ಗೂಡ್ಸ್‌ ವಾಹನದಲ್ಲಿ ಮಾನವ ಸಾಗಾಟ ಅಪರಾಧ


Team Udayavani, May 10, 2019, 2:58 PM IST

kopala-tdy-3..

ಕೊಪ್ಪಳ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸುನೀಲ್ ಕುಮಾರ ಮಾತನಾಡಿದರು.

ಕೊಪ್ಪಳ: ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರ ಸಂಚಾರ ಅಪರಾಧವಾಗಿದ್ದು, ಯಾವುದೇ ಕಾರಣಕ್ಕೂ ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರು ಸೇರಿದಂತೆ ಶಾಲಾ ಮಕ್ಕಳು, ಕಾರ್ಮಿಕರು ಸಂಚರಿಸುವಂತ್ತಿಲ್ಲ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್‌ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೊರಿಯಂ ಹಾಲ್ನಲ್ಲಿ ಕಾರ್ಮಿಕ ಇಲಾಖೆಯಿಂದ ಆಯೋಜಿಸಿದ್ದ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಪ್ರಕರಣ ಕುರಿತಂತೆ ಜರುಗಿದ ಕಾರ್ಮಿಕ ವರ್ಗದ ಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಾಹನಗಳ ಮಾಲೀಕರು ಸೇರಿದಂತೆ ಪೊಲೀಸ್‌, ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು.

ಹೈಕೋರ್ಟ್‌ ಆದೇಶದಂತೆ ಮುಂದಿನ ತಿಂಗಳು ಕಾರ್ಮಿಕರ ಹಿತಾಸಕ್ತಿ ಕಾಪಾಡುವ ಕುರಿತು ಕ್ರಿಯಾಯೋಜನೆ ಸಲ್ಲಿಸಲಾಗುತ್ತಿದೆ. ಕ್ರಿಯಾಯೋಜನೆಯಲ್ಲಿ ಕಾರ್ಮಿಕರಿಗೆ ಉದ್ಯೋಗದಾತ ಕಾರ್ಖಾನೆ, ಕಂಪನಿ ಹಾಗೂ ಶಾಲಾ-ಕಾಲೇಜುಗಳಿಗೆ ಪ್ರತ್ಯೇಕವಾಗಿ ಜನಜಾಗೃತಿ ಮತ್ತು ತಿಳಿವಳಿಕೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್‌, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಕೆಎಸ್‌ಆರ್‌ಟಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ನಂತರವೂ ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರು, ಶಾಲಾ ಮಕ್ಕಳು ಮತ್ತು ಕಾರ್ಮಿಕರನ್ನು ಕರೆದುಕೊಂಡು ಹೋದಲ್ಲಿ ಕಾನೂನು ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಎಚ್ಚರಿಸಿದರು.

ಸರಕು ಸಾಗಾಣಿಕೆ ವಾಹನದಲ್ಲಿ ಯಾವುದೇ ಕಾರಣಕ್ಕೂ ಕಾರ್ಮಿಕರನ್ನು, ಶಾಲಾ ಮಕ್ಕಳನ್ನು ಸಾಗಾಣಿಕೆ ಮಾಡುವಂತಿಲ್ಲ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಅವರ ಮನೆಯಿಂದ ಕರೆತಂದು ಶಾಲೆಯಿಂದ ಮರಳಿ ಅವರ ಮನೆಗೆ ತಲುಪಿಸುವಂತೆ ಮಾಡುವುದು ಆಯಾ ಶಾಲಾ ಆಡಳಿತ ಮಂಡಳಿ ಜವಾಬ್ದಾರಿಯಾಗಿದೆ. ನಿಯಮ ಮೀರಿ ಮಕ್ಕಳನ್ನು ಸಾಗಿಸುವ ವಾಹನ ಹಾಗೂ ಸರಕು ಸಾಗಾಣಿಕೆ ವಾಹನದಲ್ಲಿ ಕಾರ್ಮಿಕರನ್ನು ಒಯ್ಯುವುದು ಅಪರಾಧವಾಗಿದೆ. ಆದ್ದರಿಂದ ಎಲ್ಲ ಉದ್ಯೋಗದಾತರು ಕಾರ್ಮಿಕರ, ಶಾಲಾ ಮಕ್ಕಳ ಸುರಕ್ಷತೆ, ಕ್ಷೇಮದ ಬಗ್ಗೆ ಮುಂಜಾಗ್ರತೆ ವಹಿಸಿ, ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ನೂರಮಹಮ್ಮದ ಬಾಷಾ ಮಾತನಾಡಿ, ಸರಕು ಸಾಗಾಣಿಕೆ ವಾಹನಗಳಲ್ಲಿ ವಸ್ತುಗಳನ್ನು ಹೊರತುಪಡಿಸಿ ಯಾವುದೇ ತರಹದ ಪ್ರಯಾಣಿಕರನ್ನು ಕೊಂಡೊಯ್ಯಲು ಕಾನೂನಿನಲ್ಲಿ ಅವಕಾಶವಿಲ್ಲ. ಒಂದು ವೇಳೆ ಆಕಸ್ಮಿಕವಾಗಿ ಅಪಘಾತಗಳು ಸಂಭವಿಸಿದರೆ ಪ್ರಯಾಣಿಕರಿದ್ದಲ್ಲಿ ಕಾನೂನಾತ್ಮಕ ತೊಡಕುಗಳು ಉಂಟಾಗುತ್ತವೆ. ಯಾವುದೇ ತರಹದ ಪರಿಹಾರ ಪಡೆಯಲು ಅವಕಾಶವಿಲ್ಲ. ಅಂತಹ ಸದರ್ಭಗಳಲ್ಲಿ ಬಹುತೇಕ ವಾಹನ ಮಾಲೀಕರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ.

ಸರಕು ಸಾಗಾಣಿಕೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು, ಧಾರ್ಮಿಕ ಸ್ಥಳಗಳಿಗೆ ಹಾಗೂ ಕಾರ್ಖಾನೆಗಳಿಗೆ ಕಾರ್ಮಿಕರನ್ನು ಕರೆದುಕೊಂಡು ಹೋಗುವ ಅನೇಕ ವಾಹನಗಳನ್ನು ತಪಾಸಣೆ ಮಾಡಿ ಪ್ರಕರಣಗಳನ್ನು ಸಹ ದಾಖಲಿಸಿ ದಂಡವನ್ನು ಹಾಕಲಾಗಿದೆ ಎಂದರು.

ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಾಹನಗಳ ಮೇಲೆ 54 ಪ್ರಕರಣಗಳನ್ನು ದಾಖಲಿಸಿ ಒಂದು ಲಕ್ಷ ದಂಡ ಹಾಕಲಾಗಿದೆ. ಇದಲ್ಲದೇ ವಾಹನಗಳಿಗೆ ನೀಡಿರುವ ಪರವಾನಗಿ ರದ್ದು ಪಡಿಸುವ ಅವಕಾಶವಿದ್ದು ಇದನ್ನು ಮುಂದಿನ ದಿನಗಳಲ್ಲಿ ಜಾರಿ ಮಾಡಲಾಗುತ್ತದೆ ಎಂದರು.

ಜಿಪಂ ಸಿಇಒ ಆರ್‌.ಎಸ್‌. ಪೆದ್ದಯ್ಯ, ಎಡಿಸಿ ಬಾಲಚಂದ್ರ, ಎಸಿ ಸಿ.ಡಿ. ಗೀತಾ, ಡಿಡಿಪಿಐ ಅಮಿತಾ ಯರಗೋಳ್ಕರ್‌, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಫಯಾಜ್‌, ಡಿಟಿಒ ಬಿರಾದಾರ, ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ರಾಘವೇಂದ್ರ ಪಾನಘಂಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.