ಕೊಪ್ಪಳ: ಅನಿಷ್ಠ ದೇವದಾಸಿ ಪದ್ಧತಿ ತೊಲಗಿಸಿ: ಅರವಿಂದ ಸುತಗುಂಡಿ

21ನೇ ಶತಮಾನದಲ್ಲಿಯಾದರೂ ಶಾಂತಿ ನೆಮ್ಮದಿ ಪರಸ್ಪರ ಸೌಹಾರ್ದತೆಯಿಂದ ಇರಬೇಕಿದೆ.

Team Udayavani, May 15, 2023, 6:18 PM IST

ಕೊಪ್ಪಳ: ಅನಿಷ್ಠ ದೇವದಾಸಿ ಪದ್ಧತಿ ತೊಲಗಿಸಿ: ಅರವಿಂದ ಸುತಗುಂಡಿ

ಕೊಪ್ಪಳ: ದೇವರ ಹೆಸರಲ್ಲಿ ಮಕ್ಕಳು ಹಾಗೂ ಮಹಿಳೆಯರನ್ನು ಬಲಿ ತೆಗೆದುಕೊಳ್ಳುವ ಈ ಅನಿಷ್ಟ ದೇವದಾಸಿ ಪದ್ಧತಿಯು
ನಿರ್ಮೂಲನೆಯಾಗಬೇಕು ಎಂದು ಹುಲಿಗೆಮ್ಮ ದೇವಿ ದೇವಸ್ಥಾನದ ಸಿಇಒ ಅರವಿಂದ ಸುತಗುಂಡಿ ಅವರು ಹೇಳಿದರು.

ಸುಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವದ ವೇಳೆ ಮಕ್ಕಳ ಮತ್ತು  ಮಹಿಳೆಯರ ಸುರಕ್ಷತಾ ಜಾಗೃತಿ ಮತ್ತು
ಸಮಾಜದ ಅನಿಷ್ಠ ದೇವದಾಸಿ ಪದ್ಧತಿ ಕುರಿತು ಶನಿವಾರದಿಂದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇವರ ಹೆಸರಿನಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಬಲಿ ತೆಗೆದುಕೊಳ್ಳುವ ದೇವದಾಸಿ ಪದ್ಧತಿಯಂತ ಅಂಧ ಆಚರಣೆಗಳು ಮಕ್ಕಳ ಮತ್ತು ಮಹಿಳೆಯರ ಮೇಲೆ ದುಷ್ಟರಿಣಾಮವನ್ನುಂಟು ಮಾಡುತ್ತದೆ. ಬಾಲ್ಯವಿವಾಹ ಪದ್ಧತಿ ನಿಲ್ಲಬೇಕು. ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ತಿಳಿಸಿದರು.

ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಪೂರ್ಣಿಮಾ ಯೋಳಬಾವಿ ಮಾತನಾಡಿ, ಅನೇಕ ಶತ ಶತಮಾನಗಳಿಂದಲೂ ಅನಕ್ಷರತೆ, ಮೂಢನಂಬಿಕೆ, ಪರಸ್ಪರ ಶೋಷಣೆ, ದೌರ್ಜನ್ಯಗಳಿಂದ ಬಳಲಿದ ಸಮಾಜವು 21ನೇ ಶತಮಾನದಲ್ಲಿಯಾದರೂ ಶಾಂತಿ ನೆಮ್ಮದಿ ಪರಸ್ಪರ ಸೌಹಾರ್ದತೆಯಿಂದ ಇರಬೇಕಿದೆ.

ಈ ನಿಟ್ಟಿನಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ಶೋಷಣೆ ದೌರ್ಜನ್ಯಗಳನ್ನು ತಡೆಗಟ್ಟಲು ಸಾಮಾಜಿಕ ಜಾಗೃತಿ ಕಹಳೆಯನ್ನು ಮೊಳಗಿಸೋಣ. ದೇವಿಯ ಜಗಹೊತ್ತು ಬರುವ ಜೋಗಮ್ಮ, ಜೋಗಪ್ಪಗಳಿಗೆ ಭಿಕ್ಷೆ ಅಥವಾ ಜೋಗ ನೀಡುವುದನ್ನು ನಿಲ್ಲಿಸಬೇಕು ಹಾಗೂ ಅವರಿಗೆ ಬದುಕಲು ತಿಳಿವಳಿಕೆ ನೀಡಬೇಕೆಂದು ತಿಳಿಸಿದರು.

ಸಖಿ-ಒನ್‌ ಸ್ಟಾಪ್‌ ಸೆಂಟರ್‌ ಆಡಳಿತಾಧಿಕಾರಿ ಯಮುನಾ ಬೇಸ್ತಾರ ಮಾತನಾಡಿ, ಮೈಯಲ್ಲಿ ದೇವರು ಬಂದಂತೆ ಆಡುವವರಿಗೆ, ಮಾನಸಿಕ ಸನ್ನಿ ಬರುವಂತವರಿಗೆ ಮನೋವೈದ್ಯ ತಜ್ಞರಿಂದ ಚಿಕ್ಸಿತೆ ಮಾಡಿಸುವುದು ಅತೀ ಅಗತ್ಯವಿದೆ. ಈ ನಿಟ್ಟಿನಲ್ಲಿ ಇಂತಹ ಯಾವುದೇ ರೀತಿಯ ಜನರು ಕಂಡು ಬಂದರೆ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿರುವ ತುರ್ತು ಚಿಕಿತ್ಸಾ ಘಟಕ-ಉಚಿತ ಸಲಹಾ ಕೇಂದ್ರ ಸಖೀ-ಒನ್‌ ಸ್ಟಾಪ್‌ ಸೆಂಟರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೇವದಾಸಿ ಪುನರ್ವಸತಿ ಯೋಜನೆ ಘಟಕಕ್ಕೆ ತಿಳಿಸಬೇಕೆಂದು ಮಾಹಿತಿ ನೀಡಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಅನಿಷ್ಠ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲು ಆಟೋ ಪ್ರಚಾರ ಮಾಡಲಾಯಿತು. ಮಾಹಿತಿ ಕೇಂದ್ರದ ಮೂಲಕ ಹಾಗೂ ಕರ ಪತ್ರಗಳನ್ನು ವಿತರಿಸುವುದರ ಮೂಲಕ ಜಾಗೃತಿ ಮೂಡಿಸಲಾಯಿತು.

ಕೊಪ್ಪಳದ ದೇವದಾಸಿ ಪುನರ್ವಸತಿ ಯೋಜನಾ ಧಿಕಾರಿ ದಾದೇಸಾಬ್‌ ಎಚ್‌., ಸಕ್ಕುಬಾಯಿ ಎಸ್‌.ಎಚ್‌., ಗಂಗಾವತಿ ತಾಲೂಕಿನ
ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಭೀಮಣ್ಣ ಟಿ.ಜಿ., ಯಲಬುರ್ಗಾ ತಾಲೂಕಿನ ದೇವದಾಸಿ ಪುನರ್ವಸತಿ ಯೋಜನಾ ಧಿಕಾರಿ ರೇಣುಕಾ ಎಂ. ಕುಷ್ಟಗಿ, ತಾಲೂಕಿನ ದೇವದಾಸಿ ಪುನರ್ವಸತಿ ಯೋಜನಾ ಧಿಕಾರಿ ಮರಿಯಪ್ಪ ಎಂ. ಮತ್ತು ದೇವದಾಸಿ ಯೋಜನೆಯ ಸ್ವಯಂ ಸೇವಕರು ಹಾಗೂ ಸಖೀ ಒನ್‌ ಸ್ಟಾಪ್‌ ಸೆಂಟರ್‌ ಮಲ್ಟಿಪರ್ಪಸ್‌ ವರ್ಕರ್‌ ಸರೋಜಾ ಹಿರೇಮಠ ಅವರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.