ಇಲಾಖೆಯಲ್ಲಿ ಅಕ್ರಮ ನಡೆದರೆ ಪರಿಶೀಲನೆ

Team Udayavani, Sep 11, 2019, 11:07 AM IST

ಕೊಪ್ಪಳ: ಕೋಳೂರು ಸಮೀಪದ ಬ್ರಿಜ್‌ ಕಂ ಬ್ಯಾರೇಜ್‌ ಅನ್ನು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಪರಿಶೀಲಿಸಿದರು.

ಕೊಪ್ಪಳ: ಸಣ್ಣ ನೀರಾವರಿ ಇಲಾಖೆಯಲ್ಲಿ ಅಕ್ರಮ ನಡೆದ ಬಗ್ಗೆ ತನಿಖೆ ನಡೆದಿದೆ. ಈಗಷ್ಟೆ ನಾನು ಅಧಿಕಾರ ವಹಿಸಿಕೊಂಡಿದ್ದೇನೆ. ಇಲಾಖೆಯಲ್ಲಿ ಏನೇನಾಗಿದೆ ಎಂದು ಪರಿಶೀಲನೆ ಮಾಡಬೇಕಿದೆ. ಅಕ್ರಮದ ತನಿಖೆ ಸಿಬಿಐಗೆ ಕೊಡಬೇಕೆಂದರೆ ವಿವಿಧ ಇಲಾಖೆಗಳ ಅಭಿಪ್ರಾಯ ಪಡೆಯಬೇಕು ಎಂದು ಕಾನೂನು, ಸಂಸದೀಯ ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಮಾಧುಸ್ವಾಮಿ ಅವರು ಹೇಳಿದರು.

ತಾಲೂಕಿನ ಕೋಳೂರು ಸಮೀಪದ ಸೇತುವೆಯಲ್ಲಿ ನೀರು ಸಂಗ್ರಹಣೆ ಪರಿಶೀಲನೆ ಮಾಡಿ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಈ ಹಿಂದೆ ಸಣ್ಣ ನೀರಾವರಿ ಇಲಾಖೆ ಸಚಿವರಾಗಿದ್ದ ಶಿವರಾಜ ತಂಗಡಗಿ ಅವರು ಅಕ್ರಮದಲ್ಲಿ ತೊಡಗಿದ್ದಾರೆ. ಕೋಟ್ಯಂತರ ರೂ. ಲೂಟಿಯ ಕುರಿತು ತನಿಖೆ ನಡೆಯುತ್ತಿದೆ. ಈ ಬಗ್ಗೆ ವಿವಿಧ ಇಲಾಖೆಗಳ ಅಭಿಪ್ರಾಯ ಪಡೆಯದೇ ಸಿಬಿಐಗೆ ಕೊಡಲು ಬರುವುದಿಲ್ಲ. ಎಲ್ಲವನ್ನು ವಿಚಾರಣೆ ಮಾಡಬೇಕು ಎಂದರು.

ಇನ್ನೂ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ. ಸಭೆಗೆ ಹಾಜರಾಗುತ್ತಿಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ಮೇಲೆ ಯಾವುದೇ ಅಧಿಕಾರಿ ಸಭೆಗೆ ಹಾಜರಾಗದಿದ್ದರೆ, ಸಮರ್ಪಕ ಮಾಹಿತಿ ನೀಡದಿದ್ದರೆ ಡಿಸಿ ನಮಗೆ ಅಂತಹ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವಂತೆ ವರದಿ ಮಾಡಿದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ್‌, ಪರಣ್ಣ ಮುನವಳ್ಳಿ, ಕಾಂಗ್ರೆಸ್‌ ಶಾಸಕ ರಾಘವೇಂದ್ರ ಹಿಟ್ನಾಳ ಸೇರಿದಂತೆ ಇತರರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ