ಮರಂ ಮಣ್ಣು ಅಕ್ರಮ ಸಾಗಾಟ

Team Udayavani, Aug 5, 2019, 10:43 AM IST

kopala-tdy-4

ಕುಷ್ಟಗಿ: ತಾಲೂಕಿನ ಕೆ. ಬೋದೂರು ಗ್ರಾಮ ವ್ಯಾಪ್ತಿಯ ಪಟ್ಟಾ ಜಮೀನಿನಲ್ಲಿ ಮರಂ ಮಣ್ಣು ಅಕ್ರಮ ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಆದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಾಲೂಕಾಡಳಿತ ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿದೆ.

ತಾಲೂಕಿನ ವ್ಯಾಪ್ತಿಯಲ್ಲಿ ಮರಂ ಮಣ್ಣಿಗೆ ಬೇಡಿಕೆ ಇದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ತಾಲೂಕು ಆಡಳಿತದ ಪರವಾನಗಿ ಇಲ್ಲದೇ ರಾಜಕೀಯ ಪ್ರಭಾವ ಬಳಸಿ ಮರಂ ಮಣ್ಣನ್ನು ಸಾಗಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವುದು ಸವಾಲಾಗಿದೆ.

ಕುಷ್ಟಗಿ-ಇಲಕಲ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕೆ. ಬೋದೂರು ವ್ಯಾಪ್ತಿಯ ರೈತರೊಬ್ಬರ ಜಮೀನಿನಲ್ಲಿ ಮರಂ ಮಣ್ಣು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಪಟ್ಟಾ ಜಮೀನಿನಲ್ಲಿ ಮರಂ ಮಣ್ಣು ಸಾಗಿಸಲು ತಾಲೂಕಾಡಳಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪರವಾನಗಿ ಇಲ್ಲ, ಸಾಗಿಸುವಂತಿಲ್ಲ. ಆದರೆ ಈ ಪ್ರದೇಶದಲ್ಲಿ ಹಿಟಾಟಿ, ಜೆಸಿಬಿ ಟಿಪ್ಪರ್‌ಗಳು ಸದ್ದು ಮಾಡುತ್ತಿವೆ.

ನಿತ್ಯ ಮೂರ್‍ನಾಲ್ಕು ಟಿಪ್ಪರ್‌ ಮಣ್ಣು ಸಾಗಿಸಲಾಗುತ್ತಿದೆ. ತಾಲೂಕಾಡಳಿತ, ಪೊಲೀಸ್‌ ಇಲಾಖೆ ಮೌನವಹಿಸಿರುವುದು ಅಚ್ಚರಿ ಹುಟ್ಟಿಸಿದೆ. ಮರಂ ಮಣ್ಣನ್ನು ಸಾಗಿಸುವ ಟಿಪ್ಪರ್‌ಗಳಿಗೆ ನಂಬರ್‌ ಪ್ಲೇಟ್ ಇಲ್ಲದಿರುವುದು ಮಣ್ಣನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎನ್ನುವುದು ಪುಷ್ಟೀಕರಿಸಿದೆ. ತಾಲೂಕಿನ ವ್ಯಾಪ್ತಿಯಲ್ಲಿ ಹೆದ್ದಾರಿ ಫ್ಲೈಓವರ್‌, ಗದಗ-ವಾಡಿ ರೈಲು ಮಾರ್ಗದ ಕಾಮಗಾರಿಗೆ ಮರಂ ಮಣ್ಣನ್ನು ಪರವಾನಿಗಿ ಪಡೆದು ಸಾಗಿಸಲಾಗುತ್ತಿದೆ. ಆದರೆ ಈ ಪ್ರದೇಶದಲ್ಲಿ ಸದ್ಯ ಐದಾರು ಎಕರೆ ಪ್ರದೇಶದಲ್ಲಿ ಮರಂ ಮಣ್ಣು ಖಾಲಿಯಾಗಿದ್ದರೂ, ತಾಲೂಕಾಡಳಿತ ಗಮನ ಹರಿಸಿಲ್ಲ.

ಮರಂ ಮಣ್ಣು ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿಲ್ಲ. ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿ ಕಳುಹಿಸಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ಸದರಿ ಪ್ರದೇಶದಲ್ಲಿ ಮರಂ ಮಣ್ಣು ಸಾಗಾಣಿಕೆ ಸಾಗಿಸಲು ಅಧಿಕೃತ ಪರವಾನಗಿ ಪಡೆದಿಲ್ಲ. ಅಕ್ರಮವಾಗಿ ಸಾಗಿಸುತ್ತಿರುವ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸ್‌ ಇಲಾಖೆಗೆ ಸೂಚಿಸಲಾಗುವುದು. ಒಂದು ವೇಳೆ ಕ್ರಮ ಕೈಗೊಳ್ಳಲು ವಿಳಂಬವಾದರೆ ಕೋರ್ಟ್‌ ಮೂಲಕ ನೋಟಿಸ್‌ ಜಾರಿ ಮಾಡಲಾಗುವುದು.•ಕೆ.ಎಂ. ಗುರುಬಸವರಾಜ್‌, ತಹಶೀಲ್ದಾರ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.