ್ರಾ ಜಲಾಶಯ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮೋದಿ ಕಾರ್ಯಕ್ರಮ ರೂಪಿಸಲಿದ್ದು ಬಿಜೆಪಿ ಗೆಲುವು ಪಡೆದರೆ ದೆಹಲಿಗೆ ನಿಯೋಗ ತೆಗೆದುಕೊಂಡು ಹೋಗುವುದಾಗಿ ಭರವಸೆ ನೀಡಿದ್ದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನಲ್ಲಿ ತುಂಗಭದ್ರಾ ಯೋಜನೆಯ ಪ್ರಸ್ತಾಪವೇ ಇಲ್ಲ.
•ಕೆ. ನಿಂಗಜ್ಜ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.