ಸಿಬ್ಬಂದಿ ನಿರ್ಲಕ್ಷ್ಯ; ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ

Team Udayavani, Mar 3, 2021, 6:47 PM IST

ಸಿಬ್ಬಂದಿ ನಿರ್ಲಕ್ಷ್ಯ; ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ

ಕನಕಗಿರಿ: ಸ್ಥಳಿಯ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ನಿರ್ಲಕ್ಷ್ಯದಿಂದ ಹೆರಿಗೆಗೆ ಬಂದ ತುಂಬು ಗರ್ಭಿಣಿ ಮಹಿಳೆಗೆ ಆಸ್ಪತ್ರೆಮುಖ್ಯ ದ್ವಾರದಲ್ಲೇ ಹೆರಿಗೆ ಆಗಿರುವ ಮನಕಲಕುವ ಘಟನೆ ನಡೆದಿದೆ.

ತಾಲೂಕಿನ ಗೌರಿಪುರ ಗ್ರಾಮದ ಬೃಂದಾ ಶರಣಪ್ಪ ಎಂಬ ಮಹಿಳೆಪತಿಯ ಮನೆಯಿರುವ ಯಲಬುರ್ಗಾತಾಲೂಕಿನ ಗೆದಗೇರಿ ಜಾತ್ರೆಗೆಹೋಗಿದ್ದ ಸಂದರ್ಭದಲ್ಲಿ ಹೆರಿಗೆನೋವು ಕಾಣಿಸಿಕೊಂಡಿತು. ತುರ್ತು ಚಿಕಿತ್ಸಾ ವಾಹನ ಸಿಗದ ಕಾರಣಮಂಗಳವಾರ ಬೆಳಗಿನ ಜಾವ ಆಶಾಕಾರ್ಯಕರ್ತೆಯೊಂದಿಗೆ ಖಾಸಗಿವಾಹನ ಮೂಲಕ ಕನಕಗಿರಿ ಆಸ್ಪತ್ರೆಗೆಆಗಮಿಸಿದ್ದಾರೆ. ಕರ್ತವ್ಯದಲ್ಲಿದ್ದ ಸಿಬ್ಬಂದಿಗೆಹೆರಿಗೆ ಮಾಡಿಸುವಂತೆ ಕೇಳಿಕೊಂಡರೂಸಿಬ್ಬಂದಿ ಮಾತ್ರ ಆಸ್ಪತ್ರೆ ಬಾಗಿಲು ತೆರೆಯದೇ, ಯಾವುದೇ ತಪಾಸಣೆ ನಡಸದೆ ಇಲ್ಲಿ ಹೆರಿಗೆ ಮಾಡಿಸೋಕೆ ಆಗಲ್ಲ ಗಂಗಾವತಿಗೆ ಕರೆದುಕೊಂಡು ಹೋಗಿ ಎಂದು ಹೇಳಿದರು. ಆಗ ಗರ್ಭಿಣಿಯು ಹೆರಿಗೆ ನೋವು ತಾಳದೆ ನೋವಿನಿಂದ ಬಳಲುತ್ತಿರುವುದನ್ನು ಕಂಡು ಅಕ್ಕಪಕ್ಕದ ಮಹಿಳೆಯರು ಧಾವಿಸಿ ಸಾಮಾನ್ಯ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾದರು.

ಹೆಣ್ಣು ಮಗುವಿಗೆ ಜನ್ಮ ನೀಡಿ ಗಂಟೆ ಕಳೆದರೂ ಆಸ್ಪತ್ರೆ ಸಿಬ್ಬಂದಿ ಮಾತ್ರ ರಕ್ತದ ಮಡುವಿನಲ್ಲಿದ್ದ ಬಾಣಂತಿಯನ್ನುನೋಡಿಯೂ ನೋಡದಂತೆ ವರ್ತಿಸಿಅಮಾನವೀಯ ವರ್ತನೆ ತೋರಿದರು.

ವೈದ್ಯರು-ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ: ನಂತರ ಸುದ್ದಿ ತಿಳಿಯುತಿದ್ದಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ|ಅಲ್ಕಾನಂದ ಮಳಿಗೆಯವರು ಭೇಟಿ ನೀಡಿ ಈ ಘಟನೆ ನಡೆಯಬಾರದಿತ್ತು. ಇದರಿಂದ ಇಲಾಖೆ ತಲೆತಗ್ಗಿಸುವಂತಾಗಿದೆ. ಆರೋಗ್ಯ ಇಲಾಖೆ ದಿನದ 24ಗಂಟೆ ಕಾರ್ಯನಿರ್ವಹಿಸುತ್ತಿದೆ ಆದರೆ ಸ್ಥಳಿಯ ವೈದ್ಯರುಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.ಆಸ್ಪತ್ರೆ ಅವ್ಯಸ್ಥೆಯ ಆಗರವಾಗಿದ್ದು, ಕೆಲ ಜಿಡ್ಡುಗಟ್ಟಿದ ಸಿಬ್ಬಂದಿ  ವರ್ಗದವರನ್ನು ಬೇರೆಡೆ ವರ್ಗಾಯಿಸಿ ಸರಿ ಪಡಿಸಲಾಗುವುದು ಎಂದು ಹೇಳಿದರು.

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಭೇಟಿ: ಜಿಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿಸಮಿತಿ ಅಧ್ಯಕ್ಷೆ ಭಾಗ್ಯವತಿ ಬೋಲಾಮತ್ತು ಪಪಂ ಅಧ್ಯಕ್ಷ ರವೀಂದ್ರ ಸಜ್ಜನ್‌ ಭೇಟಿ ನೀಡಿ ಇಂತಹ ಅಮಾನವೀಯ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆವಹಿಸುವಂತೆ ಸೂಚಿಸಿದರು. ಕರ್ತವ್ಯಲೋಪ ಎಸಗಿದ ವೈದ್ಯ ಹಾಗೂ ಸಿಬ್ಬಂದಿವಿರುದ್ಧ ವಿವಿಧ ಸಂಘಟನೆಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ವೈದ್ಯ, ಸಿಬ್ಬಂದಿ ಅಮಾನತು :

ಕೊಪ್ಪಳ: ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗೇಟ್‌ನಲ್ಲೇ ಮಹಿಳೆಗೆ ಹೆರಿಗೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿರುವ ವೈದ್ಯ ಹಾಗೂ ಗುತ್ತಿಗೆ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಹಾಗೂ ಜಿಪಂ ಸಿಇಒ ರಘುನಂದನ್‌ ಮೂರ್ತಿ ಅವರು ಆದೇಶ ಮಾಡಿದ್ದಾರೆ.

ಜಿಲ್ಲೆಯ ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಬೆಳಗಿನ ಜಾವ 5:45ಕ್ಕೆ ಗೌರಿಪುರ ಗ್ರಾಮದ ಬೃಂದಾ ಶರಣಪ್ಪ ಎಂಬ ಮಹಿಳೆ ಹೆರಿಗಾಗಿ ಆಗಮಿಸಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದ್ದ ಡಾ| ನಾಗರಾಜ ಪಾಟೀಲ

ಆಸ್ಪತ್ರೆಯಲ್ಲಿರಲಿಲ್ಲ. ಕಾರ್ಯನಿರತ ಶುಶ್ರೂಷಕ ಬಸನಗೌಡವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು. ಪೋಷಕರು ಶುಶ್ರೂಷಕರನ್ನು ಕರೆದು ಹೆರಿಗೆಗಾಗಿ ಬಂದಿರುವುದಾಗಿ ತಿಳಿಸಿದರೂ ಯಾವುದೇ ರೀತಿಯ ಚಿಕಿತ್ಸೆ ನೀಡಿಲ್ಲ. ಗಂಡಾಂತರ ಹೆರಿಗೆಯಾಗಿದ್ದರೂ ಆಂಬ್ಯುಲೆನ್ಸ್‌ ಜೊತೆಗೆ ಮುಂದಿನ ಮೇಲ್ದರ್ಜೆಆಸ್ಪತ್ರೆಗೆ ರೆಫರ್‌ ಮಾಡದೇ ನಿರ್ಲಕ್ಷ ವಹಿಸಿದ್ದಾರೆ. ನಂತರ 7:05ಕ್ಕೆ ಆಸ್ಪತ್ರೆಯಮುಖ್ಯದ್ವಾರದ ಎದುರಿಗೆ ಮಹಿಳೆಗೆ ಹೆರಿಗೆಯಾಗಿದೆ. ಡಿಎಚ್‌ಒ ಕನಕಗಿರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ, ಕರ್ತವ್ಯಲೋಪ ಎಸಗಿದವರ ಮೇಲೆ ಶಿಸ್ತು ಕ್ರಮ ಜರುಗಿಸಲು ವರದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ನಿರ್ಲಕ್ಷತೆ ಮತ್ತು ಕರ್ತವ್ಯಲೋಪ ಎಸಗಿದ ಡಾ| ನಾಗರಾಜ ಪಾಟೀಲ ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದರೆ, ಗುತ್ತಿಗೆ ಸಿಬ್ಬಂದಿ ಬಸನಗೌಡ ಅವರನ್ನು ಜಿಪಂ ಸಿಇಒ ರಘುನಂದನ್‌ ಮೂರ್ತಿ ಅಮಾನತು ಮಾಡಿ ಆದೇಶ ಮಾಡಿದ್ದಾರೆ.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…

Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.