ರಸ್ತೆ ದುರಸ್ತಿಗೆ ಒತ್ತಾಯಿಸಿ ಕನ್ನಡ ಸೇನೆ ಪ್ರತಿಭಟನೆ

Team Udayavani, Oct 1, 2019, 3:00 PM IST

ಗಂಗಾವತಿ: ತಾಲೂಕಿನ ಶ್ರೀ ರಾಮನಗರದಿಂದ ಕೋಟಯ್ಯ ಕ್ಯಾಂಪ್‌ ಮೂಲಕ ಕನಕಗಿರಿ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದಾಗಿ ಹದಗೆಟ್ಟಿದ್ದು, ಹಲವು ದಿನಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಕನ್ನಡ ಸೇನೆ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ನಿಂತು ಶಾಸಕರು, ಸಂಸದರವಿರುದ್ಧ ಘೋಷಣೆ ಕೂಗಿದರು. ಸಂಘಟನೆಯ ಮುಖಂಡ ಭಾಸ್ಕರರೆಡ್ಡಿ ಮಾತನಾಡಿ, ಈ ರಸ್ತೆ ಶ್ರೀ ರಾಮನಗರ ಮತ್ತು ಕನಕಗಿರಿಗೆ ಸಂಪರ್ಕ ಕಲ್ಪಿಸುತ್ತದೆ. ಹಲವು ವರ್ಷಗಳಿಂದ ಹದಗೆಟ್ಟ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಿಸಬೇಕು. ಈ ರಸ್ತೆಯಲ್ಲಿ ಸರಕಾರಿ ಆಸ್ಪತ್ರೆ, ಶಾಲಾ-ಕಾಲೇಜು ಹಾಗೂ ಹತ್ತು ಹಲವು ಹಳ್ಳಿಗಳಿದ್ದು ಜನ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ