ಸೂರ್ಯಕಾಂತಿ ಬಿತ್ತನೆ ಬೀಜಕ್ಕೆ ಹೆಚ್ಚಿದ ಬೇಡಿಕೆ

ನಿಗದಿಗಿಂತ ಹೆಚ್ಚಿನ ಬೆಲೆಗೆ ಮಾರಾಟ

Team Udayavani, May 5, 2022, 10:34 AM IST

7

ಕುಷ್ಟಗಿ: ಅಡುಗೆ ಎಣ್ಣೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಕಳೆದ ವರ್ಷದಿಂದ ಸೂರ್ಯಕಾಂತಿ ಬಿತ್ತನೆ ಬೀಜಕ್ಕೆ ಬೇಡಿಕೆ ಈ ವರ್ಷವೂ ಮುಂದುವರಿದಿದೆ. ಹಿನ್ನೆಲೆಯಲ್ಲಿ ಸೂರ್ಯಕಾಂತಿ ಬಿತ್ತನೆ ಬೀಜವನ್ನು ಅಂಗಡಿಯವರು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ.

ವಾರದ ಹಿಂದೆ ತಾಲೂಕಿನಾದ್ಯಂತ ಭರಣಿ ಮಳೆ ತಕ್ಕಮಟ್ಟಿಗೆ ಸುರಿದಿದೆ. ಮಳೆ ನಿರೀಕ್ಷೆಯಲ್ಲಿರುವ ರೈತರು, ಸೂರ್ಯಕಾಂತಿ ಬಿತ್ತನೆಗೆ ಹೆಚ್ಚು ಉತ್ಸುಕರಾಗಿದ್ದಾರೆ. ಈಗಾಗಲೇ ಕುಷ್ಟಗಿ ಸೇರಿದಂತೆ ಹೋಬಳಿ ಪ್ರದೇಶಗಳ ಕೃಷಿ ಪರಿಕರ ಅಂಗಡಿಗಳಿಗೆ ಎಡತಾಕುತ್ತಿದ್ದಾರೆ. ಸ್ಯಾಂಡೋಜ್‌ 3 ಸಾವಿರ ರೂ., ಗಂಗಾ ಕಾವೇರಿ 2,400 ರೂ,, ಯುಪಿಎಲ್‌ (ಅಡ್ವಾಂಟಾ), ಸಂಕ್ರಾಂತಿ, ಜ್ವಾಲಾ, ಚಾಂಪ ಹೀಗೆ ಮೊದಲಾದ ಸೂರ್ಯಕಾಂತಿ ಬಿತ್ತನೆ ಬೀಜಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ.

ಪ್ರತಿ ಸೂರ್ಯಕಾಂತಿ ಪ್ಯಾಕೆಟ್‌ಗೆ ನಿಗದಿತ ಬೆಲೆಗಿಂತ 100ರಿಂದ 150 ರೂ. ಹೆಚ್ಚುವರಿಯಾಗಿ ಪಡೆಯುತ್ತಿದ್ದಾರೆ ಎನ್ನುವುದು ರೈತರ ಆರೋಪವಾಗಿದೆ. ಕೆಲವು ಬೇಡಿಕೆಯಲ್ಲಿರುವ ಬೀಜ ಕಂಪನಿಗಳ ಸೂರ್ಯಕಾಂತಿ ಬಿತ್ತನೆ ಬೀಜಕ್ಕೆ ಯದ್ವಾತದ್ವ ಬೆಲೆ ಹೆಚ್ಚಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಮುಂದಿನ ಮಳೆಗೆ ಸೂರ್ಯಕಾಂತಿ ಬಿತ್ತನೆ ಮಾಡಲು ಸಿದ್ಧತೆಯಲ್ಲಿದ್ದಾರೆ. ಹೀಗಾಗಿ ಸರ್ಕಾರ ರೈತ ಸಂಪರ್ಕಗಳಿಂದ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ಪೂರೈಸಬೇಕು ಎನ್ನುವುದು ರೈತರ ವಾದವಾಗಿದೆ.

ಕೃಷಿ ಪರಿಕರ ಅಂಗಡಿಯವರು ಹೆಚ್ಚಿನ ಬೆಲೆಗೆ ಬೀಜ ಮಾರುತ್ತಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ಅವರು, ಕೃಷಿ ಪರಿಕರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ದರಕ್ಕೆ ಮಾರಾಟ ಮಾಡಬೇಡಿ, ಸೂರ್ಯಕಾಂತಿ ಬೀಜ ದಾಸ್ತಾನು ಇದ್ದರೂ ಇಲ್ಲ ಎಂದು ಹೇಳಬೇಡಿ ಎಂದು ತಾಕೀತು ಮಾಡಿದ್ದಾರೆ.

ಸೂರ್ಯಕಾಂತಿ ಉತ್ಪನ್ನಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚಿನ ದರ ಇದೆ. ಹೀಗಾಗಿ ರೈತರು ಸೂರ್ಯಕಾಂತಿ ಬೀಜ ಬಿತ್ತನೆಗೆ ಮುಂದಾಗಿದ್ದಾರೆ. ನಮ್ಮ ಭಾಗದಲ್ಲಿ ಗಂಗಾ ಕಾವೇರಿ ಬೀಜ ಬಿತ್ತನೆ ಮಾಡುತ್ತಾರೆ. ಆಯಾ ಕಂಪನಿಯ ಎಂಆರ್‌ಪಿ ದರಗಳಲ್ಲಿ ವ್ಯತ್ಯಾಸವಿದೆ. ಹೆಚ್ಚುವರಿ ದರದಲ್ಲಿ ಬಿತ್ತನೆ ಬೀಜ ಮಾರಾಟದ ಬಗ್ಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಕೃಷಿ ಪರಿಕರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ಒಂದು ವೇಳೆ ಹೆಚ್ಚಿನ ದರದಲ್ಲಿ ಬಿತ್ತನೆ ಬೀಜ ಮಾರಾಟದ ಬಗ್ಗೆ ರೈತರಿಂದ ದೂರು ಬಂದರೆ ಪರಿಗಣಿಸಿ ಕ್ರಮವಹಿಸುತ್ತೇವೆ. ರಾಘವೇಂದ್ರ ಕೊಂಡಗುರಿ, ಕೃಷಿ ಅಧಿಕಾರಿ

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.