ಪಿಪಿಇ ಕಿಟ್ ಧರಿಸಿ ಕೊಪ್ಪಳ ಕೋವಿಡ್ ಆಸ್ಪತ್ರೆಯ ಚಿಕಿತ್ಸಾ ವಿಧಾನ ಪರಿಶೀಲಿಸಿದ ಜಿಲ್ಲಾಧಿಕಾರಿ
Koppala dc, PPE Kit, Covid hospital
Team Udayavani, Sep 16, 2020, 9:33 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ ಹಾಗೂ ಸಾವಿನ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಂಜೆ ಡಿಸಿ ಸುರಳ್ಕರ್ ವಿಕಾಸ್ ಕಿಶೋರ್ ಪಿಪಿ ಕಿಟ್ ಧರಿಸಿ ತೆರಳಿ ರೋಗಿಗಳಿಗೆ ಚಿಕಿತ್ಸೆ ನೀಡುವ ಕುರಿತು ಪರಿಶೀಲನೆ ಮಾಡಿದರು.
ರೋಗಿಗಳ ವಾರ್ಡ್ ಗಳಿಗೆ ಭೇಟಿ ನೀಡಿದ ಅವರು, ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ.ಚಿಕಿತ್ಸಾ ವಿಧಾನ ಹೇಗೆ ನಡೆದಿದೆ ಎನ್ನುವ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಿಮ್ಸ್ ನಿರ್ದೇಶಕ ಡಾ. ವೈಜನಾಥ ಇಟಗಿ, ಪ್ರಭಾರಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪ್ರಕಾಶ ಕಬ್ಬರಗಿ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.