ಕೊಪ್ಪಳ: ವೈದ್ಯರ ನಿರ್ಲ್ಯಕ್ಷದಿಂದ ಗರ್ಭಿಣಿ ಸಾವು

Team Udayavani, Dec 1, 2019, 3:24 PM IST

ಕೊಪ್ಪಳ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ ಸಾವನ್ನಪಿದ ಘಟನೆ ರವಿವಾರ ನಡೆದಿದೆ.

ಮೃತ ಗರ್ಭಿಣಿಯನ್ನು ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಕೊಗಳಿ ತಾಂಡಾದ ಜ್ಯೋತಿ ಬಾಯಿ ನಾಯ್ಕ್ (26) ಎಂದು ಗುರುತಿಸಲಾಗಿದೆ.

ಜ್ಯೋತಿಬಾಯಿ ಕುಟುಂಬ ಕೊಪ್ಪಳ ತಾಲೂಕಿನ ಗಿಣಗೇರಿಯಲ್ಲಿ ದುಡಿಮೆ ಮಾಡಿಕೊಂಡು ಜೀವನ ನಡೆಸುತ್ತಿತ್ತು. ರವಿವಾರ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದರು. ಆದರೆ ರಕ್ತದ ಕೊರತೆ ಇದೆ ಎಂದು ಒಂದು ಗಂಟೆ ಬಳಿಕ ಗರ್ಭಿಣಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳುತ್ತಿದ್ದಾರೆ. ಆದರೆ ದಾಖಲಾತಿಯಲ್ಲಿ ಹೆಚ್ ಬಿ 11.06 ಇದೆ. ಇದನ್ನು 2.06 ಎಂದು ವೈದ್ಯರು ತಿದ್ದಿದ್ದು, ತಮ್ಮ ತಪ್ಪು ಮುಚ್ಚಿಕೊಳ್ಳಲು ರಕ್ತದ ಕೊರತೆಯಿದೆ ಎಂದು ಹೇಳುತ್ತಿದ್ದಾರೆ. ವೈದ್ಯರು ಸಕಾಲಕ್ಕೆ ಆಸ್ಪತ್ರೆಗೆ ಬಂದು ಚಿಕಿತ್ಸೆ ನೀಡದ ಕಾರಣಕ್ಕೆ ಗರ್ಭಿಣಿ ಮೃತಪಟ್ಡಿದ್ದಾಳೆ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದರು. ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಆಕ್ರೋಶ ವ್ಯಕ್ತಪಡಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ