ಮಧ್ಯಾಹ್ನದ ಬಿಸಿ ಊಟಕ್ಕಾಗಿ ಒಂದು ಕಿಲೋಮೀಟರ್ ನಡೆದು ಹೋಗುವ ಮಕ್ಕಳು!

Team Udayavani, Oct 26, 2021, 3:20 PM IST

koppala news

ದೋಟಿಹಾಳ: ಶಾಲೆಯಲ್ಲಿ ಬಿಸಿ ಊಟ ಇಲ್ಲ. ಹೀಗಾಗಿ ಮಧ್ಯಾಹ್ನದ ಬಿಸಿ ಊಟಕ್ಕಾಗಿ ಸುಮಾರು ಒಂದು ಕಿಲೋಮೀಟರ್ ನಡೆದುಕೊಂಡು ಗ್ರಾಮದಲ್ಲಿ ಇರುವ ಪ್ರಾಥಮಿಕ ಶಾಲೆಗೆ ಹೋಗಬೇಕು. ಇದು ಕ್ಯಾದಿಗುಪ್ಪ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮಕ್ಕಳ ಸ್ಥಿತಿ.

ಈ ಪ್ರೌಢ ಶಾಲೆ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳಿಂದ ಬಳಲುತ್ತಿದೆ. ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಕೊಟಿಗಟ್ಟಲೇ ಹಣ ಖರ್ಚು ಮಾಡುತ್ತಿದೆ. ಆದರೆ ಅದು ಸರಿಯಾದ ರೀತಿಯಲ್ಲಿ ಉಪಯೋಗವಾಗುತ್ತಿಲ್ಲ.

ಕಳೆದ 18 ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಅ:21ರಿಂದ ಪುನಃ ಆರಂಭವಾಗಿದೆ. ಆದರೆ ಈ ಪ್ರೌಢ ಶಾಲೆಯ ಮಕ್ಕಳಿಗೆ ಮಾತ್ರ ಸರಿಯಾದ ಸಮಯಕ್ಕೆ ಊಟ ಸಿಗುತ್ತಿಲ್ಲ.

ಈ ಶಾಲೆಯಲ್ಲಿ ಒಟ್ಟು 133 ವಿದ್ಯಾರ್ಥಿಗಳಿದ್ದಾರೆ. ಮಕ್ಕಳು ಮಧ್ಯಾಹ್ನದ ಬಿಸಿ ಊಟ ಮಾಡಬೇಕಾದರೆ ಸುಮಾರು ಒಂದು ಕಿಲೋಮೀಟರ್ ನಡೆದುಕೊಂಡು ಹೋಗಿ ಗ್ರಾಮದಲ್ಲಿರುವ ಪ್ರಾಥಮಿಕ ಶಾಲೆಗೆ ಹೋಗಬೇಕು.

ಬಿಸಿ ಊಟ ಆರಂಭವಾಗಿ ಒಂದು ವಾರ ಕಳೆದರೂ ಈ ಮಕ್ಕಳಿಗೆ ತಮ್ಮ ಶಾಲೆಯಲ್ಲಿ ಬಿಸಿಯೂಟ ಸಿಗುತ್ತಿಲ್ಲ, ಊಟಕ್ಕಾಗಿ ಮಕ್ಕಳು ರಸ್ತೆಯಲ್ಲಿ ನಡೆದುಕೊಂಡೇ ಹೋಗಬೇಕಾಗಿದೆ. ಅಲ್ಲದೆ ಈ ರಸ್ತೆ ರಾಜ್ಯ ಹೆದ್ದಾರಿಯಾಗಿರುವುದರಿಂದ ರಸ್ತೆಯಲ್ಲಿ ವಾಹನಗಳು ದಟ್ಟಣೆಯೂ ಹೆಚ್ಚಾಗಿದೆ.  ಹೀಗಾಗಿ ಈ ಶಾಲೆಯ ಕೆಲವು ಮಕ್ಕಳು ಊಟಕ್ಕೆ ಹೋಗಿ ಬರಲು ಹಿಂದೇಟು ಹಾಕುತ್ತಿದ್ದಾರೆ.

ಮಕ್ಕಳು ಬಿಸಿಯೂಟದ ತೊಂದರೆಯಿಂದಾಗಿ ಬೆಳಿಗ್ಗೆ ಮಾತ್ರ ಪ್ರೌಢ ಶಾಲೆಯ ಹೊಸ ಕಟ್ಟಡದಲ್ಲಿ ತರಗತಿಗಳು ನಡೆಯುತ್ತಿವೆ. ಮಧ್ಯಾಹ್ನ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಊಟ ಮಾಡಿದ ಮೇಲೆ ಮತ್ತೆ ಪ್ರೌಢ ಶಾಲೆಗೆ  ಹೋಗಲು ತೊಂದರೆಯಾಗುವ ಕಾರಣ ಪ್ರಾಥಮಿಕ ಶಾಲೆಯ ಕೊಠಡಿಗಳಲ್ಲಿ ಮಧ್ಯಾಹ್ನದ ತರಗತಿಗಳನ್ನು ನಡೆಸುತ್ತಿದ್ದೇವೆ.
ನಮ್ಮ ಶಾಲೆಗೆ ಮಧ್ಯಾಹ್ನದ ಬಿಸಿ ಊಟದ ಸಿಬ್ಬಂದಿಗಳು ಇಲ್ಲ ಮತ್ತು ಅಡಿಗೆ ಸಾಮಾಗ್ರಿಗಳು ಇಲ್ಲ. ಹೀಗಾಗಿ ಮಕ್ಕಳು ಪ್ರಾಥಮಿಕ ಶಾಲೆಗೆ ಬಂದು ಊಟ ಮಾಡುತ್ತಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಸಿನ್ನೂರ ಅವರು ಹೇಳಿದ್ದಾರೆ.

ನಮ್ಮ ಗ್ರಾಮದ ಪ್ರೌಢ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟಕ್ಕಾಗಿ 1ಕೀ.ಮೀ ನಡೆದುಕೊಂಡು ಗ್ರಾಮಕ್ಕೆ ಬಂದು ಹೋಗಲು ತೊಂದರೆಯಾಗುತ್ತದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಪಂ ಸದಸ್ಯ ಶೇಖರಪ್ಪ ಉಪ್ಪಾರ ಒತ್ತಾಯಿಸಿದ್ದಾರೆ.

ಕ್ಯಾದಿಗುಪ್ಪ ಗ್ರಾಮದ ಪ್ರೌಢ ಶಾಲೆಯಲ್ಲಿ ಬಿಸಿಯೂಟ ಸಿಬ್ಬಂದಿಗಳು ಇಲ್ಲ. ಈ ಮೊದಲು ಈ ಶಾಲೆಯ ಮಕ್ಕಳು ಪ್ರಾಥಮಿಕ ಶಾಲೆಯಲ್ಲಿ ಊಟ ಮಾಡುತ್ತಿದ್ದರು. ಹೀಗ ಶಾಲೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡ ಕಾರಣ ಮಕ್ಕಳಿಗೆ ಬಿಸಿ ಊಟದ ತೊಂದರೆಯಾಗಿದೆ. ಕೂಡಲೇ ಶಾಲೆಗೆ ಅಡುಗೆದಾರರನ್ನು ನೇಮಕ ಮಾಡಲಾಗುತ್ತದೆ. ಮಕ್ಕಳ ಹಿತ ರಕ್ಷಣೆಗಾಗಿ ಸದ್ಯ ಯಾವುದಾದರೂ ಒಂದು ಕ್ರಮ ಕೈಗೊಳ್ಳುತ್ತೇವೆ.

 ಕೆ.ಶರಣಪ್ಪ, ತಾಲೂಕ ಅಕ್ಷರದಾಸೋಹ ಅಧಿಕಾರಿ ಕುಷ್ಟಗಿ.

ಮಲ್ಲಿಕಾರ್ಜುನ ಮೆದಿಕೇರಿ.

ಟಾಪ್ ನ್ಯೂಸ್

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gangavati crime

ನಿಯಮ ಉಲ್ಲಂಘನೆ : ಬೀಜ ಸಂಸ್ಕರಣಾ ಘಟಕಗಳಿಗೆ ಅಧಿಕಾರಿಗಳಿಂದ ನೋಟೀಸ್

Untitled-2

ಕಿಷ್ಕಿಂದಾ ಅಂಜನಾದ್ರಿ ಕಾಣಿಕೆ ಹುಂಡಿ ಎಣಿಕೆ:  23.50 ಲಕ್ಷ ರೂ. ಸಂಗ್ರಹ

ಸ್ಥಳೀಯ ಸಂಸ್ಥೆ ಶಕ್ತಿ ಕುಂದಿಸುತ್ತಿದೆ ಬಿಜೆಪಿ ಸರ್ಕಾರ: ಅನ್ಸಾರಿ

ಸ್ಥಳೀಯ ಸಂಸ್ಥೆ ಶಕ್ತಿ ಕುಂದಿಸುತ್ತಿದೆ ಬಿಜೆಪಿ ಸರ್ಕಾರ: ಅನ್ಸಾರಿ

20rajakaluve

ರಾಜಕಾಲುವೆಗೆ ಅತಿಕ್ರಮ ಕಾಂಪೌಂಡ್ ಗೋಡೆ ತೆರವುಗೊಳಿಸಲು ಮನವಿ

5banahatti

ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.